Government of Karnataka ವಿಧಾನ ಚುನಾವಣೆಯಲ್ಲಿ ಅಭೂತಪೂರ್ವ ಗೆಲವು ಸಾಧಿಸಿದ ಕಾಂಗ್ರೆಸ್ ಪಕ್ಷ ಇಂದು ಪೂರ್ಣ ಪ್ರಮಾಣದ ರಾಜ್ಯಭಾರ ಆರಂಭಿಸಿದೆ.
ಬೆಂಗಳೂರಿನ ರಾಜ ಭವನದಲ್ಲಿ ನೂತನ ಸಚಿವರಿಗೆ ಥಾವರ್ ಚಂದ್ ಗೆಹ್ಲೋಟ್ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಕಳೆದ ವಾರವಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಗಳಾಗಿ ಡಿಕೆ ಶಿವಕುಮಾರ್, ಇನ್ನು 10 ಸದಸ್ಯರ ಪದಗ್ರಹಣದೊಂದಿಗೆ ನೂತನ ಕಾಂಗ್ರೆಸ್ ಸರ್ಕಾರ ರಚನೆಯಾಗಿತ್ತು.
ಮೂರು ದಿನಗಳ ಅಧಿವೇಶನ ಮುಗಿಸಿಕೊಂಡು ದೆಹಲಿಗೆ ತೆರಳಿದ್ದ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಗಳು ಪಕ್ಷದ ವರಿಷ್ಟರೊಂದಿಗೆ ಸಮಾಲೋಚಿಸಿ ನೂತನ ಸಚಿವರ ಪಟ್ಟಿಯೊಂದಿಗೆ ಬೆಂಗಳೂರಿಗೆ ಮರಳಿದ್ದಾರೆ.
ಹಲವು ಸುತ್ತಿನ ಸಭೆಗಳ ನಂತರ ಸಂಪುಟದ ಎಲ್ಲಾ 24 ಸ್ಥಾನಗಳನ್ನ ಭರ್ತಿ ಮಾಡಲು ತೀರ್ಮಾನಿಸಲಾಗಿದೆ.
ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ಸಿದ್ಧಪಡಿಸಿದ ಪಟ್ಟಿಯನ್ನು ಸಮೀಕರಿಸಿ ನೂತನ ಸಚಿವರ ಪಟ್ಟಿ ಸಿದ್ಧಪಡಿಸಲಾಗಿದೆ. ಸಿದ್ದು ಸಂಪುಟದ ಹೊಸ ಸೈನ್ಯ ಈಗ ಸಿದ್ಧವಾಗಿದೆ. 24 ನೂತನ ಸಚಿವರ ಪಟ್ಟಿ ಹೀಗಿದೆ…
Government of Karnataka ಹೆಚ್. ಕೆ .ಪಾಟೀಲ್, ಕೃಷ್ಣ ಬೈರೇಗೌಡ, ಚೆಲುವರಾಯಸ್ವಾಮಿ, ಕೆ. ವೆಂಕಟೇಶ್, ಹೆಚ್.ಸಿ. ಮಹದೇವಪ್ಪ, ಈಶ್ವರ್ ಖಂಡ್ರೆ, ಕೆ .ಎನ್. ರಾಜಣ್ಣ, ದಿನೇಶ್ ಗುಂಡೂರಾವ್, ಶರಣಬಸಪ್ಪ ದರ್ಶನಾಪುರ, ಶಿವಾನಂದ ಪಾಟೀಲ್, ಆರ್. ಬಿ. ತಿಮ್ಮಾಪುರ, ಎಸ್. ಎಸ್. ಮಲ್ಲಿಕಾರ್ಜುನ, ಶಿವರಾಜ್ ತಂಗಡಗಿ, ಡಾ. ಶರಣ್ ಪ್ರಕಾಶ್ ಪಾಟೀಲ್, ಮಂಕಾಳ ವೈದ್ಯ, ಲಕ್ಷ್ಮಿ ಹೆಬ್ಬಾಳ್ಕರ್, ರಹೀಂ ಖಾನ್, ಡಿ. ಸುಧಾಕರ್, ಸಂತೋಷ್ ಲಾಡ್, ಎನ್. ಎಸ್ ಬೋಸರಾಜ, ಬೈರತಿ ಸುರೇಶ್, ಮಧು ಬಂಗಾರಪ್ಪ, ಡಾ.ಎಂ.ಸಿ. ಸುಧಾಕರ್, ಬಿ. ನಾಗೇಂದ್ರ ಈ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಿದರು.
ಮಧು ಬಂಗಾರಪ್ಪ ಅವರನ್ನ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ
ಸಚಿವರನ್ನಾಗಿ ಸಂಪುಟಕ್ಕೆ ಸೇರಿಸಿಕೊಳ್ಳಲಾಗಿದೆ.