Anganwadi Centre ಚಿಕ್ಕಮಗಳೂರು ನಗರದ ಉಪ್ಪಳ್ಳಿ ಸಮೀಪದ ಅಂಗನವಾಡಿ ಕೇಂದ್ರದಲ್ಲಿ ಕಳೆದ 30 ವರ್ಷಗ ಳಿಂದ ಕಾರ್ಯನಿರ್ವಹಿಸಿದ ಕಾರ್ಯಕರ್ತೆ ಜಲಜಾಕ್ಷಿ ಜಯರಾಮೇಗೌಡ ಹಾಗೂ ಸಹಾಯಕಿ ನಾಗಮ್ಮ ಅವರು ನಿವೃತ್ತಿಗೊಂಡ ಹಿನ್ನೆಲೆಯಲ್ಲಿ ನಗರಸಭಾ ಸದಸ್ಯರ ನೇತೃತ್ವದಲ್ಲಿ ಕಾರ್ಯಕರ್ತೆಯರು ಬೀಳ್ಕೊಡುಗೆ ನೀಡಿದರು.
ಈ ವೇಳೆ ಮಾತನಾಡಿದ ನಗರಸಭಾ ಸದಸ್ಯ ಮುನೀರ್ ಅಹ್ಮದ್ ಉಪ್ಪಳ್ಳಿ ಸಮೀಪದ ಅಂಗನವಾಡಿ ಕೇಂದ್ರ ದಲ್ಲಿ ಹಲವಾರು ವರ್ಷಗಳಿಂದ ಮಕ್ಕಳನ್ನು ಪೋಷಿಸುವ ಮೂಲಕ ಉತ್ತಮ ಕೆಲಸ ಮಾಡಿರುವುದು ಹೆಮ್ಮೆಯ ವಿಷಯವಾಗಿದೆ. ಮುಂದಿನ ಜೀವನದಲ್ಲಿ ಇನ್ನಷ್ಟು ಸಮಾಜ ಸೇವೆಯಲ್ಲಿ ತೊಡಗುವಂತಾಗಲಿ ಎಂದರು.
ಈಗಾಗಲೇ ಉಪ್ಪಳ್ಳಿ ವಾರ್ಡಿನ ಅಂಗನವಾಡಿ ಕೇಂದ್ರಲ್ಲಿ ಹಳೆಯ ಬೋರ್‌ವೇಲ್‌ಗೆ ಮೋಟಾರ್ ಅಳವಡಿ ಸುವ ಮೂಲಕ ಕುಡಿಯುವ ನೀರಿನ ವ್ಯವಸ್ಥೆ, ಚರಂಡಿ, ಕನ್ನಡ ಶಾಲೆಯ ಪಕ್ಕದ ಅಂಗನವಾಡಿ ಕೇಂದ್ರಕ್ಕೆ 01ಲಕ್ಷ ರೂ. ವೆಚ್ಚದಲ್ಲಿ ಅಡುಗೆ ಕೋಣೆ ನಿರ್ಮಿಸಿ ಪೂರ್ಣಗೊಳಿಸಲಾಗಿದ್ದು ಇದೀಗ 62 ಲಕ್ಷ ರೂ. ವೆಚ್ಚದಲ್ಲಿ ನಾಲ್ಕು ಕೊಠಡಿಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ ಎಂದರು.
Anganwadi Centre ಈ ಸಂದರ್ಭದಲ್ಲಿ ಶಿಶು ಅಭಿವೃದ್ದಿ ಯೋಜನಾಧಿಕಾರಿ ಇಂಪಾ, ಮೇಲ್ವಿಚಾರಕಿ ಮಂಜುಳಾ, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಎಂ.ಅನ್ಸರ್ ಆಲಿ, ಉರ್ದು ಶಾಲೆಯ ಮುಖ್ಯ ಶಿಕ್ಷಕಿ ನಗೀನಾ ಪರ್ವೀನ್, ಶಿಕ್ಷಕರಾದ ಬಸಿರಾ, ಸುಜಾತ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಉಪಸ್ಥಿತರಿದ್ದರು.