Control the Use of Plastic ಪ್ಲಾಸ್ಟಿಕ್ ಮುಕ್ತ ನಗರ ಮಾಡುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸಲು ಜನಸಂದಣಿವಿರುವ ನಗರದ ಐದು ಕಡೆಗಳಲ್ಲಿ ಬೀದಿನಾಟಕ ನಡೆಸಿ ಜಾಗೃತಿ ಕಾರ್ಯಕ್ರಮ ರೂಪಿಸ ಲಾಗಿದೆ ಎಂದು ನಗರಸಭಾ ಅಧ್ಯಕ್ಷ ವರಸಿದ್ದಿ ವೇಣುಗೋಪಾಲ್ ಹೇಳಿದರು.
ಚಿಕ್ಕಮಗಳೂರು ನಗರದ ಬಸ್‌ನಿಲ್ದಾಣದಲ್ಲಿ ನಗರಸಭೆ ವತಿಯಿಂದ ಏರ್ಪಡಿಸಲಾಗಿದ್ದ ಪ್ಲಾಸ್ಟಿಕ್ ಮುಕ್ತ ಚಿಕ್ಕಮಗಳೂರು ಅಭಿ ಯಾನಕ್ಕೆ ಬುಧವಾರ ತಮಟೆ ಬಾರಿಸುವ ಮೂಲಕ ಚಾಲನೆ ಅವರು ಮಾತನಾಡಿದರು.
ಚಿಕ್ಕಮಗಳೂರು
ಜಿಲ್ಲೆಯು ಪ್ರವಾಸಿ ತಾಣವಾಗಿರುವ ಹಿನ್ನೆಲೆಯಲ್ಲಿ ಎಲ್ಲೆದರಲ್ಲಿ ಪ್ಲಾಸ್ಟಿಕ್ ಬಳಕೆ ಹೆಚ್ಚಾಗುತ್ತಿದೆ. ಇದನ್ನು ತಡೆ ಗಟ್ಟುವ ನಿಟ್ಟಿನಲ್ಲಿ ಹಲವಾರು ಬಾರಿ ನಗರಸಭೆಯಿಂದ ದಂಡ ಹಾಕಲಾಗಿದೆ. ಆದರೂ ಕೂಡಾ ನಗರದಲ್ಲಿ ಕೆಲವು ಅಂಗಡಿ ಮುಂಗಟ್ಟುಗಳಲ್ಲಿ ಪ್ಲಾಸ್ಟಿಕ್ ಬಳಕೆ ಮಾಡುತ್ತಿರುವ ಪರಿಣಾಮ ನಗರ ಸ್ವಚ್ಚತೆಗೆ ತೀವ್ರ ತೊಂದರೆಯಾಗಲಿದೆ ಎಂದರು.
ಆ ನಿಟ್ಟಿನಲ್ಲಿ ಸಾರ್ವಜನಿಕರು ಹಾಗೂ ಅಂಗಡಿ ಮುಂಗಟ್ಟುದಾರರಿಗೆ ಜಾಗೃತಿ ಮೂಡಿಸುವ ಸಲುವಾಗಿ ನಗರದ ಸಂತೆಮೈದಾನ, ಶಾಲಾಕಾಲೇಜು, ಬಸ್‌ನಿಲ್ದಾಣ ಸೇರಿದಂತೆ ಐದು ಕಡೆಗಳಲ್ಲಿ ಪ್ಲಾಸ್ಟಿಕ್‌ನಿಂದಾಗುವ ಸಮಸ್ಯೆ ಕುರಿತು ಬೀದಿನಾಟಕ ಮೂಲಕ ಮನವರಿಕೆ ಮಾಡಿಕೊಡಲಾಗುತ್ತಿದೆ ಎಂದು ಹೇಳಿದರು.
ನಿವಾಸಿಗಳು ಖುದ್ದಾಗಿ ನಿರ್ಣಯ ಕೈಗೊಳ್ಳುವ ಮೂಲಕ ಪ್ಲಾಸ್ಟಿಕ್ ಬಳಕೆಗೆ ಮುಂದಾಗಬಾರದು. ಪ್ಲಾಸ್ಟಿಕ್ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ನಾವುಗಳು ಪರ್ಯಾಯ ರೂಪಿಸಿಕೊಳ್ಳಬೇಕು. ನಗರ ವನ್ನು ಪ್ಲಾಸ್ಟಿಕ್ ನಿಂದ ಮುಕ್ತಗೊಳಿಸಲು ನಗರಸಭೆಯ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸಬೇಕು ಎಂದರು.
ನಗರಸಭಾ ಪೌರಾಯುಕ್ತ ಬಿ.ಸಿ.ಬಸವರಾಜ್ ಮಾತನಾಡಿ ಸರ್ಕಾರದ ಆದೇಶದಂತೆ ಪ್ಲಾಸ್ಟಿಕ್ ಮುಕ್ತ ಮಾಡು ವ ನಿಟ್ಟಿನಲ್ಲಿ ನಗರದ ವಿವಿಧ ಭಾಗಗಳಲ್ಲಿ ದಾಳಿ ನಡೆಸಿ ನೂರಾರು ಕೆಜಿ ಪ್ಲಾಸ್ಟಿಕ್ ವಶಪಡಿಸಿಕೊಳ್ಳಲಾಗಿದೆ. ಇತ್ತೀಚೆಗೆ ದಂಟರಮಕ್ಕಿ ಸಮೀಪ ಸುಮಾರು 200 ಕೆಜಿ ಪ್ಲಾಸ್ಟಿಕ್ ವಶಪಡಿಸಿಕೊಂಡು ಕ್ರಮ ಕೈಗೊಳ್ಳಲಾಗಿದೆ ಎಂದರು.
ಎಲ್ಲೆ0ದರಲ್ಲಿ ಎಸೆದ ಪ್ಲಾಸ್ಟಿಕ್ ಚೀಲಗಳು ಪರಿಸರವನ್ನು ನಾಶ ಮಾಡುತ್ತಿವೆ. ಪ್ಲಾಸ್ಟಿಕ್ ಕರಗುವುದಿಲ್ಲ. ಕ್ರಮೇಣ ಇದು ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವಂತಹದ್ದು. ಜೊತೆಗೆ ಕರಗದ ಪ್ಲಾಸ್ಟಿಕ್ ತ್ಯಾಜ್ಯ ಜಾನುವಾರುಗಳ ಹೊಟ್ಟೆ ಸೇರಿ ಕಂಟಕವಾಗಲಿದೆ. ಆ ನಿಟ್ಟಿನಲ್ಲಿ ದಿನನಿತ್ಯದ ಬದುಕಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡಬೇಕು ಎಂದು ಮನವಿ ಮಾಡಿದರು.
Control the Use of Plastic ಈ ಸಂದರ್ಭದಲ್ಲಿ ಕೆ.ಎಸ್.ಆರ್.ಟಿ.ಸಿ. ಮುಖ್ಯ ಅಧಿಕಾರಿ ಬಸವರಾಜ್, ಹಿರಿಯ ಆರೋಗ್ಯ ನಿರೀಕ್ಷಕರು ಗಳಾದ ಈಶ್ವರ್, ನಾಗಪ್ಪ, ರಂಗಪ್ಪ, ಕಿರಿಯ ಆರೋಗ್ಯ ನಿರೀಕ್ಷಕ ವೆಂಕಟೇಶ್ ಹಾಗೂ ಕೆ.ಎಸ್.ಆರ್.ಟಿ.ಸಿ. ಸಿಬ್ಬಂದಿಗಳು ಹಾಜರಿದ್ದರು.