Protest in Shivamogga ಶಿವಮೊಗ್ಗದಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಕ್ರೈಸ್ತ ಪಾದ್ರಿಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ರಾಜ್ಯ ಬಂಜಾರ ಯುವಕರ ಹಾಗೂ ವಿದ್ಯಾರ್ಥಿ ಸಂಘ, ಬಜರಂಗದಳ, ವಿಶ್ವ ಹಿಂದೂ ಪರಿಷತ್, ಹಿಂದೂ ಜಾಗರಣ ವೇದಿಕೆಗಳಿಂದ ಪ್ರತಿಭಟನಾ ಮೆರವಣಿಗೆ ನಡೆಯಿತು.
ವಿವಿಧ ಸಂಘ ಟನೆಗಳ ಕಾರ್ಯ ಕರ್ತರು ಮಹಾವೀರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಲೈಂಗಿಕ ದೌರ್ಜನ್ಯ ಪ್ರಕರಣದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ನಂತರ, ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ, ಜಿಲ್ಲಾಡಳಿತದ ಮೂಲಕ ಸಂಬಂಧಪಟ್ಟ ಇಲಾಖೆಗಳಿಗೆ ಮೂಲಕ ಸಂಬಂಧಪಟ್ಟ ಮನವಿ ಸಲ್ಲಿಸಿದರು.
ಅಪ್ರಾಪ್ತಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಹೊತ್ತಿರುವ ಪ್ರಾಂಶುಪಾಲನ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಧರ್ಮ ಗುರುವಿನ ಸ್ಥಾನದಲ್ಲಿದ್ದು, ಬಾಲಕಿಗೆ ಲೈಂಗಿಕ ಕಿರುಕುಳ ನೀಡುವ ಮೂಲಕ ಸಮಾಜ ತಲೆತಗ್ಗಿಸುವಂತೆ ಮಾಡಿದ್ದಾರೆ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
Protest in Shivamogga ಪ್ರತಿಭಟನೆಯಲ್ಲಿ ಮಾಜಿ ಶಾಸಕ ಕೆಬಿ ಅಶೋಕ್ ನಾಯ್ಕ ಅವರು ಪ್ರತಿಭಟನಾಕಾರರ ಪರವಾಗಿ ಮಾತನಾಡಿದರು. ಈ ರೀತಿ ಲೈಂಗಿಕ ದೌರ್ಜನ್ಯ ನೀಡಿದ ಕ್ರೈಸ್ತ ಧರ್ಮದ ಪಾದ್ರಿ ಯವರನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿದರು.
