Tuesday, February 3, 2026
Tuesday, February 3, 2026

Shimoga District chamber of commerce and Industry ಉದ್ಯಮಿ ಕಿಮ್ಮನೆ ಜಯರಾಂ ಅವರಿಗೆ ವಾಣಿಜ್ಯ ರತ್ನ ಪ್ರಶಸ್ತಿ

Date:

Shimoga District chamber of commerce and Industry ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಹುಬ್ಬಳ್ಳಿ ವತಿಯಿಂದ ಆಯೋಜಿಸಿದ್ದ 95ನೇ ಸಂಸ್ಥಾಪಕರ ದಿನಾಚರಣೆ ಕಾರ್ಯಕ್ರಮದಲ್ಲಿ ಶಿವಮೊಗ್ಗದ ಉದ್ಯಮಿ ಕಿಮ್ಮನೆ ಜಯರಾಮ್ ಅವರಿಗೆ ವಾಣಿಜ್ಯ ರತ್ನ ಪ್ರಶಸ್ತಿ ಪ್ರದಾನ ಮಾಡಿ ಅಭಿನಂದಿಸಲಾಯಿತು.
ವಾಣಿಜ್ಯ ರತ್ನ ಪ್ರಶಸ್ತಿಯು ಹುಬ್ಬಳ್ಳಿ ವಾಣಿಜ್ಯೋದ್ಯಮ ಸಂಸ್ಥೆಯು ನೀಡುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ ಆಗಿದ್ದು, ಶಿವಮೊಗ್ಗದ ಉದ್ಯಮಿ ಕಿಮ್ಮನೆ ಜಯರಾಮ್ ಅವರಿಗೆ ಹುಬ್ಬಳ್ಳಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನೀಡಲಾಯಿತು.
ಉದ್ಯಮಿ ಕಿಮ್ಮನೆ ಜಯರಾಮ್ ಅವರು ವೃತ್ತಿಯಿಂದ ಕೃಷಿಕರಾಗಿದ್ದು, ಆರಂಭದಲ್ಲಿ ಅಡಕೆ ವ್ಯಾಪಾರ ನಡೆಸುತ್ತಿದ್ದ ಇವರು ಪ್ರಸ್ತುತ 300 ಎಕರೆ ಕಾಫಿ ತೋಟ ಹೊಂದಿದ್ದಾರೆ. ಕೆಟಿಜಿ ಗ್ರೂಪ್ ಆಫ್ ಕಂಪನಿ ಸಂಸ್ಥಾಪಕರಾಗಿದ್ದಾರೆ. ಕಿಮ್ಮನೆ ಗುಂಡಪ್ಪಗೌಡ ಮತ್ತು ಸನ್ಸ್ ಅರೇಕಾ ನಟ್ಸ್ ಪಾಲುದಾರರಾಗಿದ್ದಾರೆ. ಶಿವಮೊಗ್ಗದಲ್ಲಿ ಅತ್ಯಾಧುನಿಕ ಸೌಕರ್ಯ ಹೊಂದಿರುವ ಕಿಮ್ಮನೆ ಗಾಲ್ಫ್ ರೆಸಾರ್ಟ್ ಮುನ್ನಡೆಸುತ್ತಿದ್ದಾರೆ.
Shimoga District chamber of commerce and Industry ವಾಣಿಜ್ಯ ರತ್ನ ಪ್ರಶಸ್ತಿ ಪುರಸ್ಕೃತ ಕಿಮ್ಮನೆ ಜಯರಾಮ್ ಅವರಿಗೆ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್, ಮಾಜಿ ಅಧ್ಯಕ್ಷ ಡಿ.ಎಂ.ಶಂಕರಪ್ಪ, ಸಹ ಕಾರ್ಯದರ್ಶಿ ಜಿ.ವಿಜಯ್‌ಕುಮಾರ್, ನಿರ್ದೇಶಕರಾದ ಇ.ಪರಮೇಶ್ವರ್, ಸುಕುಮಾರ್, ಗಣೇಶ್ ಅಂಗಡಿ ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...