Sunday, August 2, 2026
Sunday, August 2, 2026

M. B. Patil ಪ್ರತಿಷ್ಠಿತ ಟಾಟಾ ಟೆಕ್ನಾಲಜೀಸ್ ಕಂಪನಿಯಿಂದ ರಾಜ್ಯದಲ್ಲಿ ₹ 2000 ಹೂಡಿಕೆ ಪ್ರಸ್ತಾಪ- ಸಚಿವ ಎಂ.ಬಿ.ಪಾಟೀಲ್

Date:

M. B. Patil ಪ್ರತಿಷ್ಠಿತ ಟಾಟಾ ಟೆಕ್ನಾಲಜೀಸ್ ಕಂಪನಿಯು 2000 ಕೋಟಿ ರೂಪಾಯಿ ಹೂಡಿಕೆ ಮಾಡಿ ರಾಜ್ಯದಲ್ಲಿ ಮೂರು ಸಾಮಾನ್ಯ ಎಂಜಿನಿಯರಿಂಗ್ ಸೌಲಭ್ಯಗಳ ಕೇಂದ್ರ (ಸಿ ಇ ಎಫ್ ಸಿ- ಕಾಮನ್ ಎಂಜಿನಿಯರಿಂಗ್ ಫೆಸಿಲಿಟಿ ಸೆಂಟರ್)ಗಳನ್ನು ಸ್ಥಾಪಿಸಲು ಮುಂದೆ ಬಂದಿದೆ.

ಕಂಪನಿಯ ಉನ್ನತ ಅಧಿಕಾರಿಗಳು ಬುಧವಾರ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ ಅವರನ್ನು ವಿಧಾನಸೌಧದ ಕಚೇರಿಯಲ್ಲಿ ಭೇಟಿಯಾಗಿ ಈ ಸಂಬಂಧ ಪ್ರಸ್ತಾವ ಸಲ್ಲಿಸಿ ಮಾತುಕತೆ ನಡೆಸಿದರು.

ವಿಶೇಷವಾಗಿ ಅತಿ ಸಣ್ಣ, ಸಣ್ಣ ಮತ್ತು ಮಧ್ಯಮ ಉದ್ದಿಮೆಗಳನ್ನು (ಎಂಎಸ್ಎಂಇ) ಗಳನ್ನು ಗಮನದಲ್ಲಿರಿಸಿಕೊಂಡು ಈ ಘಟಕಗಳ ಕೇಂದ್ರಗಳನ್ನು ಸ್ಥಾಪಿಸುವುದು ಕಂಪನಿಯ ಉದ್ದೇಶವಾಗಿದೆ. ಸರ್ಕಾರ‌ ಖಾಸಗಿ ಸಹಭಾಗಿತ್ವದ ಪಿಪಿಪಿ ಮಾದರಿಯಲ್ಲಿ ಇದನ್ನು ಸ್ಥಾಪಿಸುವ ಯೋಜನೆಯಿದ್ದು, ಟಾಟಾ ಟೆಕ್ನಾಲಜೀಸ್ ಶೇಕಡ 70ರಷ್ಟು ಹೂಡಿಕೆ ಮಾಡಿದರೆ ಸರ್ಕಾರದ ಪಾಲು ಶೇಕಡ 30ರಷ್ಟು ಇರಲಿದೆ ಎಂದು ಸಚಿವ ಎಂ ಬಿ ಪಾಟೀಲ ತಿಳಿಸಿದ್ದಾರೆ.

ಎಂಎಸ್ಎಂಇಗಳಿಗಾಗಿ ಸಿ.ಇ.ಎಫ್.ಸಿ. ಸ್ಥಾಪನೆ ಸಂಬಂಧ ಪ್ರಸ್ತಾವ ಸಲ್ಲಿಕೆಯಾಗಿರುವುದು ರಾಜ್ಯದಲ್ಲಿ ಇದೇ ಮೊದಲು ಎನ್ನಲಾಗಿದೆ.

ಪ್ರತಿ ಒಂದು ಕೇಂದ್ರಕ್ಕೆ ಸುಮಾರು 630 ಕೋಟಿ ರೂಪಾಯಿ ವೆಚ್ಚವಾಗಲಿದೆ.
ಇವುಗಳಿಂದ ಈಗ ಹೆಚ್ಚಿನ ಸಂಖ್ಯೆಯಲ್ಲಿ ಸ್ಥಾಪನೆಯಾಗುತ್ತಿರುವ
ಅಡ್ವಾನ್ಸ್ ಮ್ಯಾನಫ್ಯಾಕ್ಚರಿಂಗ್ 4.0, ಎಲೆಕ್ಟ್ರಿಕ್ ವೆಹಿಕಲ್ ಟೆಸ್ಟಿಂಗ್ ಮತ್ತು ಬಾಹ್ಯಾಕಾಶ ಹಾಗೂ ರಕ್ಷಣಾ ವಲಯದ ಉದ್ದಿಮೆಗಳಿಗೆ ಹೆಚ್ಚಿನ ಉಪಯೋಗ ಆಗುತ್ತದೆ. ಅದೇ ರೀತಿ ಈ ವಲಯಗಳ ಸ್ಟಾರ್ಟ್ ಅಪ್ ಗಳಿಗೂ ಇದರಿಂದ ಹೆಚ್ಚಿನ ಅನುಕೂಲವಾಗುತ್ತದೆ ಎಂದು ವಿವರಿಸಿದರು.

ಈ ಪ್ರಸ್ತಾವ‌ ಸ್ವಾಗತಾರ್ಹ. ಸರ್ಕಾರವೂ ಎಂ.ಎಸ್.ಎಂ.ಇ.ಗಳನ್ನು ಬಲಪಡಿಸಲು ಒತ್ತು ಕೊಟ್ಟಿದೆ. ಪ್ರತಿ ಕೇಂದ್ರಕ್ಕೆ ಸುಮಾರು ಐದು ಎಕರೆಯಷ್ಟು ಜಾಗ ಬೇಕಾಗಲಿದ್ದು, ಇದನ್ನು ಎಲ್ಲಿ ಕೊಡಬೇಕೆಂಬ ಬಗ್ಗೆ ಬರುವ ದಿನಗಳಲ್ಲಿ ನಿರ್ಧರಿಸಲಾಗುತ್ತದೆ ಎಂದು ಅವರು ಹೇಳಿದರು.

ಟಾಟಾ ಟೆಕ್ನಾಲಜೀಸ್ ಅಧ್ಯಕ್ಷ ಪವನ್ ಭಗೇರಿಯಾ, ಉಪಾಧ್ಯಕ್ಷ ಪುಷ್ಕರಾಜ್ ಕೌಲಗೂಡ್, ಮುಖ್ಯಸ್ಥ ಪ್ರವೀಣ್ ದಿವೇಕರ್ ಅವರು ಇದ್ದರು.
M. B. Patil ಕೈಗಾರಿಕೆ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತರಾದ ಗುಂಜನ್ ಕೃಷ್ಣ ಅವರೂ ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...