Thursday, June 18, 2026
Thursday, June 18, 2026

Congress Karnataka ಅಕ್ಕಿ ಸರಬರಾಜು ನಿರಾಕರಣೆ: ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಆಯೋಜನೆ- ಡಿ.ಕೆ.ಶಿವಕುಮಾರ್

Date:

Congress Karnataka ಕೆಪಿಸಿಸಿ ಕಚೇರಿಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದರು. ಬಿಪಿಎಲ್‌ ಕುಟುಂಬದ ಪ್ರತೀ ಸದಸ್ಯರಿಗೂ ತಲಾ 10 ಕೆಜಿ ಅಕ್ಕಿ ವಿತರಿಸುವ ಅನ್ನಭಾಗ್ಯ ಯೋಜನೆಗೆ ಉದ್ದೇಶಪೂರ್ವಕವಾಗಿ ಅಡ್ಡಿಪಡಿಸುತ್ತಿರುವ ಕೇಂದ್ರ ಸರ್ಕಾರದ ಧೋರಣೆ ವಿರುದ್ಧ ಜೂನ್‌ 20ರಂದು ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದೇವೆ. ಈ ಸಂಬಂಧ ಕಾಂಗ್ರೆಸ್‌ನ ಜಿಲ್ಲಾ ಘಟಕಗಳಿಗೆ ಸೂಚನೆ ತಲುಪಿಸಲಾಗುತ್ತಿದೆ. ಸ್ಥಳೀಯ ಶಾಸಕರು ಪ್ರತಿಭಟನೆಯಲ್ಲಿ ಭಾಗವಹಿಸಿ ಕೇಂದ್ರ ಸರ್ಕಾರಕ್ಕೆ ಕನ್ನಡಿಗರ ದಿಟ್ಟ ಸಂದೇಶವನ್ನು ತಲುಪಿಸಬೇಕು.
Congress Karnataka 7 ಲಕ್ಷ ಟನ್‌ ಅಕ್ಕಿ ದಾಸ್ತಾನಿದೆ ಎಂದು ಹೇಳಿದ್ದ ಕೇಂದ್ರ ಬಿಜೆಪಿ ಸರ್ಕಾರ ಮರುದಿನವೇ ತನ್ನ ಮಾತು ಬದಲಿಸಿದೆ. ಈ ಮೂಲಕ ತಮಗೆ ಮತ ಹಾಕದ ಬಡ ಕನ್ನಡಿಗರ ಮೇಲೆ ಬಿಜೆಪಿ ಸರ್ಕಾರ ದ್ವೇಷ ಸಾಧಿಸುತ್ತಿದೆ. ತೆಲಂಗಾಣ, ಛತ್ತೀಸ್‌ಗಢ ಮೊದಲಾದ ರಾಜ್ಯಗಳೊಂದಿಗೆ ಈಗಾಗಲೇ ಮಾತುಕತೆ ನಡೆಯುತ್ತಿದ್ದು, ಕಾಂಗ್ರೆಸ್‌ ಪಕ್ಷವು ಕೊಟ್ಟ ಮಾತಿನಂತೆ ನಡೆಯಲಿದೆ ಎಂದು
ಡಿ.ಕೆ.ಶಿವಕುಮಾರ್ ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...