Sunday, August 2, 2026
Sunday, August 2, 2026

Alone Protest ಮೈಮೆಲೆ ಗಂಜಲ ಹುಯ್ದುಕೊಂಡು ಗ್ರಾಮ ಪಂಚಾಯತ್ ಅಧ್ಯಕ್ಷರ ಖಡಕ್ ಪ್ರತಿಭಟನೆ

Date:

Alone Protest ಹೊಸನಗರ ತಾಲೂಕಿನ ಗ್ರಾಮೀಣ ಪ್ರದೇಶದ ಅನೇಕ ಕಡೆ ಕಳೆದ ಒಂದೂವರೆ ತಿಂಗಳಿನಿಂದ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ. ಆದರೆ, ಸರ್ಕಾರದಿಂದ ಇದಕ್ಕಾಗಿ ಯಾವುದೇ ಹಣ ಬಿಡುಗಡೆಯಾಗಿಲ್ಲ. ಅಧಿಕಾರಿಗಳಿಗೆ ಜನ ಪರ ಕಾಳಜಿ ಇಲ್ಲ ಎಂದು ಹೊಸನಗರದ ಮೂಡುಗೊಪ್ಪ ಗ್ರಾ. ಪಂ. ಅಧ್ಯಕ್ಷ ಕರುಣಾಕರ ಶೆಟ್ಟಿ ಅವರು ತಾ. ಪಂ. ಕಚೇರಿ ಎದುರು ಗೋಮೂತ್ರ, ಸಗಣಿ ನೀರು ಮೈಮೇಲೆ ಸುರಿದುಕೊಂಡು ಏಕಾಂಗಿ ಪ್ರತಿಭಟನೆ ನಡೆಸಿದ್ದಾರೆ.

ಈಗಾಗಲೇ ತಾವು ಜಿಲ್ಲಾ ಪಂಚಾಯತ್ ಸಿಇಒ, ತಹಶೀಲ್ದಾರ್, ಉಪವಿಭಾಗಾಧಿಕಾರಿಗಳ ಗಮನ ಸೆಳೆದಿದ್ದೇನೆ. ಕಳೆದ ಒಂದುವರೆ ತಿಂಗಳಿನಿಂದ ನೀರಿಲ್ಲದೆ ಹಾಹಾಕಾರ ಉಂಟಾಗಿದೆ. ಜನರು ಸ್ಥಳೀಯ ಗ್ರಾಮ ಪಂಚಾಯಿತಿಗೆ ಹಿಡಿ ಶಾಪ ಹಾಕುತ್ತಿದ್ದಾರೆ. ಇಲಾಖೆ ಸೂಚನೆ ಮೇರೆಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಆದರೆ, ಇದಕ್ಕೆ ಅಗತ್ಯ ಅನುದಾನ ಗ್ರಾಮ ಪಂಚಾಯಿತಿಯಲ್ಲಿಲ್ಲ. ವಿಶೇಷ ಅನುದಾನ ಬಿಡುಗಡೆ ಮಾಡಬೇಕಾಗಿರುವ ಅಧಿಕಾರಿಗಳು ಇನ್ನಿಲ್ಲದ ಸಬೂಬು ಹೇಳುತ್ತಿದ್ದಾರೆ ಎಂದು ತಮ್ಮ ಆಕ್ರೋಶವನ್ನು ಹೊರಹಾಕಿದರು.

Alone Protest ಬರಗಾಲದ ಛಾಯೆ ಕಾಣಿಸಿಕೊಂಡಿದೆ. ಟಾಸ್ಕ್ ಫೋರ್ಸ್ ಮೀಟಿಂಗ್ನಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಿದರೆ ಪ್ರತೀ ತಾಲೂಕಿಗೆ 15 ಲಕ್ಷ ರೂಪಾಯಿ ಅನುದಾನ ಬಿಡುಗಡೆ ಮಾಡುವುದಾಗಿ ಪಿಡಿಒಗಳಿಗೆ ತಿಳಿಸಲಾಗಿತ್ತು. ಆದರೆ, ಅಧಿಕಾರಿಗಳು ಮಾತು ತಪ್ಪಿದ್ದಾರೆ. ಜನಸಾಮಾನ್ಯರಿಂದ ಬೈಸಿಕೊಂಡು ಬೇಸರವಾಗಿದೆ. ಮೊದಲು ನಾವು ಶುದ್ಧ ಆಗಬೇಕಾದ ಪರಿಸ್ಥಿತಿ ಬಂದಿದೆ. ಆದ್ದರಿಂದ, ಗೋಮೂತ್ರ, ಸಗಣಿ ನೀರು ಮೈಮೇಲೆ ಹಾಕಿಕೊಂಡು ಪ್ರತಿಭಟನೆ ಮಾಡಬೇಕಾದ ಪರಿಸ್ಥಿತಿ ಇದೆ ಎಂದು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...