Minorities Welfare Department ಚಿಕ್ಕಮಗಳೂರು, ನಗರದ ಜಿಲ್ಲಾ ಪಂಚಾಯ್ತಿ ಸಮೀಪ 10 ಗುಂಟೆ ಜಾಗದಲ್ಲಿ ಮೌಲಾನಾ ಆಜಾದ್ ಅಲ್ಪಸಂಖ್ಯಾತರ ಭವನ ನಿರ್ಮಾಣಕ್ಕೆ ಸರ್ಕಾರದಿಂದ ಭೂಮಿ ಮಂಜೂರಾಗಿದೆ ಎಂದು ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಮೊಹಮ್ಮದ್ ಶಾಹೀದ್ ರಜ್ವಿ ಹೇಳಿದ್ದಾರೆ.
ಈ ಸಂಬಂಧ ಹೇಳಿಕೆಯಲ್ಲಿ ತಿಳಿಸಿರುವ ಅವರು ಹಿರೇಮಗಳೂರು ಗ್ರಾಮದ ಸರ್ವೆ ನಂ. 1019ರ 10 ಗುಂಟೆ ಪ್ರದೇಶದಲ್ಲಿ 1ಕೋಟಿ ರೂ. ವ್ಯಯಿಸಿ ಮೌಲಾನಾ ಆಜಾದ್ ಅಲ್ಪಸಂಖ್ಯಾತರ ಭವನ ನಿರ್ಮಾಣಕ್ಕಾಗಿ ಜಿಲ್ಲಾಧಿಕಾರಿಗಳು ಜಾಗವನ್ನು ಕಾಯ್ದಿರಿಸಿ ಜಮೀನನ್ನು ಮಂಜೂರು ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಅಭಿವದ್ಧಿ ನಿಗಮ ಮತ್ತು ಜಿಲ್ಲಾ ವಕ್ಫ್ ಸಲಹಾ ಸಮಿತಿ ಒಳಗೊಂಡ0ತೆ ಮೂರು ಕಾರ್ಯಾಲಯಗಳು ಕಾರ್ಯನಿರ್ವಹಿಸಲು ಸೂಕ್ತ ಸೌಲಭ್ಯ ಒದಗಿಸಲಾಗುವುದು ಎಂದು ತಿಳಿಸಿದ್ದಾರೆ.
Minorities Welfare Department, ಕ್ಷೇತ್ರದ ಶಾಸಕರೊಂದಿಗೆ ಈ ಬಗ್ಗೆ ಚರ್ಚಿಸಿ ಅತಿ ಶೀಘ್ರವಾಗಿ ಶಂಕುಸ್ಥಾಪನೆ ನೆರವೇರಿಸಲಾಗುವುದು. ಜಿಲ್ಲೆಗೆ ಅಲ್ಪಸಂಖ್ಯಾತ ಭವನ ಮತ್ತು ಜಿಲ್ಲಾ ವಕ್ಫ್ ಮಂಡಳಿ ಕಚೇರಿ ನಿರ್ಮಾಣಕ್ಕೆ ಭೂಮಿ ಮಂಜೂರು ಮಾಡಿ ಸಲು ಸಹಕರಿಸಿದ ಶಾಸಕರು ಮತ್ತು ಜಿಲ್ಲಾಧಿಕಾರಿಗಳಿಗೆ ವಕ್ಫ್ ಮಂಡಳಿ ಕೃತಜ್ಞತೆ ಸಲ್ಲಿಸಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.