Meteorological Department ನೈರುತ್ಯ ಮುಂಗಾರು ಮಾರುತ ರಾಜ್ಯವನ್ನು ಸಂಪೂರ್ಣ ಆವರಿಸಿದ್ದು, ಮುಂದಿನ ಒಂದೆರಡು ದಿನಗಳಲ್ಲಿ ಎಲ್ಲಾ ಕಡೆ ಮಳೆ ಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉಡುಪಿ ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆ ಆಗಲಿದೆ ಎಂದು ಇಲಾಖೆ ವರದಿ ಮಾಡಿದೆ.
Meteorological Department ರಾಜ್ಯದ ಕರಾವಳಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಕರಾವಳಿ ವ್ಯಾಪ್ತಿಯಲ್ಲಿ ಗಾಳಿ ವೇಗವು ಗಂಟೆಗೆ 45 ಕಿ.ಮೀನಿಂದ 55 ಕಿ.ಮೀ.ವೇಗದಲ್ಲಿ ಬೀಸಲಿದೆ. ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಇಲಾಖೆ ಮುನ್ಸೂಚನೆ ನೀಡಿದೆ.