2023-24 ಸಾಲಿಗೆ ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಅರ್ಜಿ ಆಹ್ವಾನಿಸಿದೆ.
ಪಿ.ಯು.ಸಿ ಮತ್ತು ಪಿ.ಯು.ಸಿ ಸಮಾನಾಂತರ ಕೋರ್ಸಿನ ವಿದ್ಯಾರ್ಥಿಗಳು ಹೊಸದಾಗಿ ಪ್ರವೇಶ ಬಯಸುವ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಹಾಗೂ ಪ್ರವರ್ಗ-1, 2ಎ, 2ಬಿ, 3ಎ, 3ಬಿ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿನಿಲಯದ ತಂತ್ರಾಂಶದಲ್ಲಿ ಜು.16 ರೊಳಗಾಗಿ ಅರ್ಜಿಯನ್ನು ಸಲ್ಲಿಸಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಗೆ ಸಲ್ಲಿಸಬೇಕಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ : 08183-229402/ 9480843192/ 9964749890ಗಳನ್ನು ಸಂಪರ್ಕಿಸುವಂತೆ ಸಾಗರ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
Department of Social Welfare ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಬೊಮ್ಮನಕಟ್ಟೆ ಹಾಗೂ ಭದ್ರಾವತಿ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯಕ್ಕೆ ಎಸ್.ಎಸ್.ಎಲ್.ಸಿ. ಉತ್ತೀರ್ಣರಾಗಿರುವ ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.
ಆಸಕ್ತರು ಸೇವಾಸಿಂಧು ತಂತ್ರಾಂಶಯದ ಮೂಲಕ ಜುಲೈ 15 ರೊಳಗಾಗಿ ಸಲ್ಲಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಿಸ್ತರಣಾಧಿಕಾರಿಗಳು ತಿಳಿಸಿದ್ದಾರೆ.
.
ಹೆಚ್ಚಿನ ಮಾಹಿತಿಗಾಗಿ ತಾಲೂಕು ವಿಸ್ತರಣಾಧಿಕಾರಿಗಳ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಉಪವಿಭಾಗ, 2ನೇ ಮಹಡಿ, ಹಳೆ ಡಿ.ಸಿ.ಕಚೇರಿ, ಶಿವಮೊಗ್ಗ, ದೂ.ಸಂ.: 08182-276258ನ್ನು ಸಂಪರ್ಕಿಸುವುದು.
2023-24 ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಪ್ರವರ್ಗ-1, ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿನಿಲಯಗಳಲ್ಲಿ ಮೆಟ್ರಿಕ್ ನಂತರದ ಹಾಗೂ ಹೊಸದಾಗಿ ಪ್ರವೇಶ ಬಯಸುವ ಪಿ.ಯು.ಸಿ ಮತ್ತು ಪಿ.ಯು.ಸಿ ಸಮಾನಾಂತರ ಕೋರ್ಸಿನ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
Department of Social Welfare ಅಸಕ್ತ ವಿದ್ಯಾರ್ಥಿಗಳು ವಿದ್ಯಾರ್ಥಿನಿಲಯದ ತಂತ್ರಾಂಶಯದಲ್ಲಿ ಜು.15 ರೊಳಗಾಗಿ ಅರ್ಜಿಯನ್ನು ಸಲ್ಲಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣ ಸಂಖ್ಯೆ : 08183-222129/ 8050770005ಗಳನ್ನು ಸಂಪರ್ಕಿಸುವುದು.