Wednesday, August 12, 2026
Wednesday, August 12, 2026

SP Shivamogga ಸ್ವಯಂ ರಕ್ತದಾನ ಮಾಡಿ ಶಿಬಿರ ಉದ್ಘಾಟಿಸಿದ ಎಸ್. ಪಿ. ಮಿಥುನ್ ಕುಮಾರ್

Date:

SP Shivamogga ರಕ್ತದಾನ ಶ್ರೇಷ್ಠದಾನ ಊರಿನ ಎಲ್ಲಾ ಸಂಘ-ಸಂಸ್ಥೆಗಳು ಒಟ್ಟಾಗಿ ಸಮಾಜಮುಖಿ ಸೇವೆಯಲ್ಲಿ ತೊಡಗಿಕೊಂಡಿರುವುದು ತುಂಬಾ ಸಂತೋಷದ ವಿಚಾರ ಹಾಗೂ ರಕ್ತದಾನದ ಪುಣ್ಯ ಕಾರ್ಯದಲ್ಲಿ ಅತಿ ಹೆಚ್ಚು ರಕ್ತದಾನಿಗಳು ಭಾಗವಹಿಸಿರುವುದು ಅಭಿನಂದನೀಯ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಹೇಳಿದರು.

ಶಿರಾಳಕೊಪ್ಪದ ವಿವಿಧ ಸಂಘ-ಸಂಸ್ಥೆಗಳ ನೇತೃತ್ವದಲ್ಲಿ ಶಿಕಾರಿಪುರ ರಸ್ತೆಯ ವಾಲ್ಮೀಕಿ ಭವನದಲ್ಲಿ ರಕ್ತದಾನ ಶಿಬಿರ ಕಾರ್ಯಕ್ರಮದಲ್ಲಿ ಜಿಲ್ಲಾ ರಕ್ಷಣಾಧಿಕಾರಿ ರಕ್ತದಾನ ಮಾಡುವ ಮೂಲಕ ಶಿಬಿರ ಉದ್ಘಾಟಿಸಿ ಮಾತನಾಡಿದರು.

SP Shivamogga ಶಿಬಿರದಲ್ಲಿ ಎಲ್ಲ ಸಂಘ ಸಂಸ್ಥೆಗಳ ಸಂಪೂರ್ಣ ಪ್ರಯತ್ನ ಮತ್ತು ಸಹಕಾರದೊಂದಿಗೆ ಒಟ್ಟು 200 ಯೂನಿಟ್ ರಕ್ತ ಸಂಗ್ರಹವಾಯಿತು .ಮೆಗ್ಗಾನ್ ರಕ್ತ ನಿಧಿ ಮತ್ತು ರೆಡ್ ಕ್ರಾಸ್ ಸಂಜೀವಿನಿ ರಕ್ತ ನಿಧಿಗೆ ರಕ್ತವನ್ನು ಹಸ್ತಾಂತರಿಸಲಾಯಿತು.

ಸ್ಪೂರ್ತಿ ಫೌಂಡೇಶನ್ ಗೌರವಾಧ್ಯಕ್ಷ ಡಾ. ಪ್ರಭು ಸಾಹುಕಾರ್, ಡಾ. ಮಹೇಶ್, ಸ್ಪೂರ್ತಿ ಫೌಂಡೇಶನ್ ಕಾರ್ಯಾಧ್ಯಕ್ಷ ಹಂಸರಾಜ್ ಜೈನ್, ಊರಿನ ಪ್ರಮುಖರಾದ ಅಗಡಿ ಅಶೋಕ್, ಲಯನ್ಸ್ ಕ್ಲಬ್ ನ ಅಧ್ಯಕ್ಷ ಲಯನ್ ಶಿವಯೋಗಿ ಮತ್ತಿತರರಿದ್ದರು.
ಈ ಶಿಬಿರದ ನೇತೃತ್ವವನ್ನು ಸ್ಪೂರ್ತಿ ಫೌಂಡೇಶನ್ ವಹಿಸಿಕೊಂಡಿದ್ದು ಇದರಲ್ಲಿ ಲಯನ್ಸ್ ಕ್ಲಬ್ ಜೆಸಿಐ ಎಸ್‌ಐಒ ,ಹಲವು ಸಾಮಾಜಿಕ ಸಂಘ ಸಂಸ್ಥೆಗಳು, ವೃತ್ತಿಪರ ಸಂಘ ಸಂಸ್ಥೆಗಳು ಸಮುದಾಯ ಆರೋಗ್ಯ ಕೇಂದ್ರ , ಪೊಲೀಸ್ ಇಲಾಖೆ ,ಅರಣ್ಯ ಇಲಾಖೆ ಇತ್ಯಾದಿ ಊರಿನ ಪ್ರಮುಖ ಸಂಘ ಸಂಸ್ಥೆಗಳು ಕೈಜೋಡಿಸಿದ್ದವು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...