Wednesday, May 6, 2026
Wednesday, May 6, 2026

ISRO ನಮ್ಮ ವಿಜ್ಞಾನಿ ನಮ್ಮ ಹೆಮ್ಮೆ

Date:

ISRO ಚಂದ್ರಯಾನ-3 ತಂಡದಲ್ಲಿ ಬಾಳೆಹೊನ್ನೂರು ಯುವತಿ ಡಾ ಕೆ ನಂದಿನಿ
ಆಂದ್ರಪ್ರದೇಶದ ಶ್ರೀಹರಿಕೋಟಾ ಸತೀಶ್‌ ಧವನ್‌ ಉಪಗ್ರಹ ಉಡಾವಣಾ ಕೇಂದ್ರದಲ್ಲಿ ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೋ) ಶುಕ್ರವಾರ ಉಡಾವಣೆ ಮಾಡಿದ ಚಂದ್ರಯಾನ 3ರ ತಂಡದಲ್ಲಿ ಬಾಳೆಹೊನ್ನೂರು ಸಮೀಪದ ತುಪ್ಪೂರು ಗ್ರಾಮದ ಯುವತಿ ಇರುವುದು ಹೆಮ್ಮೆ ಮೂಡಿಸಿದೆ.

ಆಂದ್ರಪ್ರದೇಶದ ಶ್ರೀಹರಿಕೋಟಾ ಸತೀಶ್‌ ಧವನ್‌ ಉಪಗ್ರಹ ಉಡಾವಣಾ ಕೇಂದ್ರದಲ್ಲಿ ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೋ) ಶುಕ್ರವಾರ ಉಡಾವಣೆ ಮಾಡಿದ ಚಂದ್ರಯಾನ 3ರ ತಂಡದಲ್ಲಿ ಬಾಳೆಹೊನ್ನೂರು ಸಮೀಪದ ತುಪ್ಪೂರು ಗ್ರಾಮದ ಯುವತಿ ಇರುವುದು ಹೆಮ್ಮೆ ಮೂಡಿಸಿದೆ.

ಬಾಳೆಹೊನ್ನೂರು ಪಟ್ಟಣದಲ್ಲಿ ಕಾಫಿ ಉದ್ಯಮ, ವ್ಯವಹಾರ ನಡೆಸುತ್ತಿರುವ ಕೇಶವಮೂರ್ತಿ, ಮಂಗಳ ದಂಪತಿ ಪುತ್ರಿ ಡಾ. ಕೆ.ನಂದಿನಿ(Dr K Nandini) ಚಂದ್ರಯಾನ 3 ತಂಡದಲ್ಲಿ ಇದ್ದು ಶುಕ್ರವಾರ ನಡೆದ ಯಶಸ್ವಿ ಉಡಾವಣೆಯಲ್ಲಿ ಈಕೆಯೂ ಪಾಲ್ಗೊಂಡಿರುವುದು ಆಕೆಯ ಕುಟುಂಬಸ್ಥರು ಸೇರಿದಂತೆ ಸ್ಥಳೀಯರಲ್ಲಿ ಹರ್ಷ ಮೂಡಿದೆ.

ISRO ಡಾ.ನಂದಿನಿ ಕಳೆದ 8 ವರ್ಷಗಳಿಂದ ಬೆಂಗಳೂರಿನ ಇಸ್ರೋ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಇವರು 2019ರ ಚಂದ್ರಯಾನ 2ರ ತಂಡದಲ್ಲೂ ಭಾಗವಹಿಸಿದ್ದು, ಸತತ ಎರಡನೇ ಬಾರಿಯೂ ಕಾರ್ಯನಿರ್ವಹಿಸಿ ಬಾಳೆಹೊನ್ನೂರಿಗೆ ಕೀರ್ತಿ ತಂದಿದ್ದಾರೆ.

ಇವರು ತಮ್ಮ ಪ್ರಾಥಮಿಕ ವಿದ್ಯಾಭ್ಯಾಸವನ್ನು ಬಾಳೆಹೊನ್ನೂರಿನ ನಿರ್ಮಲಾ ಕಾನ್ವೆಂಟ್‌ನಲ್ಲಿ ಮಾಡಿ, ನಂತರ 12ನೇ ತರಗತಿಯವರೆಗೆ ಸೀಗೋಡು ಜವಾಹರ್‌ ನವೋದಯ ವಿದ್ಯಾಲಯ ದಲ್ಲಿ ವ್ಯಾಸಂಗ ಮಾಡಿದ್ದಾರೆ. ಮೂಡಬಿದ್ರೆಯ ಆಳ್ವಾಸ್‌ ವಿದ್ಯಾಸಂಸ್ಥೆಯಲ್ಲಿ ಬಿಎಸ್ಸಿ, ಎಂಎಸ್ಸಿ ವಿದ್ಯಾಭ್ಯಾಸ, ನ್ಯಾಶನಲ್‌ ಇನ್ಸಿಟ್ಯೂಟ್‌ ಆಫ್‌ ಟೆಕ್ನಾಲಜಿ ಸುರತ್ಕಲ್‌ನಲ್ಲಿ ಪೂರೈಸಿದ್ದಾರೆ. ಇದೇ ಸಂಸ್ಥೆಯಲ್ಲಿ 5 ವರ್ಷಗಳ ಪಿಎಚ್‌ಡಿ ಪೂರೈಸಿ, ನಂತರ ಬೆಂಗಳೂರು ಇಸ್ರೋದಲ್ಲಿ ಉದ್ಯೋಗದಲ್ಲಿದ್ದಾರೆ.

ನನ್ನ ಮಗಳು ಡಾ. ನಂದಿನಿ ಚಂದ್ರಯಾನ 3ರ ತಂಡದಲ್ಲಿ ವಿಜ್ಞಾನಿಯಾಗಿ ಕಾರ್ಯನಿರ್ವಹಿಸಿರುವುದು ನಮ್ಮ ಕುಟುಂಬಕ್ಕೆ ಹೆಮ್ಮೆ ತಂದಿದೆ. ದೇಶಕ್ಕಾಗಿ ಕಾರ್ಯ ನಿರ್ವಹಿಸಿದ ಮಗಳ ಕಾರ್ಯವನ್ನು ಎಷ್ಟುಕೊಂಡಾಡಿದರೂ ಸಾಲದು. ಚಂದ್ರಯಾನ 2, 3ರ ತಂಡದಲ್ಲಿ ಮಗಳು ಇರುವುದು ಇಡೀ ಊರಿಗೆ ಹೆಮ್ಮೆಯ ವಿಷಯವಾಗಿದೆ. ಶುಕ್ರವಾರ ಅವಳ ಹುಟ್ಟುಹಬ್ಬ ಸಹ ಇದ್ದು, ಇದೇ ದಿನ ಚಂದ್ರಯಾನ 3ರ ಉಡಾವಣೆ ಯಶಸ್ವಿಯಾಗಿರುವುದು ಅವಳ ಜೀವಮಾನದಲ್ಲಿ ನೆನಪಿಡುವ ವಿಷಯ. ಇಸ್ರೋದವರು ಕೈಗೊಂಡ ಕಾರ್ಯ ಯಶಸ್ವಿಯಾಗಿ, ಭಾರತಕ್ಕೆ ವಿಶ್ವದಾದ್ಯಂತ ಕೀರ್ತಿ, ಮನ್ನಣೆ ದೊರೆಯಬೇಕು ಎಂಬುದು ನಮ್ಮ ಆಶಯ

  • ಕೇಶವಮೂರ್ತಿ, ಡಾ.ನಂದಿನಿ ತಂದೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

K. R. Periyakaruppan ಒಂದೇ ಒಂದು ಮತದ ಅಂತರದಲ್ಲಿ ಸೋತ (ಮಂತ್ರಿ) ಡಿಎಂಕೆ ಅಭ್ಯರ್ಥಿ ಪೆರಿಯಾಕರುಪ್ಪನ್.

ಒಂದು ಮತ ತಾನೆ. ಎಂಬ ನಿರ್ಲಕ್ಷ್ಯ ಬಹಳ ಅಭ್ಯರ್ಥಿಗಳಲ್ಲಿದೆ. ಆದರೆ ಆ...

Ballari News ಪಾರಾಗುವ ಬಗೆ ಹೇಗೆ?. ಬಳ್ಳಾರಿ ಜಿಲ್ಲಾ ವೈದ್ಯಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ನೀಡಿರುವ ಮಾಹಿತಿ ಎಲ್ಲರಿಗೂ ಅನ್ವಯ

Ballari News ಜಿಲ್ಲೆಯಾದ್ಯಂತ ದಿನದಿಂದ ದಿನಕ್ಕೆ ಬಿಸಿಲಿನ ಪ್ರಖರತೆ ಮತ್ತು ತೀವ್ರತೆ...

S.N. Channabasappa ಪಶುವೈದ್ಯಕೀಯ ಮತ್ತು‌ ಮೀನುಗಾರಿಕೆ ವಿಜ್ಞಾನ ವಿವಿಗಳ ನೌಕರರಿಗೆ ನೀಡುತ್ತಿರುವ ಎನ್ ಪಿ ಎ ಕಡಿತ: ಶಾಸಕ ಚೆನ್ನಿ ಅವರಿಂದ ಖಂಡನೆ

S.N. Channabasappa "ಕರ್ನಾಟಕ ಪಶು ವೈದ್ಯಕೀಯ, ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ...

Summer ಬೇಸಿಗೆಯ ಬಿರುಬಿಸಿಲು!. ಜಾನುವಾರು ರಕ್ಷಣೆಗೆ ಪಶುವೈದ್ಯಕೀಯ ಕಾಲೇಜಿನ ತಜ್ಞರ ಮಾರ್ಗದರ್ಶನ – ಮಾಹಿತಿ ಇಲ್ಲಿದೆ.

Summer ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಮೇ ತಿಂಗಳಲ್ಲಿ ಬಿಸಿಲ ಧಗೆ ಹೆಚ್ಚಾಗುವ...