Monday, September 21, 2026
Monday, September 21, 2026

Flights to Shimoga | ಶಿವಮೊಗ್ಗ ವಿಮಾನ ಹಾರಾಟ ಆ.31ರಿಂದ ಆರಂಭಉಡಾನ್ ಯೋಜನೆಯಡಿ ತಿರುಪತಿ, ಗೋವಾ, ಹೈದರಾಬಾದ್ ಗೂ ವಿಮಾನ- ಎಂ.ಬಿ.ಪಾಟೀಲ

Date:

ಶಿವಮೊಗ್ಗ ವಿಮಾನ ನಿಲ್ದಾಣ ಆಗಸ್ಟ್ 31ರಿಂದ ತನ್ನ‌ ಕಾರ್ಯಾಚರಣೆ ಆರಂಭಿಸಲಿದ್ದು ಅಂದು‌ ಮೊದಲ ವಿಮಾನದಲ್ಲಿ ಪ್ರಯಾಣಿಸುವ ಭಾಗ್ಯ ನಿರೀಕ್ಷೆಯಲ್ಲಿರುವ ಪ್ರಯಾಣಿಕರಿಗೆ ಲಭ್ಯವಾಗಲಿದೆ.

ಈ ಮುಂಚೆ ಆಗಸ್ಟ್ 11ರಿಂದ ಆರಂಭವಾಗಬೇಕಿತ್ತು. ತಾಂತ್ರಿಕ ಕಾರಣಗಳಿಂದ 31ಕ್ಕೆ ಹೋಗಿದ್ದು ಇಂಡಿಗೊ‌ ಏರ್ ಲೈನ್ಸ್ ತನ್ನ ಬುಕ್ಕಿಂಗ್ ಅನ್ನು ಆರಂಭಿಸಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ತಿಳಿಸಿದ್ದಾರೆ.

ತಿರುಪತಿಗೂ ಸಂಪರ್ಕ:
ಶಿವಮೊಗ್ಗದಿಂದ ತಿರುಪತಿ, ಗೋವಾ ಮತ್ತು ಹೈದರಾಬಾದ್ ನಗರಗಳಿಗೆ ಉಡಾನ್ ಯೋಜನೆಯಡಿ ವಿಮಾನಯಾನ ಸೇವೆ ನೀಡಲು ಮೂರು ಏರ್ ಲೈನ್ಸ್ ಸಂಸ್ಥೆಗಳಿಗೆ ಅನುಮತಿ ಸಿಕ್ಕಿದೆ ಎಂದೂ ಸಚಿವರು ತಿಳಿಸಿದ್ದಾರೆ.
ಸ್ಪೈಸ್ ಜೆಟ್, ಸ್ಟಾರ್ ಏರ್ ಲೈನ್ಸ್ ಮತ್ತು ಅಲಯನ್ಸ್ ಏರ್ ಸಂಸ್ಥೆಗಳು ಈ ರಹದಾರಿಗಳಲ್ಲಿ ವಿಮಾನ ಸಂಚಾರ ಮಾಡುವ ಸಂಬಂಧ ಕರೆದಿದ್ದ ಟೆಂಡರ್ ನಲ್ಲಿ ಭಾಗವಹಿಸಿ ಯಶಸ್ವಿಯಾಗಿವೆ.
ಸದ್ಯಕ್ಕೆ ಇನ್ನೂ ಮೂರು ತಿಂಗಳು ಹಗಲು ವೇಳೆಯ ವಿಮಾನ ಸಂಚಾರ ಮಾತ್ರ ಇರುತ್ತದೆ. ರಾತ್ರಿ ವೇಳೆ ಲ್ಯಾಂಡಿಂಗ್ ವ್ಯವಸ್ಥೆಗೆ ಸಂಬಂಧಿಸಿದ ಕಾಮಗಾರಿ ಪ್ರಗತಿಯಲ್ಲಿದ್ದು ಬೇಗನೇ ಮುಗಿಯಲಿದೆ ಎಂದು ಅವರು ವಿವರಿಸಿದ್ದಾರೆ.
ಉಡಾನ್ ಯೋಜನೆಯಡಿ ಅನುಮತಿ ಪಡೆದಿರುವ ವಿಮಾನಯಾನ ಸಂಸ್ಥೆಗಳೂ ವಿಮಾನ ಸಂಚಾರಕ್ಕೆ ಸಿದ್ಧತೆ ನಡೆಸಿದ್ದು, ನಾಗರಿಕ ವಿಮಾನಯಾನ ನಿರ್ದೇಶನಾಲಯದ ಅನುಮತಿ ಸಿಕ್ಕ ನಂತರ ಅವೂ ಕಾರ್ಯಾಚರಣೆ ನಡೆಸಲಿವೆ ಎಂದರು.
ಬಹು ನಿರೀಕ್ಷಿತ ವಿಮಾನ ಯಾನ ಸೌಕರ್ಯ ಆಗಸ್ಟ್ ಕೊನೆಗೆ ಪ್ರಯಾಣಿಕರಿಗೆ ಲಭ್ಯವಾಗಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...