ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಸೃಷ್ಟಿಯಾಗಿರುವ ಜೋವಾದ್ ಚಂಡಮಾರುತ ಡಿ.4ಕ್ಕೆ ಓಡಿಶಾ, ಆಂಧ್ರಪ್ರದೇಶ ಕರಾವಳಿಗೆ ಅಪ್ಪಳಿಸಲಿದೆ. ಉಭಯ ರಾಜ್ಯಗಳು ಸೈಕ್ಲೋನ್ ಎದುರಿಸಲು ಸಕಲ ರೀತಿಯಲ್ಲಿ ಸಜ್ಜಾಗುತ್ತಿವೆ.
ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಚಂಡಮಾರುತ ಎದುರಿಸಲು ಸಿದ್ಧತೆ ಪರಿಶೀಲಿಸಲು ದಿಲ್ಲಿಯಲ್ಲಿ ಉನ್ನತ ಮಟ್ಟದ ಸಭೆ ನಡೆಸಿದರು.ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸುವುದು, ನೆರವಿನ ಕೇಂದ್ರಗಳ ಸ್ಥಾಪನೆ, ಸಹಾಯವಾಣಿ, ಎನ್ ಡಿಆರ್ ಎಫ್ ಮತ್ತು ಎಸ್ ಡಿ ಆರ್ ಎಫ್ ಪಡೆಗಳ ನಿಯೋಜನೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ.
ಚಂಡಮಾರುತದ ಪರಿಣಾಮ ಶುಕ್ರವಾರದಿಂದಲೇ ಒಡಿಶಾ ಮತ್ತು ಆಂಧ್ರಪ್ರದೇಶದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಡಿಸೆಂಬರ್ 4ರಂದು ಬೆಳಿಗ್ಗೆ ಚಂಡಮಾರುತ ಆಂಧ್ರ ಮತ್ತು ಒಡಿಶಾ ತೀರ ಪ್ರವೇಶಿಸಲಿದೆ. ಆದರೆ ಚಂಡಮಾರುತದಿಂದ ರಾಜ್ಯದ ಮೇಲೆ ಹೆಚ್ಚಿನ ಪರಿಣಾಮ ಇಲ್ಲವೆಂದು ಹವಾಮಾನ ಇಲಾಖೆ ವರದಿ ಮಾಡಿದೆ.
ಜೋವಾದ್ ವಿರುದ್ಧ ಕೇಂದ್ರ ಸನ್ನದ್ಧ – ಪ್ರಧಾನಿ
Date: