Meteorological Department ಕರ್ನಾಟಕದ 6 ಜಿಲ್ಲೆಗಳಲ್ಲಿ ಜುಲೈ 4ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಕೊಡಗು ,ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗಲಿದೆ.
Meteorological Department ಎಚ್ಎಎಲ್ನಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕುಂದಾಪುರದಲ್ಲಿ 7 ಸೆಂ.ಮೀ ಮಳೆಯಾಗಿದೆ, ಕ್ಯಾಸಲ್ ರಾಕ್, ಶಿರಾಲಿ, ಗೋಕರ್ಣ, ಸಿದ್ದಾಪುರ,ಯಲ್ಲಾಪುರ, ಲೋಂಡಾ, ತಾಳಗುಪ್ಪ, ಲಿಂಗನಮಕ್ಕಿ, ಕೊಪ್ಪ ಅಂಕೋಲಾ, ಕಾರವಾರ, ಕೊಲ್ಲೂರು, ಕದ್ರಾ, ಹೊನ್ನಾವರ, ಕುಮಟಾ, ಕೋಟ, ಸಿದ್ದಾಪುರ, ಗೇರುಸೊಪ್ಪ, ಮಂಕಿ, ಪಣಂಬೂರು, ಸುಬ್ರಹ್ಮಣ್ಯ, ಮಾನಿ, ಮುಲ್ಕಿ, ಮಂಗಳೂರು, ಉಡುಪಿ, ಕಾರ್ಕಳದಲ್ಲಿ ಮಳೆಯಾಗಿದೆ.