Monday, December 15, 2025
Monday, December 15, 2025

NSS Camp ವಿಟಗೊಂಡನಕೊಪ್ಪದಲ್ಲಿ ಎನ್ ಎಸ್ಎಸ್ ಶಿಬಿರ

Date:

NSS Camp ವಿಟಗೊಂಡನಕೊಪ್ಪದಲ್ಲಿ ಎನ್ ಎಸ್ಎಸ್ ಶಿಬಿರ ಶಿವಮೊಗ್ಗ ಮಾನಸ ಟ್ರಸ್ಟ್(ರಿ) ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನಲ್ಲಿ ಅಶೋಕ್ ಪೈ ಕಾಲೇಜಿನ ವತಿಯಿಂದ 07 ದಿನಗಳ ರಾಷ್ರೀಯ ಸೇವಾ ಯೋಜನೆ, ವಾರ್ಷಿಕ ವಿಶೇಷ ಶಿಬಿರ ವನ್ನು ಶಿವಮೊಗ್ಗ ಜಿಲ್ಲೆಯ ವಿಟಗೊಂಡನಕೊಪ್ಪ ಗ್ರಾಮದಲ್ಲಿ ಉದ್ಘಾಟನೆ ಮಾಡಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಕುವೆಂಪು ವಿಶ್ವವಿದ್ಯಾಲಯದ ಎನ್.ಎಸ್.ಎಸ್ ಸಂಯೋಜನಾಧಿಕಾರಿಗಳಾದ ಡಾ.ನಾಗರಾಜ್ ಪರಿಸರ ನೆರವೇರಿಸಿದರು.

ಪ್ರತಿಯೊಬ್ಬರು ಪರಿಸರ, ಜಲ ಹಾಗೂ ಮಣ್ಣು ಇದರ ಮಹತ್ವವನ್ನು ಅರಿಯುವುದು ಅಗತ್ಯ ಮತ್ತು ಅನಿವಾರ್ಯ ಎಂದು ಹೇಳಿ, ಉದ್ಘಾಟಕರು ಪ್ಲಾಸ್ಟಿಕ್‌ನ ಬಳಕೆಯನ್ನು ಕಡಿಮೆ ಮಾಡಿ ಎಂದು ಕರೆ ನೀಡಿದರು.

ಇನ್ನೂ ಮುಂದಿನ 07 ದಿನಗಳಲ್ಲಿ ಶಿಬಿರಾರ್ಥಿಗಳು ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ಮತ್ತು ಪ್ಲಾಸ್ಟಿಕ್ ಮುಕ್ತ ಭಾರತದ ಬಗ್ಗೆ ನಾಟಕಗಳನ್ನು ಮಾಡಿ ಗ್ರಾಮದ ಜನರಲ್ಲಿ ಜಾಗೃತಿಯನ್ನು ಮೂಡಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಶ್ರೀ. ಕೃಷ್ಣಪ್ಪ ಸದಸ್ಯರು ರಾಮನಗರ ಗ್ರಾಮ ಪಂಚಾಯಿತಿ, ಮಾತನಾಡುತ್ತ ರಾಷ್ಟ್ರೀಯ ಸೇವಾ ಯೋಜನೆಯ ಗ್ರಾಮೀಣ ಶಿಬಿರಗಳು ಗ್ರಾಮಸ್ಥರಿಗೆ ಹಾಗೂ ವಿದ್ಯಾರ್ಥಿಗಳಿಗೆ ಬಹಳಷ್ಟು ವಿಷಯಗಳ ಅರಿವನ್ನು ಮೂಡಿಸುವ ವಿಶೇಷ ಕಾರ್ಯಕ್ರಮ, ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ಪ್ರಪ್ರಥಮ ಶಿಬಿರವು ರಾಮನಗರದಲ್ಲಿ ನಡೆದಾಗ ಶಿಬಿರದಲ್ಲಿ ಹಲವು ಮಹತ್ವದ ವಿಷಯಗಳ ಕುರಿತು ಸಂಪನ್ಮೂಲ ವ್ಯಕ್ತಿಗಳು ಮಾಹಿತಿಯನ್ನು ನೀಡಿದ್ದು, ಈಗಲೂ ತಮಗೆಲ್ಲ ಅನುಕೂಲವಾಗಿದೆ ಎಂದು ತಿಳಿಸಿದರು.

ಅಲ್ಲದೇ ಶಿಬಿರದಲ್ಲಿ ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳ ಬಗ್ಗೆ ಒಂದು ಒಳ್ಳೆಯ ಬಾಂದವ್ಯ ಏರ್ಪಡುತ್ತದೆ. ಅದು ಬಹಳ ಮುಖ್ಯವಾದ ಸಾಮಾಜಿಕ ಶಿಕ್ಷಣ ಎಂದು ತಿಳಿಸಿದರು.

NSS Camp ವಿಟಗೊಂಡನಕೊಪ್ಪದಲ್ಲಿ ಎನ್ ಎಸ್ಎಸ್ ಶಿಬಿರ ಶಿಬಿರಾರ್ಥಿಗಳನ್ನು ಉದ್ದೇಶಿಸಿ ಊರಿನ ಅರ್ಚಕರಾದ ಶ್ರೀ ಶಿವಕುಮಾರ ಸ್ವಾಮಿಗಳು, ಗ್ರಾಮ ಪಂಚಾಯಿತಿ ಸದಸ್ಯರಾದ ಶ್ರೀ ರಾಮಚಂದ್ರರಾವ್ ರವರು ಹಿತನುಡಿಗಳನ್ನಾಡಿದರು.

ಕಾಲೇಜಿನ ಪ್ರಾಂಶುಪಾಲರಾದ ಡಾ.ಸಂಧ್ಯಾ ಕಾವೇರಿ ಕೆ,ರವರು ಅಧ್ಯಕ್ಷತೆ ವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...