Friday, October 4, 2024
Friday, October 4, 2024

Amble Morarji Desai Residential School ಅಂಬಳೆ ಮೊರಾರ್ಜಿ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ

Date:

Amble Morarji Desai Residential School ಅಂಬಳೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ.ಯಲ್ಲಿ ಅತಿಹೆಚ್ಚು ಅಂಕಗಳಿಸಿದ ಹಿನ್ನೆಲೆಯಲ್ಲಿ ಶ್ರೀ ದುರ್ಗಾ ಫೌಂಡೇಷನ್ ಹಾಗೂ ಶ್ರೀ ಅನ್ನ ಪೂರ್ಣೇಶ್ವರಿ ಚಾರಿಟಿ ಫೌಂಡೇಷನ್ ಟ್ರಸ್ಟ್ನಿಂದ ಪ್ರತಿಭಾ ಪುರಸ್ಕಾರವನ್ನು ನಗರದ ಎಐಟಿ ಕಾಲೇಜು ಬಿಜಿಎಸ್ ಸಭಾಂಗಣದಲ್ಲಿ ವೃಕ್ಷ ಮಾತೆ, ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕರವರು ವಿತರಿಸಿದರು.

ಕಾರ್ಯಕ್ರಮವನ್ನು ಸಾಲುಮರದ ತಿಮ್ಮಕ್ಕ ಉದ್ಘಾಟಿಸಿದರು. ನಂತರ ಅವರ ಪುತ್ರ ಉಮೇಶ್ ತಿಮ್ಮಕ್ಕನವರ ಪರವಾಗಿ ಮಾತನಾಡಿ ಪ್ರಸ್ತುತ ದಿನಗಳಲ್ಲಿ ಜಾತಿ, ಜನಾಂಗದ ಆಧಾರದ ಮೇಲೆ ಫಲಿತಾಂಶ ಹೊಂದಿರುವ ವಿದ್ಯಾರ್ಥಿಗಳನ್ನು ಆಯಾ ಸಮುದಾಯಗಳು ಸನ್ಮಾನಿಸುತ್ತಿವೆ.

ಅವುಗಳನ್ನು ಕೈಬಿಟ್ಟು ವಿದ್ಯಾಭ್ಯಾಸದಲ್ಲಿ ಸಾಧನೆಗೈ ದಿರುವ ಎಲ್ಲಾ ವಿದ್ಯಾರ್ಥಿಗಳನ್ನು ಒಗ್ಗೂಡಿಸಿಕೊಂಡು ಗೌರವಿಸುವ ಕೆಲಸವಾಗಬೇಕು ಎಂದರು.

Amble Morarji Desai Residential School ವಿದ್ಯಾರ್ಥಿ ಜೀವನದಲ್ಲಿ ಮಕ್ಕಳು ಕೇವಲ ಅಂಕಗಳನ್ನು ಪಡೆದುಕೊಂಡರೆ ಸಾಲದು, ನಮ್ಮ ದೇಶದ ಸಂಸ್ಕೃತಿ, ಪರಂಪರೆಯನ್ನು ಬಾಲ್ಯದಿಂದಲೇ ಅಳವಡಿಸಿಕೊಳ್ಳಬೇಕು. ಆ ನಿಟ್ಟಿನಲ್ಲಿ ಪೋಷಕರು ಕೇವಲ ಅಂಕಗಳಿಗೆ ಮಾತ್ರ ಸೀಮಿತರಾಗಿಸದೇ ಭಾರತೀಯ ನೆಲಗಟ್ಟಿನ ಹಿರಿಮೆಯನ್ನು ಮೈಗೂಡಿಸಿಕೊಳ್ಳುವ ಕಾರ್ಯದಲ್ಲಿ ಪ್ರೇರೇಪಿಸಬೇಕು ಎಂದು ಹೇಳಿದರು.

ಇದೀಗ ಸರ್ಕಾರಗಳು ಸಾರ್ವಜನಿಕರಿಗೆ ಹಲವಾರು ಗ್ಯಾರಂಟಿಗಳನ್ನು ಉಚಿತವಾಗಿ ಘೋಷಿಸಿದೆ. ಇವುಗಳ ಬದಲು ಸರ್ಕಾರಿ ಶಾಲೆಗಳಲ್ಲಿ ಮಕ್ಕಳನ್ನು ಕಡ್ಡಾಯವಾಗಿ ಸೇರಿಸುವುದು, ಉನ್ನತ ವಿದ್ಯಾಭ್ಯಾಸದಲ್ಲಿ ಶೇ.90ರಷ್ಟು ಸ್ಥಾನವನ್ನು ಸರ್ಕಾರಿ ಶಾಲೆಯ ಮಕ್ಕಳಿಗೆ ನೀಡುವ ಆದ್ಯತೆಯನ್ನು ಪೂರೈಸುವ ಕೆಲಸಕ್ಕೆ ಕೈಹಾಕಿದರೆ ಮಾತ್ರ ಸಮಾಜದಲ್ಲಿ ಬಡಮಕ್ಕಳು ಅತಿಎತ್ತರಕ್ಕೆ ಬೆಳೆಯಲು ಸಾಧ್ಯ ಎಂದರು.

ಎಲ್ಲಾ ಜನಾಂಗದ ವಿದ್ಯಾರ್ಥಿಗಳಿಗೆ ಶ್ರೀ ದುರ್ಗಾ ಫೌಂಡೇಷನ್ ಟ್ರಸ್ಟ್ ಹಾಗೂ ಶ್ರೀ ಅನ್ನ ಪೂರ್ಣೇಶ್ವರಿ ಚಾರಿಟಿ ಫೌಂಡೇಷನ್ ಟ್ರಸ್ಟ್ ಯಾವುದೇ ತಾರತಮ್ಯವೆಸಗದೇ ಸರಿಸಮಾನಾಗಿ ಪ್ರತಿಭಾ ಪುರಸ್ಕಾರ ನೀಡುತ್ತಿರು ವುದು ಅತ್ಯಂತ ಖುಷಿ ತಂದಿದೆ.

ಇದೇ ರೀತಿಯಲ್ಲಿ ಸಂಘ-ಸಂಸ್ಥೆಗಳು ಜಾತಿ ಆಧಾರದ ಮೇಲೆ ಹೆಚ್ಚು ಗಮನಹರಿ ಸದೇ ಸಾಧನೆಗೈದಿರುವಂತಹ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸಬೇಕು ಎಂದರು.

ಪದ್ಮಭೂಷಣ ವಿಜೇತ ಸಾಲುಮರದ ತಿಮ್ಮಕ್ಕನವರು ಹಿಂದಿನಿಂದಲೇ ಪರಿಸರ ಬಗ್ಗೆ ಅಪಾರವಾದ ಕಾಳಜಿ ಹೊಂದಿದ್ದರು. ಮಕ್ಕಳಲ್ಲವೆಂಬ ಕೊರಗನ್ನು ಎಂದಿಗೂ ಹತ್ತಿರ ಸುಳಿಯದಂತೆ, ಮರಗಳನ್ನೇ ಹೆತ್ತಮಕ್ಕಳಂತೆ ಪ್ರತಿನಿತ್ಯ ಪೋಷಿಸಿ ಬೆಳೆಸಿರುವುದಕ್ಕೆ ಪ್ರಪಂಚದ 100ರ ಪ್ರಭಾವಿ ಅಗ್ರಪಟ್ಟಿಯಲ್ಲಿ ತಿಮ್ಮಕ್ಕನವರು ಹೆಸರು ದಾಖಲಾ ಗಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ವಿಷಯವಾಗಿದೆ ಎಂದರು.

ಡಾ|| ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ ಪ್ರಾಂಶುಪಾಲ ಕೆ.ಎಂ.ನಾಗೇಶ್ ಮಾತನಾಡಿ ಇಂದಿನ ಕಾಲಘಟ್ಟದ ಕೆಲವು ನ್ಯಾಷನಲ್ ಕಾಲೇಜುಗಳ ವಿದ್ಯಾರ್ಥಿಗಳು ಮಾದಕ ವಸ್ತುಗಳ ಚಟುವಟಿಕೆಯಿಂದ ದಾಸರಾಗಿರುವುದು ಸರ್ವೆ ಸಾಮಾನ್ಯವಾಗಿವೆ. ಇದರಿಂದ ಹೊರಬರಲು ಪೋಷಕರು ಮಕ್ಕಳಿಗೆ ಬಾಲ್ಯದಿಂದಲೇ ನೈತಿಕ ಶಿಕ್ಷಣ ಅಭ್ಯಾಸಿಸುವುದು ಅತಿಮುಖ್ಯ ಎಂದರು.

ಸಾಮಾಜಿಕ ಜಾಲತಾಣಗಳು, ಟಿವಿಯಲ್ಲಿ ಬರುವಂತಹ ಕಾಟೂನ್‌ಗಳಿಂದ ಮಕ್ಕಳ ಮನಸ್ಸು ಸ್ವಯಂಪ್ರೇರಿತ ರಾಗಿ ಅರಳುವ ಬದಲು ಕೆರಳಿಸುವತ್ತ ಚಿಂತನೆ ಮೂಡಿಸುತ್ತಿದೆ. ಇದನ್ನು ತಡೆಗಟ್ಟಲು ಪೋಷಕರು ಮಕ್ಕಳಿಗೆ ಕೆಲವು ಅಂಟಿಕೊಂಡಿರುವ ಜಾಲತಾಣದ ಬಗ್ಗೆ ಹೆಚ್ಚು ಗಮನಹರಿಸಿ ಅವುಗಳಿಂದ ಮುಕ್ತ ಗೊಳಿಸಲು ಮುಂದಾಗಬೇಕು ಎಂದು ಸಲಹೆ ಮಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶ್ರೀ ದುರ್ಗಾ ಫೌಂಡೇಷನ್ ಟ್ರಸ್ಟ್ ಅಧ್ಯಕ್ಷೆ ರೇಖಾ ಶ್ರೀನಿ ವಾಸ್ ವಿದ್ಯಾರ್ಥಿಗಳಿಗೆ ಜೀವನದಲ್ಲಿ ಇನ್ನಷ್ಟು ಹೆಚ್ಚು ಸಾಧನೆ ಮಾಡುವ ದೃಷ್ಟಿಯಿಂದ ಎಸ್.ಎಸ್.ಎಲ್.ಸಿ. ಯಿಂದಲೇ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಗಳನ್ನು ಆಯೋಜಿಸಿದೆ. ಮುಂದಿನ ದಿನಗಳಲ್ಲಿ ಸಾಧನೆಗೈದಿರುವ ಮಕ್ಕಳನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸ ಮಾಡಲಾಗುವುದು ಎಂದು ತಿಳಿಸಿದರು.

ಇದೇ ವೇಳೆ ಅಂಬಳೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಸುಮಾರು 11 ಮಂದಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಸಮಾಜ ಸೇವಕ ವಿಕ್ರಂ ಅಯ್ಯಂಗಾರ್, ಜಿಲ್ಲಾ ಒಕ್ಕಲಿರ ಸಂಘದ ಕಾರ್ಯದರ್ಶಿ ಎಂ.ಸಿ.ಪ್ರಕಾಶ್, ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಚಾರ್ಯ ಹೆಚ್.ಎಂ.ನಾಗರಾಜರಾವ್ ಕಲ್ಕಟ್ಟೆ, ಶಿವಮೊಗ್ಗ ಮಹಾನಗರ ಪಾಲಿಕೆ ಸದಸ್ಯೆ ಗೌರಿ ಶ್ರೀನಾಥ್, ಶ್ರೀ ಅನ್ನಪೂರ್ಣೇಶ್ವರಿ ಚಾರಿಟಿ ಫೌಂಢೇಷನ್ ಟ್ರಸ್ಟಿ ವಿನಾಯಕ ಜೆ.ಗಾಣ ಗ, ರೂಪನಾಯ್ಕ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Backward Classes Welfare Department ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶಾತಿಗೆ ಅರ್ಜಿ ಆಹ್ವಾನ

Backward Classes Welfare Department ಶಿವಮೊಗ್ಗ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ...

Klive Special Article ನವರಾತ್ರಿ ಎರಡನೇ ದಿನ.ದೇವಿಯ ಶ್ರೀಬ್ರಹ್ಮಚಾರಿಣಿ ರೂಪದಲ್ಲಿ ಆರಾಧನೆ. ...

Klive Special Article "ದಧಾನಾಂ ಕರಪದ್ಮಾಭ್ಯಾಂಅಕ್ಷಮಾಲಾ ಕಮಂಡಲೂ/ದೇವಿ ಪ್ರಸೀದತು ಮಯಿಬ್ರಹ್ಮಚಾರಿಣ್ಯನುತ್ತಮಾ//ಮೊದಲನೆಯ ದಿನ...

Jawahar Navodaya Vidyalaya ಗಾಜನೂರಿನ ನವೋದಯ ಶಾಲಾ ಪ್ರವೇಶಾತಿ 2025-26 ಪರೀಕ್ಷೆಗೆ ಆನ್ ಲೈನ್ ಅರ್ಜಿ ಆಹ್ವಾನ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯವು 2025-26ನೇ ಸಾಲಿಗೆ 9...