Shuttle Badminton ಎಳೆಯ ವಯಸ್ಸಿನಲ್ಲೇ ಷಟಲ್ ಬ್ಯಾಡ್ಮಿಂಟನ್ ನಲ್ಲಿ ಉತ್ತಮ ಸಾಧನೆ ಮಾಡಿರುವ ಸ್ನೇಹ ಎಸ್. ದೇಶದ ಪ್ರಮುಖ ಆಟಗಾರ್ತಿ ಆಗುವ ಭರವಸೆ ಮೂಡಿಸಿದ್ದಾರೆ. ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್, ಶಿವಮೊಗ್ಗ ಶಾಖೆಯ ಗುರುಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಬಿಜಿಎಸ್ ಗುರುಕುಲ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಪ್ರತಿಭೆಯಾಗಿರುವ ಸ್ನೇಹ ದ್ವಿತೀಯ ಪಿಯುಸಿ ಯಲ್ಲಿ ವ್ಯಾಸಂಗಮಾಡುತ್ತಿದ್ದು, ಆಟದ ಜೊತೆಗೆ ಓದಿನಲ್ಲಿಯೂ ಮುಂದಿದ್ದಾಳೆ.
ಶಿವಮೊಗ್ಗ ನೆಹರು ಕ್ರೀಡಾಂಗಣದ ಒಳಾಂಗಣದಲ್ಲಿ ಜಿಲ್ಲಾ ಷಟಲ್ ಬ್ಯಾಡ್ಮಿಂಟನ್ ಅಸೋಸಿಯೇಷನ್ ಶಿವಮೊಗ್ಗ.ಹಾಗೂ ಕರ್ನಾಟಕ ಷಟಲ್ ಬ್ಯಾಡ್ಮಿಂಟನ್ ಅಸೋಸಿಯೇಷನ್ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಮಹಿಳೆಯರ 19 ವರ್ಷ ವಯೋಮಿತಿ ಒಳಗಿನ ರಾಜ್ಯಮಟ್ಟದ ಷಟಲ್ ಬ್ಯಾಡ್ಮಿಂಟನ್ ನಲ್ಲಿ ಭಾಗವಹಿಸಿ ಉತ್ತಮ ಆಟದ ಪ್ರದರ್ಶನ ನೀಡಿ ಸಿಂಗಲ್ಸ್ ನಲ್ಲಿ ದ್ವಿತೀಯ ಮತ್ತು ಮಿಶ್ರ ಡಬಲ್ಸ್ ನಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಕ್ಕೂ ಹಾಗೂ ಸಂಸ್ಥೆಗೆ ಕೀರ್ತಿ ತಂದಿರುತ್ತಾಳೆ.
ಈ ಪ್ರತಿಭೆಯೂ ಶಿವಮೊಗ್ಗದ ಪುರಲೆಯ ವೆಂಕಟೇಶ ನಗರದಲ್ಲಿ ವಾಸವಿರುವ ಸುರೇಶ್ ಮತ್ತು ಶಕುಂತಲಾ ದಂಪತಿಗಳ ಪುತ್ರಿ ರಾಗಿರುತ್ತಾಳೆ. ಇವಳು ಪ್ರಸ್ತುತ ಬೆಂಗಳೂರಿನ ಸೆಲೆನೈಟ್ ಸ್ಪೋರ್ಟ್ಸ್ ಅಕಾಡೆಮಿಯಲ್ಲಿ, ಶ್ರೀ ವಿನೋದ್ ಕುಮಾರ್ ಅವರ ಗರಡಿಯಲ್ಲಿ ತರಬೇತಿಯನ್ನು ಪಡೆಯುತ್ತಿದ್ದು, ಕ್ರೀಡೆಯ ಜೊತೆಗೆ ಓದಿನಲ್ಲೂ ಪ್ರತಿಭಾನ್ವಿತ ರಾಗಿರುತ್ತಾರೆ.
Shuttle Badminton ರಾಜ್ಯಮಟ್ಟದಲ್ಲಿ ಅಷ್ಟೇ ಅಲ್ಲ ರಾಷ್ಟ್ರಮಟ್ಟದಲ್ಲಿಯೂ ಉತ್ತಮ ಸಾಧನೆ ಮಾಡಲೆಂದು ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿ ಹಾಗೂ ಆಡಳಿತ ಮಂಡಳಿಯ ಸದಸ್ಯರು, ಪ್ರಾಂಶುಪಾಲರಾದ ಸುರೇಶ್ ಎಸ್. ಎಚ್. ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಶುಭ ಹಾರೈಸಿದ್ದಾರೆ.