Thursday, June 18, 2026
Thursday, June 18, 2026

Protest in Shikaripura ಶಿಕಾರಿಪುರದಲ್ಲಿ ಹಿಂದೂ ಕಾರ್ಯಕರ್ತರ ಪ್ರತಿಭಟನೆ

Date:

Protest in Shikaripura ಶಿವಮೊಗ್ಗದ ಶಿಕಾರಿಪುರದಲ್ಲಿ ಹಿಂದೂಗಳ ಮೇಲಿನ ಹಲ್ಲೆ ಖಂಡಿಸಿ, ಶಿಕಾರಿಪುರದಲ್ಲಿ ಪ್ರತಿಭಟನೆ ನಡೆಸಿದರು.

ಶಿಕಾರಿಪುರ ಜಾಗೃತ ನಾಗರೀಕ ವೇದಿಕೆಯಿಂದ ಪ್ರತಿಭಟನೆ ನಡೆಸಿದರು. ಗೋ ಅಕ್ರಮ ಸಾಗಾಟ ವಿರೋಧಿಸಿ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗಿಯಾಗಿದ್ದರು.

ಶಿಕಾರಿಪುರ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಾಗಿದ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು.

ಹಿಂದೂ ವಿರೋಧಿ ಕೃತ್ಯಗಳಿಗೆ ಕಡಿವಾಣ ಹಾಕಲು ಸರ್ಕಾರಕ್ಕೆ ಪ್ರತಿಭಟನಾಕಾರರು ಒತ್ತಾಯಿಸಿದರು.

ಹಿಂದೂ ಕಾರ್ಯಕರ್ತರ ಮೇಲಿನ ಕೇಸ್ ವಾಪಸ್‌ ಪಡೆಯಲು ಪ್ರತಿಭಟನಾಕಾರರು ಆಗ್ರಹಿಸಿದರು.

ಪ್ರತಿಭಟನೆ ವೇಳೆಯಲ್ಲಿ ಭಗತ್ ಸಿಂಗ್, ಸಾವರ್ಕರ್, ಶಿವಾಜಿ ಫೋಟೋ ಹಾಗೂ ಭಗವಾ ದ್ವಜವನ್ನು ಪ್ರತಿಭಟನಾಕಾರರು ಪ್ರದರ್ಶಿಸಿದರು.

ಪ್ರತಿಭಟನೆ ವೇಳೆ ಶಿಕಾರಿಪುರ ಪಟ್ಟಣ ಸ್ವಯಂಪ್ರೇರಿತ ಬಂದ್ ಕೈಗೊಳ್ಳಲಾಗಿತ್ತು. ಪೊಲೀಸರು
ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಂಡಿದ್ದರು.

ಕಳೆದ ಕೆಲ ದಿನಗಳ ಹಿಂದೆಯಷ್ಟೇ ಶಿಕಾರಿಪುರದಲ್ಲಿ ಗಲಾಟೆ ನಡೆದಿತ್ತು. ತಾಲೂಕಿನ ಪುಣೇದಹಳ್ಳಿ ಬಳಿ ಗೋಮಾಂಸ ಸಾಗಾಟ ವೇಳೆ ತಡೆದು, ಪೊಲೀಸರಿಗೆ ಹಿಂದೂ ಯುವಕರು ಮಾಹಿತಿ ನೀಡಿದ್ದರು.

Protest in Shikaripura ಇದರಿಂದಾಗಿ ಗ್ರಾಮಾಂತರ ಪೋಲಿಸ್ ಠಾಣೆ ಎದುರು ಎರಡು ಕೋಮಿನ ಜನ ನೆರೆದಿದ್ದರು.ಠಾಣೆ ಎದುರು ಗಲಾಟೆ- ಹಲ್ಲೆ ನಡೆದು ಬಿಗುವಿನ ವಾತವರಣ ನಿರ್ಮಾಣವಾಗಿತ್ತು.

ಘಟನೆ ಸಂಬಂಧ ಶಿಕಾರಿಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...