Saturday, December 6, 2025
Saturday, December 6, 2025

Government Primary School Uppalli ಸಮಾಜದಲ್ಲಿನ ಅಸ್ಪೃಶ್ಯತೆ, ಜಾತೀಯತೆಯನ್ನ ತೊಲಗಿಸಲು ಶಿಕ್ಷಣದಿಂದ ಸಾಧ್ಯ- ಕೆ.ಭರತ್

Date:

Government Primary School Uppalli ಶಿಕ್ಷಣದಿಂದ ಮಾತ್ರ ಸಮಾಜಕ್ಕೆ ಅಂಟಿಕೊಂಡಿರುವ ಅಸ್ಪ್ಯಶ್ಯತೆ, ಜಾತೀಯತೆ ಹಾಗೂ ಮೌಡ್ಯತೆಯ ಪಿಡುಗುಗಳನ್ನು ತೊಲಗಿಸಲು ಸಾಧ್ಯ ಎಂದು ಸರ್ವಧರ್ಮ ಸೇವಾ ಸಂಸ್ಥೆ ಅಧ್ಯಕ್ಷ ಕೆ.ಭರತ್ ಹೇಳಿದರು.

ಚಿಕ್ಕಮಗಳೂರು ನಗರದ ಹಳೇ ಉಪ್ಪಳ್ಳಿ ಸಮೀಪದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಲಾಗಿದ್ದ ಉಚಿತ ಪುಸ್ತಕ ಹಾಗೂ ಲೇಖನ ಸಾಮಾಗ್ರಿ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳು ವಿದ್ಯಾರ್ಥಿ ಜೀವನದಲ್ಲಿ ಹೆಚ್ಚು ಆಸಕ್ತಿಯನ್ನು ವಿದ್ಯಾಭ್ಯಾಸಕ್ಕೆ ನೀಡಿದರೆ ಮುಂದಿನ ಭವಿಷ್ಯದ ದಿನಗಳಲ್ಲಿ ಸಮಾಜದ ಉನ್ನತ ಅಧಿಕಾರಿಯಾಗಿ ಕಾರ್ಯನಿರ್ವಹಿಸಬಹುದು. ಜೊತೆಗೆ ದೀನ, ದಲಿತರ ಹಾಗೂ ಶೋಷಿತರಿಗೆ ಸಹಾಯಹಸ್ತ ಚಾಚುವ ಮೂಲಕ ಸ್ಪಂದಿಸಬಹುದು ಎಂದು ಕಿವಿಮಾತು ಹೇಳಿದರು.

Government Primary School Uppalli ವಿದ್ಯೆಯಿಂದ ಮಾತ್ರ ಕಳೆದುಕೊಂಡಿದ್ದನ್ನು ಮರಳಿ ಪಡೆಯಲು ಸಾಧ್ಯ. ಆದ್ದರಿಂದ ಸಮಾಜದ ಮಕ್ಕಳು ಉನ್ನತ ಶಿಕ್ಷಣ ಪಡೆಯುವತ್ತ ಗಮನಹರಿಸಬೇಕು. ಪೋಷಕರು ಕೂಡಾ ಮಕ್ಕಳ ಶೈಕ್ಷಣ ಕ ಪ್ರಗತಿಗೆ ಪ್ರೋತ್ಸಾಹಿಸ ಸಬೇಕು ಎಂದು ಕರೆ ನೀಡಿದರು.

ಮಕ್ಕಳ ಶಿಕ್ಷಣಕ್ಕೆ ಆರ್ಥಿಕ ಹಾಗೂ ಇತರೆ ಯಾವುದೇ ರೀತಿಯ ಸಮಸ್ಯೆಗಳಿರುವ ಸಂಬಂಧ ಸುಮಾರು 16 ವರ್ಷಗಳಿಂದ ಪುಸ್ತಕ ವಿತರಣೆಯನ್ನು ಮಾಡಲಾಗಿದೆ. ಮಧ್ಯದಲ್ಲೇ ಕೆಲವು ವರ್ಷಗಳು ಕೊರೊನಾ ಸಂದರ್ಭದಲ್ಲಿ ಮಾತ್ರ ಸ್ಥಗಿತವಾಗಿತ್ತು. ಇದೀಗ ಪುನಃ ಸಾಮಾಜಿಕ ಕಳಕಳಿ ಕಾರ್ಯಕ್ರಮ ರೂಪಿಸಲಾಗಿದೆ ಎಂದು ತಿಳಿಸಿದರು.

ನಗರಸಭಾ ಸದಸ್ಯ ಮುನೀರ್ ಅಹ್ಮದ್ ಮಾತನಾಡಿ ಶಾಲೆಯ ಮೂಲ ಕೊರತೆಯ ಸಂಬಂಧವಾಗಿ ಶಾಸಕರು ಹಾಗೂ ಅಧಿಕಾರಿಗಳೊಂದಿಗೆ ಭೇಟಿ ಮಾಡಿ ಸಮಸ್ಯೆ ಬಗೆಹರಿಸಲಾಗುವುದು. ಇದೀಗ ಹೊಸದಾಗಿ ಕೊಠಡಿಗಳ ನಿರ್ಮಾಣವಾಗುತ್ತಿದ್ದು ಇದನ್ನು ಸದ್ಯದಲ್ಲೇ ಪ್ರಾರಂಭಿಸಲಾಗುವುದು ಎಂದು ಭರವಸೆ ನೀಡಿದರು.

ಇದೇ ವೇಳೆ ಶಾಲೆಯ ಮಕ್ಕಳಿಗೆ ಪುಸ್ತಕ, ಲೇಖನ ಸಾಮಾಗ್ರಿ ವಿತರಿಸಲಾಯಿತು. ಬಳಿಕ ಶಾಲೆಯ ಮುಖ್ಯ ಶಿಕ್ಷಕ ಮಾನಪ್ಪ ಹಾಗೂ ನಿವೃತ್ತ ಶಿಕ್ಷಕ ಗಿರೀಶ್ ಅವರಿಗೆ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷೆ ದೀಪಿಕಾ, ಕಾಂಗ್ರೆಸ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಶಬಾನಾ ಸುಲ್ತಾನ್, ಮುಖಂಡರುಗಳಾದ ಕುಸುಮ ಕೆ.ಭರತ್, ಜೀವನ್, ಮೌಸಿನಾ ಹಾಗೂ ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...