Thursday, September 17, 2026
Thursday, September 17, 2026

CM Siddharamaih ವಿದ್ಯುತ್ ದರ ಏರಿಕೆ ಆದೇಶ ಬಿಜೆಪಿ ಸರ್ಕಾರದ್ದು ನಮ್ಮದಲ್ಲ- ಸಿದ್ಧರಾಮಯ್ಯ

Date:

CM Siddharamaih ರಾಜ್ಯಾದ್ಯಂತ ವಿದ್ಯುತ್ ದರ ಹೆಚ್ಚಳದ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎರಡು ಮೂರು ತಿಂಗಳ ಬಿಲ್ ಒಮ್ಮೆಲೆ ಬಂದಿದ್ದು ಕಂಡು ಬೆಚ್ಚಿ ಬಿದ್ದಿದ್ದಾರೆ. ಹೀಗಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ ವಿರುದ್ಧ ಸಿಡಿದೆದ್ದಿದ್ದಾರೆ.

ಈ ಹಿನ್ನೆಲೆಯಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಪ್ರತಿಕ್ರಿಯೆ ನೀಡಿದ್ದು, ನಾವು ವಿದ್ಯುತ್ ದರ ಹೆಚ್ಚಳ ಮಾಡಿಲ್ಲ. ಮಾಡಿದ್ದೇವೆ ಎಂಬುದು ಸುಳ್ಳು ಎಂದು ಸ್ಪಷ್ಟನೆ ನೀಡಿದ್ದಾರೆ.

ವಿದ್ಯುತ್ ದರ ಹೆಚ್ಚಳದ ಬಗ್ಗೆ ಏಪ್ರಿಲ್ 1ರಂದು ತೀರ್ಮಾನವಾಗಿತ್ತು. ಅದನ್ನು ನಮ್ಮ ಸರ್ಕಾರ ಅಸ್ಥಿತ್ವಕ್ಕೆ ಬರುವ ಮುನ್ನವೇ ಚುನಾವಣಾ ನೀತಿ ಸಂಹಿತೆ ಮುಕ್ತಾಯದ ಬೆನ್ನಲ್ಲೇ ಜಾರಿಗೊಳಿಸಲಾಗಿದೆ ಎಂಬುದಾಗಿ ತಿಳಿಸಿದ್ದಾರೆ.

ವಿದ್ಯುತ್ ದರ ಹೆಚ್ಚಳದ ಹಿನ್ನೆಲೆಯಲ್ಲಿ ಶಿಕಾರಿಪುರ ಶಾಸಕ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಅವರು ಪ್ರತಿಕ್ರಿಯೆ ನೀಡಿದ್ದಾರೆ.

CM Siddharamaih ರಾಜ್ಯದಲ್ಲಿ ಹಾಲಿನ ದರ ಏರಿಕೆಯಾದಾಗ ಬಿಜೆಪಿ ಸರ್ಕಾರದ ಅವಧಿಯಲ್ಲಿ ತಕ್ಷಣ ಇಳಿಕೆ ಮಾಡಲಾಯಿತು.

ಅದರಂತೆಯೇ ಕಾಂಗ್ರೆಸ್ ಸರ್ಕಾರ ವಿದ್ಯುತ್ ಕಂಪನಿಗಳೊಂದಿಗೆ ಮಾತನಾಡುವ ಮೂಲಕ ವಿದ್ಯುತ್ ಬಿಲ್ ಕಡಿಮೆ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು. ಅದನ್ನು ಬಿಟ್ಟು ಬಿಜೆಪಿಯ ಮೇಲೆ ಗೂಬೆ ಕೂರಿಸುವ ಕೆಲಸ ಮಾಡಬಾರದು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಭೂಮಿ ಹಂಚಿಕೆ ಹಾಗೂ ವಿವಿಧ ಕಾಮಗಾರಿಗಳನ್ನು ತಡೆ ಹಿಡಿಯುವ ನಿಟ್ಟಿನಲ್ಲಿ ಈಗಿನ ಸಚಿವರು ಮಾತನಾಡಿದ್ದಾರೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...