Lohit Kumar was Elected as Chikkadevanur Village President ಚಿಕ್ಕಮಗಳೂರು, ತಾಲ್ಲೂಕಿನ ಚಿಕ್ಕದೇವನೂರು ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಎಂ.ಲೋಹಿತ್‌ಕುಮಾರ್ ಅವರು ಆಯ್ಕೆಯಾಗಿದ್ದಾರೆ.
ಗ್ರಾ.ಪಂ. ಕಚೇರಿಯ ಸಭಾಂಗಣದಲ್ಲಿ ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷ ಎಂ.ಲೋಹಿತ್‌ಕುಮಾರ್ ಅವರನ್ನು ಚುನಾವಣಾಧಿಕಾರಿ ವಿಜಯ್‌ಕುಮಾರ್ ಅಧಿಕೃತವಾಗಿ ಘೋಷಿಸಿದರು.
ಈ ವೇಳೆ ಅಭಿನಂದನೆ ಸಲ್ಲಿಸಿ ಮಾತನಾಡಿದ ಶಾಸಕ ಹೆಚ್.ಡಿ.ತಮ್ಯಯ್ಯ ಚಿಕ್ಕದೇವನೂರು ಗ್ರಾಮ ಪಂಚಾ ಯಿತಿ ಅನೇಕ ವರ್ಷಗಳಿಂದ ಕಾಂಗ್ರೆಸ್ ಭದ್ರಕೋಟೆಯಾಗಿದೆ. ಅದೇ ರೀತಿಯಲ್ಲಿ ಮುಂದಿನ ಜಿ.ಪಂ., ತಾ.ಪಂ. ಹಾಗೂ ಲೋಕಸಭಾ ಚುನಾವಣೆಯಲ್ಲಿ ಗ್ರಾಮ ಸೇರಿದಂತೆ ಜಿಲ್ಲೆಯನ್ನು ಪೂರ್ಣವಾಗಿ ಕಾಂಗ್ರೆಸ್ ಭದ್ರಕೋಟೆ ಯನ್ನಾಗಿ ಮಾಡಲು ಮುಂದಾಗಬೇಕು ಎಂದರು.
ಕಳೆದ ಹಲವಾರು ವರ್ಷಗಳಿಂದ ಈ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ಯಾವುದೇ ಶಾಶ್ವತ ಅಭಿವೃದ್ದಿ ಕಾಮಗಾರಿಗಳಾಗಿಲ್ಲ.
ಇದೀಗ ಕ್ಷೇತ್ರ, ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ಕಾಂಗ್ರೆಸ್ ಪರ ಅಲೆ ಎದ್ದಿದೆ. ಆ ನಿಟ್ಟಿನಲ್ಲಿ ಮುಂದಿನ ತಮ್ಮ ಅವಧಿಯಲ್ಲಿ ಗ್ರಾಮೀಣ ಪ್ರದೇಶದ ಮಹಿಳೆಯರಿಗಾಗಿ ಫಾಕ್ಟರಿ ತೆರೆಯುವ ಮೂಲಕ ಉದ್ಯೋಗ ಕಲ್ಪಿಸಿಕೊಡುವ ಭರವಸೆ ವ್ಯಕ್ತಪಡಿಸಿದರು.
ಇದೀಗ ಕ್ಷೇತ್ರದ ಹಲವಾರು ಗ್ರಾಮಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರುಗಳಿಗೆ ಆನೆ ಬಲಬಂದಂತಾಗಿದೆ. ಮುಂದಿನ ಯಾವುದೇ ಸಮಸ್ಯೆಗಳು ಕ್ಷೇತ್ರದಲ್ಲಿ ಎದುರಾದಲ್ಲಿ ನ್ಯಾಯಸಮ್ಮತವಾಗಿ ಬಗೆಹರಿಸುವ ಮೂಲಕ ಕ್ಷೇತ್ರದ ಜನತೆ ಜೊತೆ ಉತ್ತಮ ನಂಟನ್ನು ಹೊಂದುವುದಾಗಿ ಹೇಳಿದರು.
Lohit Kumar was Elected as Chikkadevanur Village President ಈ ಸಂದರ್ಭದಲ್ಲಿ ಗ್ರಾ.ಪಂ. ಉಪಾಧ್ಯಕ್ಷ ಈ.ಕೆ.ವಸಂತ, ಸದಸ್ಯರುಗಳಾದ ಸಿ.ಎಸ್.ಅಶೋಕ್, ಸಿ.ಎಸ್.ಚಂದ್ರ ಶೇಖರ್, ಸುಲೋಚನಾ, ಟಿ.ಆರ್.ರಂಗಮ್ಮ, ಎಂ.ಸಿ.ಶೋಭಾ, ಕೆ.ಸಿ.ಗಂಗಾಧರ್, ಸರಸ್ವತಿ, ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಶ್ರೀಮತಿ ಬಿ.ಎಂ.ಶಾರದ ಉಪಸ್ಥಿತರಿದ್ದರು.