Saturday, June 20, 2026
Saturday, June 20, 2026

Veerashaiva Lingayat Community ವೀರಶೈವ ಲಿಂಗಾಯತ ಸಮುದಾಯದ ಶಾಸಕ ಸಂಸದರಿಗೆ ಸನ್ಮಾನ ಸಮಾರಂಭ

Date:

Veerashaiva Lingayat Community ವೀರಶೈವ ಲಿಂಗಾಯತ ಸಮುದಾಯದ ಎಲ್ಲಾ ಸಚಿವರು-ಸಂಸದರು ಹಾಗೂ ಶಾಸಕರಿಗೆ ಬೆಂಗಳೂರಿನಲ್ಲಿ ಜುಲೈ 5 ರಂದು ಅದ್ಧೂರಿ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಮಧ್ಯಕರ್ನಾಟಕ ಸಂಚಾಲಕರಾದ ಶ್ರೀಮತಿ ಲಲಿತಾ ಪ್ರಕಾಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.

ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಈಗಾಗಲೇ ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಸಮಾಜದ ಏಳಿಗೆಗಾಗಿ ಕಾರ್ಯನಿರ್ವಹಿಸುತ್ತಿದೆ. ಸಮಾಜದ ಅನೇಕ ಸಮಸ್ಯೆಗಳಿಗಾಗಿ ಹೋರಾಟ ಮಾಡುವಂತದ್ದು, ಹಾಗೂ ಅಭಿವೃದ್ಧಿಗಾಗಿ ನಿರಂತರ ಸಭೆ ಸಮಾರಂಭಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಅದರಂತೆ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಬಂದಿರುವ ವೀರಶೈವ-ಲಿಂಗಾಯತ ಸಮುದಾಯದ ಎಲ್ಲಾ ಸಚಿವರು ಹಾಗೂ ಪಕ್ಷಾತೀತವಾಗಿ ಎಲ್ಲಾ ಶಾಸಕರನ್ನು ಸನ್ಮಾನಿಸುವ
ಹಮ್ಮಿಕೊಳ್ಳಲಾಗಿದೆ ಎಂದರು.

ಕಾರ್ಯಕ್ರಮವನ್ನು ಜುಲೈ 5 ರಂದು ಸಂಜೆ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಹಮ್ಮಿಕೊಂಡಿದೆ. ಇದರ ದಿವ್ಯ ಸಾನಿಧ್ಯ ವನ್ನು ಬಾಳೆಹೊನ್ನೂರಿನ ರಂಭಾಪುರಿ ಪೀಠದ ಜಗದ್ಗುರಗಳಾದ ಪ್ರಸನ್ನ ರೇಣುಕಾ ಡಾ: ವೀರಸೋಮೇಶ್ವರ ರಾಜ ದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು ವಹಿಸಲಿದ್ದಾರೆಂದರು.

Veerashaiva Lingayat Community ಕಾರ್ಯಕ್ರಮದಲ್ಲಿ ನಾಡಿನ ವಿವಿಧ ಮಠಗಳ ಪೂಜ್ಯ ಸ್ವಾಮೀಜಿಯವರು, ಗಣ್ಯರು, ಉದ್ಯಮಿಗಳು ಸೇರಿದಂತೆ ವೀರಶೈವ ಲಿಂಗಾಯತ ಸಮುದಾಯದ ಉಪಸ್ಥಿತಿಯಲ್ಲಿ ನಡೆಯಲಿದೆ. ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Organization ಸಮಾಜಮುಖಿ ಸೇವೆಗಳ ಮೂಲಕ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ- ರೋಟರಿ ಗೌರ್ನರ್ ಕೆ.ಫಾಲಾಕ್ಷ

Rotary Organization ಮನುಕುಲದ ಮಾನವೀಯ ಸೇವೆಯಲ್ಲಿ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ ಪ್ರಪಂಚಾದ್ಯಂತ...

DC Shivamogga ಹುಲಿಕಲ್ ಘಾಟಿಯಲ್ಲಿ ಮಜಲು ಬಸ್ ವಾಹನಗಳ ಸಂಚಾರಕ್ಕೆ ಅವಕಾಶ- ಪ್ರಭುಲಿಂಗ ಕವಳಿಕಟ್ಟಿ

DC Shivamogga ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಜೂ. 18 ರಿಂದ ರಾಜ್ಯ...