CM Siddharamaih ಅಕ್ಕಿ ನೀಡುವ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜಕೀಯ ನಿರ್ಧಾರ ಕೈಗೊಂಡು ಕನ್ನಡಿಗರ ಪಾಲನ್ನು, ಬಡವರ ಪಾಲನ್ನು ಕಸಿದುಕೊಂಡಿದೆ. ಕೇಂದ್ರ ಸರ್ಕಾರ ಕನ್ನಡಿಗರ, ಬಡವರ ವಿರೋಧಿ ಎನ್ನುವುದರಲ್ಲಿ ಯಾವುದೇ ಸಂಶಯ ಉಳಿದಿಲ್ಲ. ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯನವರು ತಿಳಿಸಿದ್ದಾರೆ.
ಎಫ್.ಸಿ.ಐ. ಒಪ್ಪಿಗೆ ಪತ್ರದ ಆಧಾರದ ಮೇಲೆ ಜುಲೈ 1 ರಿಂದ ತಲಾ 10ಕೆ.ಜಿ ಉಚಿತ ಅಕ್ಕಿ ನೀಡುವ ಅನ್ನಭಾಗ್ಯ ಯೋಜನೆ ಜಾರಿ ಮಾಡಲಾಗುವುದು ಎಂದು ಘೋಷಿಸಿದೆವು. ಎಫ್.ಸಿ.ಐ ನ ಪ್ರಧಾನ ವ್ಯವಸ್ಥಾಪಕ ಹರೀಶ್ ಎಂಬುವವರು 7 ಲಕ್ಷ ಟನ್ ಅಕ್ಕಿ ಸಂಗ್ರಹ ಇದೆ ಎಂದು ತಿಳಿಸಿದ್ದಾರೆ. ಅನ್ನಭಾಗ್ಯ ಕಾರ್ಯಕ್ರಮವನ್ನು ಜಾರಿಗೊಳಿಸದೇ ಇರುವಂತೆ ಅಡ್ಡಿಪಡಿಸುವುದು ಇದರ ಹಿಂದಿನ ಉದ್ದೇಶ.
CM Siddharamaih ಅಕ್ಕಿ ಇಟ್ಟುಕೊಂಡು ಕೊಡಲಾಗುವುದಿಲ್ಲ ಎಂದರೆ ಇವರನ್ನು ಬಡವರ ವಿರೋಧಿಗಳು ಎಂದು ಕರೆಯದೆ ಬೇರೇನು ಹೇಳಬೇಕು. ಕೇಂದ್ರ ಸರ್ಕಾರ ಉಚಿತವಾಗಿಯೇನೂ ಅಕ್ಕಿ ನೀಡುವುದಿಲ್ಲ ನಾವು ಹಣ ನೀಡಿ ಪಡೆಯುವುದು. ಇತರರಿಗೆ ಕೊಡುವ ರೀತಿಯಲ್ಲಿ ನಮಗೂ ಕೊಡುತ್ತಿದ್ದರು. ಆದರೆ ಈಗ ಕರ್ನಾಟಕ ರಾಜ್ಯಕ್ಕೆ ನೀಡುವುದಿಲ್ಲ ಎನ್ನುವ ತೀರ್ಮಾನಕ್ಕೆ ಅವರು ಬಂದಿದ್ದಾರೆ. ಈಗಲೂ ನಾವು ಪ್ರಯತ್ನ ಮಾಡುತ್ತಿದ್ದೇವೆ. ಪುನ: ಮನವಿ ಮಾಡುವುದು ಇದ್ದೇ ಇರುತ್ತದೆ ಆದರೆ ಈ ರೀತಿ ಮಾಡಿರುವುದರಿಂದ ಇದೊಂದು ಷಡ್ಯಂತ್ರ ಎಂದೇ ಪರಿಗಣಿಸಬೇಕಾಗುತ್ತದೆ ಎಂದು ಖಾರವಾಗಿ ಸಿದ್ದರಾಮಯ್ಯನವರು ನುಡಿದಿದ್ದಾರೆ.