Saturday, December 6, 2025
Saturday, December 6, 2025

Chikkamagaluru Town Government Pre-Graduation Girls’ High School ಸ್ವಾತಂತ್ರ್ಯ ಚಳವಳಿಯಲ್ಲಿ ರಾಷ್ಟ್ರಪಿತರೊಂದಿಗೆ ಕೈ ಜೋಡಿಸಿದ ಸೇವಾದಳ -ಹಮೀದ್ ಸಬ್ಬೆನಹಳ್ಳಿ

Date:

Chikkamagaluru Town Government Pre-Graduation Girls’ High School ಭಾರತ ಸೇವಾದಳ ಸ್ವಾತಂತ್ರ‍್ಯ ಹೋರಾಟಗಾರರನ್ನು ಹುಟ್ಟು ಹಾಕಿದ ಹಾಗೂ ಚಳುವಳಿಯಲ್ಲಿ ರಾಷ್ಟçಪಿತ ಮಹಾತ್ಮಾ ಗಾಂಧೀಜಿಯವರಿಗೆ ಕೈಜೋಡಿಸಿದಂತ ಏಕೈಕ ಸಂಸ್ಥೆ ಎಂದು ಭಾರತ ಸೇವಾದಳ ತಾಲೂಕು ಅಧ್ಯಕ್ಷ ಹಮೀದ್ ಸಬ್ಬೆನಹಳ್ಳಿ ಹೇಳಿದರು.

ಚಿಕ್ಕಮಗಳೂರು ಪಟ್ಟಣದ ಸರ್ಕಾರಿ ಪದವಿ ಪೂರ್ವ ಬಾಲಿಕಾ ಪ್ರೌಢಶಾಲೆಯಲ್ಲಿ ಭಾರತ ಸೇವಾದಳದ ತರಬೇತಿ ಪಡೆದ ಶಿಕ್ಷಕರಿಗಾಗಿ ಇತ್ತೀಚೆಗೆ ಏರ್ಪಡಿಸಲಾಗಿದ್ದ ಮಿಲಾಪ ಶಿಬಿರ ಹಾಗೂ ಪುನಶ್ಚೇತನ ಕಾರ್ಯಗಾರದಲ್ಲಿ ಸಮಾ ರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ದೇಶಸೇವೆಯಲ್ಲಿ ತೊಡಗಿದ ಸೇವಾದಳದ ಶಾಖೆಗಳನ್ನು ಎಲ್ಲಾ ಶಾಲೆಗಳಲ್ಲೂ ತೆರೆಯಬೇಕು. ಆ ಮೂಲಕ ಇಂದಿನ ಪೀಳಿಗೆಯಲ್ಲಿ ದೇಶಭಕ್ತಿ ಬೆಳೆಸಬೇಕು. ಸೇವಾದಳದ ಶಿಕ್ಷಕರು ಮಕ್ಕಳಲ್ಲಿ ರಾಷ್ಟçಭಕ್ತಿ, ದೇಶಪ್ರೇಮ, ಶಿಸ್ತು, ಸೇವಾಮನೋಭಾವ ಮತ್ತು ನಾಯಕತ್ವ ಗುಣ ಬೆಳೆಸುವ ಮೂಲಕ ದೇಶವನ್ನು ಅಭಿವೃದ್ದಿಪಡಿಸಬೇಕು ಎಂದರು.

ತಾಲೂಕು ದೈಹಿಕ ಶಿಕ್ಷಣ ಪರವೀಕ್ಷಕ ಶ್ರೀನಿವಾಸ್ ಮಾತನಾಡಿ ಪ್ರತಿಯೊಂದು ಶಾಲೆಯಲ್ಲಿ ಸೇವಾದಳದ ಶಾಖೆಗಳನ್ನು ತೆರೆದು ಸೇವಾದಳದ ವಾರ್ಷಿಕ ಕಾರ್ಯಕ್ರಮದ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕೆಂದು ತಿಳಿಸಿದರು.

ಭಾರತ ಸೇವಾದಳದ ಜಿಲ್ಲಾ ಕಾರ್ಯದರ್ಶಿ ಹಂಪಯ್ಯ ಮಾತನಾಡಿ ಲಕ್ಷಾಂತರ ದೇಶಭಕ್ತರು ಮತ್ತು ಸ್ವಾತಂತ್ರ ಹೋರಾಟಗಾರರನ್ನು ದೇಶಕ್ಕೆ ಕೊಟ್ಟ ಭಾರತ ಸೇವಾದಳ ಇತ್ತೀಚಿನ ವರ್ಷಗಳಲ್ಲಿ ಸೊರಗುತ್ತಿದ್ದು ಅದು ಕಾಪಾಡಿ ಉಳಿಸಿ ಬೆಳೆಸುವ ಹೊಣೆ ಸೇವಾದಳ ಶಿಕ್ಷಕರ ಮೇಲಿದೆ ಎಂದು ತಿಳಿಸಿದರು.

ಸೇವಾದಳದ ಜಿಲ್ಲಾ ಸಂಘಟಕ ಚಂದ್ರಕಾಂತ್ ಪ್ರಾಸ್ತಾವಿಕವಾಗಿ ಮಾತನಾಡಿ ಭಾರತ ಸೇವಾದಳದ ಇಡೀ ವರ್ಷದ ಕಾರ್ಯಕ್ರಮದ ರೂಪರೇಷೆಗಳನ್ನು ತಯಾರಿಸುವ ನಿಟ್ಟಿನಲ್ಲಿ ಈ ಕಾರ್ಯಗಾರವನ್ನು ಹಮ್ಮಿ ಕೊಳ್ಳಲಾಗಿದೆ ಎಂದು ತಿಳಿಸಿದರು.

ಇದೇ ವೇಳೆ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ರಾಧಮ್ಮ ಮತ್ತು ಮೂಡಿಗೆರೆ ಸರ್ಕಾರಿ ಬಾಲಿಕಾ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಶೌಕತ್‌ಅಲಿ ಅವರು ನಿವೃತ್ತಿಗೊಂಡ ಹಿನ್ನೆಲೆಯಲ್ಲಿ ಸನ್ಮಾನಿಸಲಾಯಿತು.

ತಾಲೂಕು ಘಟಕಕ್ಕೆ ನೂತನವಾಗಿ ಆಯ್ಕೆಯಾದ ಅಧ್ಯಕ್ಷರಾದ ಹಮೀದ್, ಕಾರ್ಯದರ್ಶಿ ವಿಶ್ವನಾಥ್, ಖಜಾಂಚಿ ಮಂಜುನಾಥಚಾರಿ ಅವರನ್ನು ಅಭಿನಂದಿಸಲಾಯಿತು.

Chikkamagaluru Town Government Pre-Graduation Girls’ High School ಈ ಸಂದರ್ಭದಲ್ಲಿ ಭಾರತ ಸೇವಾದಳದ ಜಿಲ್ಲಾ ಸಮಿತಿ ಸದಸ್ಯರಾದ ಬಸವರಾಜು, ಶಾಂತಕುಮಾರ್, ಮೂಡಿಗೆರೆ ತಾಲೂಕು ಸಂಘಟಕ ಡಾ ಫೈರೋಜ್ ಅಹಮದ್, ತಾಲೂಕು ದೈಹಿಕ ಶಿಕ್ಷಣ ಸಂಘದ ಅಧ್ಯಕ್ಷ ಪ್ರೇಮ್ ಕುಮಾರ್, ಶ್ರೀಮತಿ ವೇಣಿ ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿಗಳಾದ ಶಿವರಾಮೇಗೌಡ, ತಿಮ್ಮಪ್ಪ ಶ್ರೀನಿವಾಸ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...