Saturday, December 6, 2025
Saturday, December 6, 2025

DVS Arts and Science college ಐದು ಭಾಗ್ಯಗಳು ಬಡವರ ದೃಷ್ಟಿಯಿಂದ ಬಹಳ ಪ್ರಮುಖ- ಪ್ರೊ.ಬಿ.ಪಿ.ವೀರಭದ್ರಪ್ಪ

Date:

DVS Arts and Science college ದೇಶದಲ್ಲಿಯೇ ಕರ್ನಾಟಕ ರಾಜ್ಯವು ಅತ್ಯಂತ ಮುಂದುವರೆದಿದ್ದು, ಪ್ರಗತಿಪಥದಲ್ಲಿ ಹಾಗೂ ಅಭಿವೃದ್ಧಿಯ ಹಾದಿಯಲ್ಲಿ ಮುನ್ನಡೆಯುತ್ತಿದೆ ಎಂದು ಕುವೆಂಪು ವಿಶ್ವ ವಿದ್ಯಾಲಯ ಕುಲಪತಿ ಪ್ರೊ. ಬಿ.ಪಿ.ವೀರಭದ್ರಪ್ಪ ಹೇಳಿದರು.

ದೇಶಿಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಅರ್ಥಶಾಸ್ತ್ರ ವಿಭಾಗ, ಕುವೆಂಪು ವಿಶ್ವವಿದ್ಯಾಲಯ ಅರ್ಥಶಾಸ್ತ್ರ ಅಧ್ಯಾಪಕರ ಸಂಘ, ಡಿವಿಎಸ್ ಸಂಜೆ ಕಾಲೇಜು, ಐಕ್ಯೂಎಸಿ ಘಟಕ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ “ ಒಂದು ದಿನದ ರಾಜ್ಯಮಟ್ಟದ ವಿಚಾರ ಸಂಕಿರಣ, ಕರ್ನಾಟಕ ರಾಜ್ಯ ಬಜೆಟ್ ವಿಶ್ಲೇಷಣೆ 2023-24” ವಿಶೇಷ ಕಾರ್ಯಕ್ರಮ ಮಾತನಾಡಿದರು.

ಸಾರ್ವಜನಿಕರ ಕಲ್ಯಾಣದ ದೃಷ್ಠಿಯಿಂದ ಸರ್ಕಾರವು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಐದು ಭಾಗ್ಯಗಳು ಬಡವರ ದೃಷ್ಠಿಯಿಂದ ಬಹಳ ಪ್ರಮುಖ ಆಗಿದ್ದು, ಸಾಲದ ದೃಷ್ಠಿಯಿಂದ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ತಿಳಿಸಿದರು.

DVS Arts and Science college ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಚಾರ್ಯ ಡಾ. ಎಂ.ಎಂ.ವೆಂಕಟೇಶ್ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಸಹಪ್ರಾಧ್ಯಾಪಕ ಡಾ. ಎಚ್.ಎಂ.ಶಿವಕುಮಾರ್, ಸಹ್ಯಾದ್ರಿ ಕಲಾ ಕಾಲೇಜಿನ ಪ್ರಾಚಾರ್ಯ ಡಾ. ಕೆ.ಬಿ.ಧನಂಜಯ್, ಜೆಎನ್‌ಎನ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ಬಿ.ಎಸ್.ಶ್ರೀನಿವಾಸಮೂರ್ತಿ, ಡಾ. ಅಶ್ವಿನಿ ಬಿದರಹಳ್ಳಿ, ಪ್ರೊ. ಪವನಕುಮಾರ್, ಪ್ರೊ. ಟಿ.ಆರ್.ಮಂಜುನಾಥ್ ಮತ್ತಿತರರು ಉಪಸ್ಥಿರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...