Adichunchanagiri Education Trust ಶಿವಮೊಗ್ಗ ನಗರದ ಪ್ರತಿಷ್ಠಿತ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟಿನ ಶಿವಮೊಗ್ಗ ಶಾಖೆಯ ಗುರುಪುರದ ಬಿಜಿಎಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 8ನೇ ತರಗತಿಯಲ್ಲಿ ಓದುತ್ತಿರುವ ಅವಳಿ ಸಹೋದರರಾದ ಪುನೀತ್.ಎಸ್. ಮತ್ತು ಪವನ್.ಎಸ್. ಷಟಲ್ ಬ್ಯಾಡ್ಮಿಂಟನ್ ನಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.
ಈ ಪ್ರತಿಭಾನ್ವಿತರು 2022 – 23ನೇ ಸಾಲಿನಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸಿದ ಜಿಲ್ಲಾ ಮತ್ತು ಬೆಂಗಳೂರು ವಿಭಾಗ ಮಟ್ಟದ ಷಟಲ್ ಬ್ಯಾಡ್ಮಿಂಟನ್ ನಲ್ಲಿ ಭಾಗವಹಿಸಿ, ಚಾಕ ಚಕ್ಕತೆಯ ಆಟದ ಪ್ರದರ್ಶನ ನೀಡಿ ಸಿಂಗಲ್ಸ್ ಮತ್ತು ಡಬಲ್ಸ್ ನಲ್ಲಿ ಪ್ರಥಮ ಸ್ಥಾನ ಪಡೆದು, ರಾಜ್ಯ ಮಟ್ಟದಲ್ಲಿಯೂ ಪ್ರಥಮ ಸ್ಥಾನ ಪಡೆದು ಸಂಸ್ಥೆಗೆ ಕೀರ್ತಿ ತಂದಿರುತ್ತಾರೆ.
2023 – 2024 ನೇ ಸಾಲಿನ ಜುಲೈ 21 ರಿಂದ 26 ರ ವರೆಗೆ ಬಳ್ಳಾರಿಯ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ 15 ವರ್ಷ ವಯೋಮಿತಿಯೊಳಗಿನ ಬಳ್ಳಾರಿ ಷಟಲ್ ಬ್ಯಾಡ್ಮಿಂಟನ್ ಅಸೋಸಿಯೇಷನ್ ಮತ್ತು ಕರ್ನಾಟಕ ರಾಜ್ಯ ಷಟಲ್ ಬ್ಯಾಡ್ಮಿಂಟನ್ ಅಸೋಸಿಯೇಷನ್ ಇವರ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಷಟಲ್ ಬ್ಯಾಡ್ಮಿಂಟನ್ ನಾಕ್ ಔಟ್ ಮಾದರಿಯ ಪಂದ್ಯಾವಳಿಯಲ್ಲಿ ಪ್ರತಿಭಾನ್ವಿತ ಅವಳಿ ಸಹೋದರರಾದ ಪುನೀತ್ ಎಸ್ ಮತ್ತು ಪವನ್ ಎಸ್. ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಪ್ರತಿಭಾವಂತ ಕ್ರೀಡಾಪಟುಗಳ ಜೊತೆ ಡಬಲ್ಸ್ ನಲ್ಲಿ ಅತ್ಯುತ್ತಮ ಆಟದ ಪ್ರದರ್ಶನ ಹಾಗೂ ಬಿರುಸಿನ ಹೊಡೆತ ಮತ್ತು ಅಷ್ಟೇ ರಕ್ಷಣಾತ್ಮಕ ಆಟದ ಪ್ರದರ್ಶನ ನೀಡಿ, ದ್ವಿತೀಯ ಸ್ಥಾನ ಹಾಗೂ ಅತ್ಯಾಕರ್ಷಕ ಪಾರಿತೋಷಕ ಮತ್ತು ಬೆಳ್ಳಿಯ ಪದಕವನ್ನು ಸಂಸ್ಥೆಯ ಮಡಿಲಿಗೆ ತಂದು ಕೊಟ್ಟಿರುತ್ತಾರೆ.
15 ವರ್ಷ ವಯೋಮಿತಿ ಒಳಗಿನ ಕನಾಟಕ ರಾಜ್ಯ ಷಟಲ್ ರಾಂಕಿಂಗ್ ನಲ್ಲಿ 1ನೇ ಸ್ಥಾನದಲ್ಲಿದ್ದು, ಒರಿಸ್ಸಾದ ಭುವನೇಶ್ವರದಲ್ಲಿ ನಡೆದ ಬಾಲಕರ 34ನೇ ರಾಷ್ಟ್ರೀಯ ಸಬ್ ಜೂನಿಯರ್ ಷಟಲ್ ಬ್ಯಾಡ್ಮಿಂಟನ್ ನಲ್ಲಿ ಭಾಗವಹಿಸಿರುವುದು ಮತ್ತೊಂದು ವಿಶೇಷ.
ಜಿಲ್ಲಾ, ವಿಭಾಗ, ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಷಟಲ್ ನಲ್ಲಿ ಆಟದ ಪ್ರದರ್ಶನ ನೀಡಿ, ಸಂಸ್ಥೆಗೆ ಕೀರ್ತಿ ತಂದ ಪ್ರಭಾವಂತ ಕ್ರೀಡಾಪಟುಗಳಾಗಿರುತ್ತಾರೆ.
Adichunchanagiri Education Trust ಈ ಪ್ರತಿಭೆಗಳು ಶಿವಮೊಗ್ಗದ ಪುರಲೆಯ ವೆಂಕಟೇಶ ನಗರದಲ್ಲಿ ವಾಸವಿರುವ ಸುರೇಶ್ ಮತ್ತು ಶಕುಂತಲಾ ದಂಪತಿಗಳ ಪುತ್ರ ರಾಗಿರುತ್ತಾರೆ. ಇವರು ಪ್ರಸ್ತುತ ಬೆಂಗಳೂರಿನ ಸೆಲೆನೈಟ್ ಸ್ಪೋರ್ಟ್ಸ್ ಅಕಾಡೆಮಿಯಲ್ಲಿ, ಶ್ರೀ ವಿನೋದ್ ಕುಮಾರ್ ಅವರ ಗರಡಿಯಲ್ಲಿ ತರಬೇತಿಯನ್ನು ಪಡೆಯುತ್ತಿದ್ದು, ಕ್ರೀಡೆಯ ಜೊತೆಗೆ ಓದಿನಲ್ಲೂ ಪ್ರತಿಭಾನ್ವಿತ ರಾಗಿರುತ್ತಾರೆ.
ಈ ಕ್ರೀಡಾ ಪ್ರತಿಭೆಗಳ ಮುಂದಿನ ಕ್ರೀಡಾ ಜೀವನ ಯಶಸ್ವಿಯಾಗಲೆಂದು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರು, ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರು, ಪ್ರಾಂಶುಪಾಲರಾದ ಸುರೇಶ್ ಎಸ್. ಎಚ್. ಹಾಗೂ ಅಧ್ಯಾಪಕ ವೃಂದದವರು, ಸಿಬ್ಬಂದಿವರ್ಗ ಹಾಗೂ ವಿದ್ಯಾರ್ಥಿಗಳು ಶುಭ ಹಾರೈಸಿದ್ದಾರೆ.