Sunday, December 7, 2025
Sunday, December 7, 2025

Kateel Ashok Pai Memorial College ಶಿವಮೊಗ್ಗದಲ್ಲಿ ಸ್ವಚ್ಛತಾ ಸವಾರಿ ಅಭಿಯಾನ

Date:

Kateel Ashok Pai Memorial College ಮಾನಸ ಟ್ರಸ್ಟ್ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ಸಮಾಜ ಕಾರ್ಯ ವಿಭಾಗ ಹಾಗು ಪರಿಸರ ವಿಜ್ಞಾನ ವಿಭಾಗವು ಬೆಂಗಳೂರಿನ ಪರಿಸರ ನಿರ್ವಹಣೆ ಹಾಗೂ ನೀತಿ ಸಂಶೋಧನಾ ಸಂಸ್ಥೆ ಮತ್ತು ಶಿವಮೊಗ್ಗದ ಉಳಿವು ಸಂಸ್ಥೆಯ ಮೂಲಕ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ದಿನಾಂಕ 03/06/2023 ರಂದು ಶಿವಮೊಗ್ಗದ ರಾಜೀವ್‌ಗಾಂಧಿ ಬಡಾವಣೆಯಲ್ಲಿ ಸ್ವಚ್ಛತಾ
ಅಭಿಯಾನವನ್ನು ಹಮ್ಮಿಕೊಂಡಿತ್ತು.

ಸ್ವಚ್ಛತಾ ಸವಾರಿ ಎಂಬ ಈ ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ ಸಂಧ್ಯಾ ಕಾವೇರಿ
ಉದ್ಘಾಟಿಸಿದರು. ಪರಿಸರ ಸಂರಕ್ಷಣೆ ಅತ್ಯಂತ ಅವಶ್ಯಕ ಹಾಗು ಅದರ ಅರಿವು ಸಮಾಜದ ಪ್ರತಿಯೊಬ್ಬರಿಗೂ ಅಗತ್ಯ. ಸುಸ್ಥಿರ ಪರಿಸರ ಸಂರಕ್ಷಣೆ ಹಾಗು ಅಭಿವೃದ್ಧಿಯಲ್ಲಿ ಪ್ಲಾಸ್ಟಿಕ್ ತ್ಯಾಜ್ಯದ ನಿರ್ವಹಣೆ ಮೂಲಭೂತ ಅಂಶ ಆದುದರಿಂದ ಈ ದಿನ ಸ್ವಚ್ಛತಾ ಸವಾರಿಯಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಹೆಕ್ಕುವ ಹಾಗು ಮನೆಮನೆಗೆ ಅರಿವನ್ನು ಮೂಡಿಸುವ ಕಾರ್ಯವನ್ನು ರಾಜೀವ್ ಗಾಂಧಿ ಬಡಾವಣೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಉದ್ಘಾಟಕರು ನುಡಿದರು.

Kateel Ashok Pai Memorial College ಅರಿವು ಸಂಸ್ಥೆಯ ಸೀಮಾ ರವರು ಈ ಕಾರ್ಯಕ್ರಮವು ಒಂದು ಸಂಶೋಧನಾ ಕಾರ್ಯಕ್ರಮದ ತಳಹದಿಯಾಗಿದ್ದು ಮುಂದಿನ ದಿನಗಳಲ್ಲಿ ಶಿವಮೊಗ್ಗದ ವಿವಿಧ ಬಡಾವಣೆಗಳು ಹಾಗು ಪ್ರವಾಸಿ ತಾಣಗಳಲ್ಲಿ ಮುಂದುವರೆಯುವುದು. ಮಹಾನಗರಪಾಲಿಕೆ ಹಾಗು ತ್ಯಾಜ್ಯ ನಿರ್ವಹಣಾ ವಿಭಾಗ ಮತ್ತು ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜು ಸಹಯೋಗದೊಂದಿಗೆ ಜನರ ಅರಿವನ್ನು ಹೆಚ್ಚಿಸುವ
ಕಾರ್ಯಕ್ರಮಗಳನ್ನು ಸಮಗ್ರವಾಗಿ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಕಾಲೇಜಿನ ಉಪನ್ಯಾಸಕರಾದ ಶ್ರೀಮತಿ ಪ್ರೇಮ, ಸಮಾಜ ಕಾರ್ಯ ವಿಭಾಗದ ಮುಖ್ಯಸ್ಥರಾದ ಶ್ರೀ ಮಂಜುನಾಥಸ್ವಾಮಿ ಹಾಗು ಉಪನ್ಯಾಸಕಿ ಶ್ರೀಮತಿ ನ್ಯಾನ್ಸಿ ಪಿಂಟೊ ವಿದ್ಯಾರ್ಥಿಗಳಿಗೆ ತ್ಯಾಜ್ಯ ನಿರ್ವಹಣೆಯ ಕಿರು ತರಬೇತಿಯನ್ನು ನೀಡಿದರು.

ಮಾಲಿನ್ಯ ನಿಯಂತ್ರಣ ಮಂಡಳಿಯ ಶ್ರೀಮತಿ ಶಿಲ್ಪ ರವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಎಲ್ಲಾ ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು. ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಆಚರಿಸಿದ ಈ ಕಾರ್ಯಕ್ರಮ ಅತ್ಯಂತ ಅರ್ಥಪೂರ್ಣ ಕಾರ್ಯಕ್ರಮವೆಂದು ಹೇಳಿದ ಶ್ರೀಮತಿ ಶಿಲ್ಪರವರು ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜು ಹಾಗು ಅರಿವು ಸಂಸ್ಥೆಯ ಮುಂದಿನ ಪರಿಸರಕ್ಕೆ ಸಂಬಂಧಿಸಿದ ಶೈಕ್ಷಣಿಕ ಹಾಗು ಸಂಶೋಧನಾ ಕಾರ್ಯಗಳಿಗೆ ಸಹಕಾರವನ್ನು ನೀಡುವುದಾಗಿ ತಿಳಿಸಿದರು.

ಈ ಕಾರ್ಯಕ್ರಮಕ್ಕೆ ಮಾಲಿನ್ಯ ನಿಯಂತ್ರಣ ಮಂಡಳಿಯ ಸ್ಥಳೀಯ ಅಧಿಕಾರಿ ಶ್ರೀ ಎಂ.ಎಸ್.ಮಹದೇವಪ್ಪ
ಹಾಗು ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ಶೈಕ್ಷಣಿಕ ಸಲಹೆಗಾರರಾದ ಡಾ ರಾಜೇಂದ್ರ ಚೆನ್ನಿ ರವರು ಮಾರ್ಗದರ್ಶನವನ್ನು
ನೀಡಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...