Friday, March 20, 2026
Friday, March 20, 2026

Shivamogga Rotary RMB Institute ಉದ್ಯಮಿಗಳಲ್ಲಿ ಬದ್ಧತೆ ಮತ್ತು ಪ್ರಾ ಮಾಣಿಕತೆ ಇದ್ದರೆ ಯಶಸ್ಸು ಖಂಡಿತ- ಶಾಸಕ ರುದ್ರೇಗೌಡ

Date:

Shivamogga Rotary RMB Institute ಉದ್ಯಮದಲ್ಲಿ ಯಶಸ್ಸು ಸಾಧಿಸಲು ಬದ್ಧತೆ ಹಾಗೂ ಪ್ರಾಮಾಣಿಕತೆ ಅತ್ಯಂತ ಮುಖ್ಯ ಆಗಿರುತ್ತದೆ. ವ್ಯಾಪಾರ ವಹಿವಾಟು ನಡೆಸುವವರು ಪ್ರಾಮಾಣಿಕರಾಗಿ ಕೆಲಸ ಮಾಡಬೇಕು. ಗೆಲುವು ದೊರೆಯುವುದು ನಿಶ್ಚಿತ ಎಂದು ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ ಹೇಳಿದರು.

ಶಿವಮೊಗ್ಗ ನಗರದಲ್ಲಿ ರೋಟರಿ ಆರ್‌ಎಂಬಿ ಸಂಸ್ಥೆ ವತಿಯಿಂದ ಆಯೋಜಿಸಿದ್ದ ನೂತನ ಪದಾಧಿಕಾರಿಗಳ ಪದವಿ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿ, ವ್ಯಾಪಾರ ಕ್ಷೇತ್ರದಲ್ಲಿ ಪ್ರಗತಿ ಹೊಂದಲು ಒಬ್ಬರಿಗೆ ಒಬ್ಬರು ಸಹಕಾರ ಮಾಡಿಕೊಂಡು ಮುನ್ನಡೆಯಲು ರೋಟರಿ ಉತ್ತಮ ಪ್ರೋತ್ಸಾಹ ನೀಡುತ್ತಿದೆ ಎಂದು ತಿಳಿಸಿದರು.
ರೋಟರಿ ಆರ್‌ಎಂಬಿ ಸಂಸ್ಥೆಯು ನ್ಯಾಯಯುತ ಮೌಲ್ಯ ಗುಣಗಳೊಂದಿಗೆ ವ್ಯಾಪಾರದಲ್ಲಿ ಉನ್ನತಿ ಸಾಧಿಸಲು ಅಗತ್ಯ ಸಹಕಾರ ನೀಡುತ್ತಿರುವುದು ಶ್ಲಾಘನೀಯ. ಶಿವಮೊಗ್ಗ ಜಿಲ್ಲೆಯಲ್ಲಿ ಉತ್ತಮ ಕೆಲಸ ಮಾಡಬೇಕು ಎಂದು ಆಶಿಸಿದರು.

Shivamogga Rotary RMB Institute ಸಂಸ್ಥೆಯ ನಿರ್ಗಮಿತ ಅಧ್ಯಕ್ಷ ವಸಂತ ಹೋಬಳಿದಾರ್ ಮಾತನಾಡಿ, ಸಂಸ್ಥೆ ಬೆಳೆಯಲು ಸಹಕರಿಸಿದ ಅರುಣ್ ದೀಕ್ಷಿತ್, ಮೋಹನ್ ಮತ್ತು ಇಡೀ ತಂಡವನ್ನು ನೆನಪಿಸಿಕೊಂಡರು. ಈವರೆಗಿನ ಸಾಧನೆ ನನಗೆ ನೆಮ್ಮದಿ ತಂದಿದೆ ಎಂದು ತಿಳಿಸಿದರು.

ನೂತನ ಅಧ್ಯಕ್ಷ ಎಚ್.ಎಸ್.ಮೋಹನ್ ಮಾತನಾಡಿ, ಅಧಿಕಾರ ಸ್ವೀಕರಿಸಿ ತಮ್ಮ ತಂಡವನ್ನು ಪರಿಚಯಿಸಿ ಅರ್.ಎಮ್.ಬಿ ಸಂಸ್ಥೆಗೆ ಇನ್ನೂ ಹೆಚ್ಚಿನ ಸದಸ್ಯರು ಕೈ ಜೋಡಿಸಬೇಕು. ಅಧಿಕ ಸಂಖ್ಯೆಯ ಸದಸ್ಯರಿಂದ ವ್ಯಾಪಾರ ವಹಿವಾಟು ಹೆಚ್ಚುವುದರೊಂದಿಗೆ ಸಂಸ್ಥೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಇತಿಹಾಸ ನಿರ್ಮಿಸಬಹುದು ಎಂದರು.

ನೂತನ ಕಾರ್ಯದರ್ಶಿ ರವೀಂದ್ರನಾಥ ಐತಾಳ ಪ್ರಾಸ್ತಾವಿಕ ಮಾತನಾಡಿ, ಈವರೆಗೆ ಸಂಸ್ಥೆ ನಡೆದು ಬಂದ ದಾರಿ, ಸಂಸ್ಥೆಯ 30 ತಿಂಗಳ ಸಾಧನೆಯ 22 ಕೋಟಿ ವ್ಯವಹಾರದ ಸಂತಸದ ಸಂಗತಿಯನ್ನು ಹಂಚಿಕೊಂಡರು.
ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್, ಸಹ ಕಾರ್ಯದರ್ಶಿ ಜಿ.ವಿಜಯಕುಮಾರ್, ಮಂಜುನಾಥ ಕದಂ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...