Saturday, September 28, 2024
Saturday, September 28, 2024

Sahyadri College Shivamogga ಪ್ರತಿಮನೆಯಲ್ಲೂ ಮಳೆ ಕೊಯ್ಲು ಪದ್ಧತಿ ಅನುಸರಿಸಿ-ಶಾಸಕ ಚೆನ್ನಿ

Date:

Sahyadri College Shivamogga ಮಳೆನೀರಿನ ಕೊಯ್ಲುನಿಂದ ಪರಿಸರಕ್ಕೆ ಆಗುವ ಅನುಕೂಲಗಳು.ಈಗಿನ ಯುವಕರು/ಯುವತಿಯರು ಪರಿಸರದ ಬಗ್ಗೆ ಹೆಚ್ಚಿನ ಕಾಳಜಿಯನ್ನು ತೋರಿಸಬೇಕು, ಮಳೆನೀರು ಕೊಯ್ಲು ಪದ್ಧತಿಯನ್ನು ಪ್ರತಿ ಮನೆಯಲ್ಲೂ ಅಳವಡಿಸಿಕೊಂಡರೆ ಆಗುವ ಪ್ರಯೋಜನಗಳ ಬಗ್ಗೆ. ಹಾಗೂ ಯುವಜನರಿಗೆ ಪರಿಸರ ಸಂರಕ್ಷಣೆ ನಿಮ್ಮೆಲ್ಲರ ಕರ್ತವ್ಯ ಎಂದು ಶಾಸಕರಾದ ಚನ್ನಬಸಪ್ಪ (ಚೆನ್ನಿ) ಹೇಳಿದರು.

ಅವರು ಭಾರತ ಸರ್ಕಾರ,ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ,ಶಿವಮೊಗ್ಗ, ಸಹ್ಯಾದ್ರಿ ವಿಜ್ಞಾನ ಕಾಲೇಜು,ರಾಷ್ಟ್ರೀಯ ಸೇವಾ ಯೋಜನೆ,ಶಿವಮೊಗ್ಗ ಹಾಗೂ ಜಾಗೃತಿ ಯುವಕ ಸಂಘ,ಶಿವಮೊಗ್ಗ ಇವರು ಸಂಯುಕ್ತಾಶ್ರಯದಲ್ಲಿ ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಪಾಥ್‌ವೇಸ್ ಸಭಾಂಗಣದಲ್ಲಿ “ಮಳೆನೀರು ಸಂರಕ್ಷಣೆ ಮತ್ತು ಜಿಲ್ಲಾ ಮಟ್ಟದ ರಸಪ್ರಶ್ನೆ ಮತ್ತು ಚಿತ್ರಕಲಾ ಸ್ಪರ್ಧಾ “ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

Sahyadri College Shivamogga ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ.ವಿ.ಕಾ.ಪ್ರಾಚಾರ್ಯರಾದ ಪ್ರೊ.ರಾಜೇಶ್ವರಿ ಎನ್. ವಹಿಸಿ ಮಾತನಾಡುತ್ತ ಮಳೆ ನೀರನ್ನು ಹೇಗೆ ಸಂರಕ್ಷಣೆ ಮಾಡಬೇಕು, ಕಾಲೇಜಿನಲ್ಲಿ ಮಳೆನೀರು ಕೊಯ್ಲುನ್ನು ಹೇಗೆ ಅಳವಡಿಸಬೇಕು ಇದರ ಪ್ರಯೋಜನಗಳ ಬಗ್ಗೆ ವಿವರಿಸಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಜಿಲ್ಲಾ ಪಂಚಾಯಿತಿ ಸಿ.ಇ.ಓ ಮಲ್ಲಪ್ಪ ಕೆ. ತೊಡಲಗಬಗಿ ಮಾತನಾಡತ್ತು ಜಾತಿ, ಧರ್ಮ ಎಲ್ಲವುಗಳಿಗಿಂತ ಅತಿಮುಖ್ಯ ಗಿಡ-ಮರಗಳು ಇವುಗಳ ಉಳಿಗೆ ನಾವು ಎಲ್ಲಾರು ಒಂದಾಗಿ ನಮ್ಮ ಜವಬ್ದಾರಿಗಳನ್ನು ನಿರ್ವಹಿಸಬೇಕು ಎಂದರು.

ಮರುಭೂಮಿಯಂತಹ ಪ್ರದೇಶಗಳಲ್ಲಿ ಮಳೆನೀರು ಕೊಯ್ಲು ಪದ್ಧತಿಯನ್ನು ಹೇಗೆ ಅಳವಡಿಸಿಕೊಂಡಿರುವುದರ ಬಗ್ಗೆ ಮಾಹಿತಿ ನೀಡಿದರು.
ಸಂದರ್ಭದಲ್ಲಿನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿಯಾದ ಉಲ್ಲಾಸ್, ಕಾರ್ಯಕ್ರಮ ಸಂಯೋಜನಾಧಿ ಕಾರಿಯಾದ ಡಾ. ನಾಗರಾಜ, ಎನ್. ಎಸ್. ಎಸ್ ಕಾರ್ಯಕ್ರಮ ಅಧಿಕಾರಿಗಳಾದ ಡಾ. ನಾಗಾರ್ಜುನ್, ಕಾಲೇಜಿನ ಸಿಬ್ಬಂದಿ ವರ್ಗದವರು, ಮತ್ತು ಶಿವಮೊಗ್ಗ ಜಿಲ್ಲೆಯ ವಿವಿಧ ಕಾಲೇಜಿನಿಂದ ಆಗಮಿಸಿದ್ದ ಸ್ಪರ್ಧಿಗಳು, ಕಾಲೇಜು ವಿದ್ಯಾರ್ಥಿಗಳು, ನೆಹರು ಯುವ ಕೇಂದ್ರದ ಕಾರ್ಯಕರ್ತರು ಉಪಸ್ಥಿತರಿದ್ದರು.

ರಸ ಪ್ರಶ್ನೆ/ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ಅಭ್ಯರ್ಥಿಗಳಿಗೆ ಆಕರ್ಷಕ ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sri Adhichunchanagiri Mahasamsthana Math ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ನವರಾತ್ರಿ ಸಂಭ್ರಮ

Sri Adhichunchanagiri Mahasamsthana Math ಶರನ್ನವರಾತ್ರಿ ಉತ್ಸವದ ಪ್ರಯುಕ್ತ ಪ್ರತಿ ವರ್ಷದಂತೆ...

Department of Fisheries ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ಅರ್ಜಿ ಆಹ್ವಾನ

Department of Fisheries ಮೀನುಗಾರಿಕೆ ಇಲಾಖೆಯು 2022-23 ರಿಂದ 2024-25 ನೇ...

National Open Athletic Championship ಬಿಹಾರದ ಓಪನ್ ಅಥ್ಲೇಟಿಕ್‌ನಲ್ಲಿ ಶಿವಮೊಗ್ಗ ಜಿಲ್ಲೆಯ ಕ್ರೀಡಾಪಟು

National Open Athletic Championship ಬಿಹಾರದ ಪಾಟ್ನದಲ್ಲಿ ಸೆ. 28 ರಿಂದ...

Bhadravati Police ಅನಾಮಧೇಯ ಗಂಡಸ್ಸಿನ ಶವ ಪತ್ತೆ

Bhadravati Police ಭದ್ರಾವತಿ ಶಿವಪುರ ಗ್ರಾಮದಲ್ಲಿ ಭದ್ರಾ ಬಲದಂಡೆ ನಾಲೆಯಲ್ಲಿ ಸುಮಾರು...