Monday, May 4, 2026
Monday, May 4, 2026

Shivamogga District Social Welfare Department ವಾಜಪೇಯಿ ಮತ್ತು ಮೊರಾರ್ಜಿ ‌ದೇಸಾಯಿ ವಸತಿ ವಿಜ್ಞಾನ ಕಾಲೇಜಿನ ಪ್ರವೇಶಾತಿಗೆ ಕೌನ್ಸೆಲಿಂಗ್ ಪಟ್ಟಿ ಪ್ರಕಟಣೆ

Date:

Shivamogga District Social Welfare Department ಶಿವಮೊಗ್ಗ, ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ಅಥವಾ ಅಟಲ್ ಬಿಹಾರಿ ವಾಜಪೇಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜುಗಳಿಗೆ 2023-24ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ದಾಖಲಾತಿಗಾಗಿ ಕೌನ್ಸಿಲಿಂಗ್ ಮೂಲಕ ಕಾಲೇಜು ಆಯ್ಕೆ ಪಟ್ಟಿ ತಯಾರಿಸಿ, ಎಲ್ಲಾ ವಸತಿ ಶಾಲೆ/ ಕಾಲೇಜುಗಳಲ್ಲಿ ಪ್ರಕಟಿಸಲಾಗಿದೆ.

ಆಯ್ಕೆ ಪಟ್ಟಿಯಲ್ಲಿರುವ ವಿದ್ಯಾರ್ಥಿಗಳು ದಿ: 1/6/2023ರಂದು ಬೆಳಗ್ಗೆ 9 ಕ್ಕೆ ಅಂಬೇಡ್ಕರ್ ಭವನ, ಗಾಂಧಿ ಪಾರ್ಕ್ ಹತ್ತಿರ, ಶಿವಮೊಗ್ಗ ಇಲ್ಲಿ ನಡೆಯಲಿರುವ ಕೌನ್ಸಿಲಿಂಗ್ ಪ್ರಕ್ರಿಯೆಗೆ ಸೂಕ್ತ ದಾಖಲೆಗಳೊಂದಿಗೆ ಹಾಜರಾಗುವಂತೆ ಸೂಚಿಸಿದೆ.

ಆಯ್ಕೆ ಪಟ್ಟಿಯನ್ನು ಎಲ್ಲಾ ವಸತಿ ಶಾಲೆ/ಕಾಲೇಜುಗಳಲ್ಲಿ ಪ್ರಕಟಿಸಲಾಗಿದೆ. ಆಯ್ಕೆಗೊಂಡ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ದೂರವಾಣಿ ಮುಖಾಂತರ ತಿಳಿಸಲಾಗುತ್ತದೆ.

Shivamogga District Social Welfare Department ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು ಕಚೇರಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚನ್ನಮ್ಮ/ ಶ್ರೀ ನಾರಾಯಣ ಗುರು/ ಆಟಲ್ ವಾಜಿಪೇಯಿ / ಶ್ರೀಮತಿ ಇಂದಿರಾ ಗಾಂಧಿ/ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆ/ ಕಾಲೇಜುಗಳಲ್ಲಿ ಕಚೇರಿ ವೇಳೆಯಲ್ಲಿ ಸಂಪರ್ಕಿಸುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ವ್ಯಾಪಾರ ವೃದ್ಧಿಸಿಕೊಳ್ಳಲು ಡಿಜಿಟಲ್ ಮಾರ್ಕೆಟಿಂಗ್ ಸಹಕಾರಿ : ಜಿ.ಸುನೀಲ್‌ಕುಮಾರ್

Rotary Shivamogga ತಂತ್ರಜ್ಞಾನ ಮತ್ತು ವೈಜ್ಞಾನಿಕ ಯುಗದಲ್ಲಿ ವ್ಯಾಪಾರದಲ್ಲಿ ಯಶಸ್ಸು...

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...