Friday, November 22, 2024
Friday, November 22, 2024

Corruption by Traffic Police Personnel ಚಿಕ್ಕಮಗಳೂರಿನಲ್ಲಿ ಟ್ರಾಫಿಕ್ ಪೊಲೀಸ್ ಸಿಬ್ಬಂದಿಯಿಂದ ಭ್ರಷ್ಟಾಚಾರ- ಆಮ್ ಆದ್ಮಿ ಪಕ್ಷ ಆರೋಪ

Date:

Corruption by Traffic Police Personnel ಚಿಕ್ಕಮಗಳೂರು, ನಗರದಲ್ಲಿ ಟ್ರಾಫಿಕ್ ಪೊಲೀಸ್ ಅಧಿಕಾರಿಗಳಿಂದ ಭಾರೀ ಪ್ರಮಾಣದಲ್ಲಿ ಭ್ರಷ್ಟಚಾರ ನಡೆಯುತ್ತಿದೆ. ಇದರಿಂದ ಜಿಲ್ಲೆಯ ಆರ್ಥಿಕ ಅಭಿವೃಧ್ದಿ ಹಾಗೂ ಪ್ರವಾಸೋದ್ಯಮಕ್ಕೆ ತೀವ್ರ ತೊಡಕಾಗುತ್ತಿರುವುದರಿಂದ ಸಮಸ್ಯೆ ಬಗೆಹರಿಸಬೇಕು ಎಂದು ಆಮ್‌ಆದ್ಮಿ ಪಕ್ಷವು ಶಾಸಕ ಹೆಚ್.ಡಿ.ತಮ್ಮಯ್ಯ ಅವರಿಗೆ ಅಂಚೆ ಮೂಲಕ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ.

ಈ ಸಂಬಂಧ ಎಎಪಿ ರಾಜ್ಯ ಜಂಟಿ ಕಾರ್ಯದರ್ಶಿ ಡಾ. ಕೆ.ಸುಂದರಗೌಡ ಗುರುವಾರ ಹೇಳಿಕೆಯಲ್ಲಿ ತಿಳಿಸಿ ಟ್ರಾಫಿಕ್ ಪೊಲೀಸರವರಿಂದ ಜನ ಸಾಮಾನ್ಯರಿಗೆ ಹೆಜ್ಜೆ ಹೆಜ್ಜೆಗೂ ಕೇಸ್ ದಾಖಲಿಸುವುದು, ವಿಚಾರಿಸಿದರೆ ಠಾಣೆಗೆ ಕರೆದೊಯ್ಯುವ ಮೂಲಕ ಹಿಂಸೆ ನೀಡುತ್ತಿರುವ ಪರಿಣಾಮ ಬಹಳಷ್ಟು ಮಂದಿಗೆ ಕಿರುಕುಳ ಉಂಟಾಗಿದೆ ಎಂದು ಹೇಳಿದ್ದಾರೆ.

ವಿದ್ಯಾರ್ಥಿಗಳು ಕಾಲೇಜಿಗೆ ತೆರಳಲು ಸಾಧ್ಯವಾಗುತ್ತಿಲ್ಲ. ಹೊರಗಡೆಯಿಂದ ಆಗಮಿಸುವ ಪ್ರವಾಸಿಗರಿಗೆ ತೊಂದರೆ ನೀಡುತ್ತಿದ್ದಾರೆ. ತೋಟ ಕಾರ್ಮಿಕರಿಗೆ ಸಾವಿರಾರು ಮೊತ್ತ ಅನಾವಶ್ಯಕವಾಗಿ ದಂಡ ಹಾಕುತ್ತಿದ್ದಾರೆ ಎಂದು ದೂರಿದ್ದಾರೆ.

ಚಿಕ್ಕಮಗಳೂರು ನಗರವು ಪ್ರವಾಸಿಗರ ತಾಣವಾಗಿರುವುದರಿಂದ ಯಾವುದೇ ಕಾರಣಕ್ಕೂ ಟ್ರಾಫಿಕ್ ಪೊಲೀಸರಿಗೆ ಸುಖ ಸುಮ್ಮನೆ ದಂಡ ವಿಧಿಸುವ ಅಧಿಕಾರ ಕೊಡಬಾರದು. ಸಾರ್ವಜನಿಕರ ಹಿತಾಸಕ್ತಿಯಿಂದ ಕೆಲಸ ಮಾಡಬೇಕು ಹಾಗೂ ಪ್ರತಿಯೊಂದು ಕಡೆಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಿ ತಪ್ಪಿತಸ್ಥರಿಗೆ ವಿರುದ್ಧ ಕ್ರಮ ಕೈಗೊಳ್ಳಲು ಡಿವೈಎಸ್‌ಪಿ ಅಧಿಕಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಕಾನೂನಿನಡಿಯಲ್ಲಿ ವಾಹನಗಳಿಗೆ ದಂಡವನ್ನು ಹಾಕುವುದಕ್ಕೆ ಆರ್.ಟಿ.ಓ. ಅಧಿಕಾರಿಗಳಿಗೆ ಅಧಿಕಾರವಿದೆ. ವಾಹನ ಸವಾರರಿಗೆ ಸುಖಸುಮ್ಮನೆ ಟ್ರಾಫಿಕ್ ಅಧಿಕಾರಿಗಳು ಪದೇ ಪದೇ ದಂಡ ಹಾಕುವುದನ್ನು ಮೊದಲು ನಿಲ್ಲಿಸಬೇಕು. ಓರ್ವ ವ್ಯಕ್ತಿ ಮೊದಲ ಬಾರಿ ಟ್ರಾಫಿಕ್ ನಿಯಮ ಉಲ್ಲಂಘಿಸಿದರೆ ಕಾನೂನು ಅರಿವು ಮೂಡಿಸುವ ಮೂಲಕ ತಿದ್ದುವ ಕೆಲಸ ಮಾಡಬೇಕು ಎಂದಿದ್ದಾರೆ.

Corruption by Traffic Police Personnel 2ನೇ ಭಾರಿಗೆ ತಪ್ಪಿಗೆ ಅದೇ ವ್ಯಕ್ತಿ ಸಿಲುಕಿದರೆ ದಂಡ ಹಾಕುವುದರಲ್ಲೇ ತಪ್ಪಿಲ್ಲ. ಆದರೆ ದಿನನಿತ್ಯ ಇದೇ ಉದ್ದೇಶದಿಂದ ಸಾರ್ವಜನಿಕ ನೆಮ್ಮದಿ ಹಾಳುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸಬಾರದು. ಒಂದು ವೇಳೆ ಇದನ್ನೇ ಮುಂದುವರೆಸಿದರೆ ಮುಂದಿನ ದಿನಗಳಲ್ಲಿ ಇಲಾಖೆಯ ವಿರುದ್ಧ ಧರಣಿ ಸತ್ಯಾಗ್ರಹ ಮೂಲಕ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Cooperation ಹಿರಿಯ ಸಹಕಾರಿ ಧುರೀಣ ಕೊಪ್ಪದ ಎಸ್.ಎನ್.ವಿಶ್ವನಾಥ್ ಗೆ ‘ ಸಹಕಾರಿ ರತ್ನ’ ಪ್ರಶಸ್ತಿ.

Department of Cooperation ಕರ್ನಾಟಕ ಸರ್ಕಾರದ ಕರ್ನಾಟಕ ಸಹಕಾರ ಮಹಾಮಂಡಲ ದ...

Kasturba Girls Junior College ಮಕ್ಕಳ ಪ್ರತಿಭೆ ಅನಾವರಣಗೊಳಿಸುವ ಪ್ರತಿಭಾ ಕಾರಂಜಿಗೆ ಇನ್ನಷ್ಟು ಶಕ್ತಿ ತುಂಬೋಣ- ಶಾಸಕ ಚನ್ನಬಸಪ್ಪ

Kasturba Girls Junior College ವೈವಿಧ್ಯತೆಯನ್ನು ಹೊಂದಿರುವ ನಮ್ಮ ರಾಷ್ಟ್ರದ ಸಂಸ್ಕೃತಿಯನ್ನು...