Tuesday, October 13, 2026
Tuesday, October 13, 2026

Chamber Of Commerce Shivamogga ವಿಐಎಸ್ಎಲ್ ಪುನರಾರಂಭ: ಸಂಸದರ ಪಯತ್ನಕ್ಕೆ ಫಲ ಸಿಕ್ಕಿದೆ- ಎನ್.ಗೋಪಿನಾಥ್

Date:

Chamber Of Commerce ಹಲವಾರು ವರ್ಷದಿಂದ ನೆನೆಗುದಿಗೆ ಬಿದ್ದಿದ್ದ ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ಪುನರಾರಂಭಕ್ಕೆ ಅವಿರತ ಶ್ರಮ ವಹಿಸಿ ಬದ್ಧತೆಯಿಂದ ಜವಾಬ್ದಾರಿ ನಿರ್ವಹಿಸಿದ ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ ಅವರಿಗೆ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಭಿನಂದನೆ ಸಲ್ಲಿಸಿದ್ದಾರೆ.

ಮುಚ್ಚಿ ಹೋಗಲಿದ್ದ ಕಾರ್ಖಾನೆಯು ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ ಅವರ ಸತತ ಪ್ರಯತ್ನಕ್ಕೆ ಕೊನೆಗೂ ಫಲ ಸಿಕ್ಕಿದೆ. ನಿರಂತರ ಅನೇಕ ವರ್ಷಗಳಿಂದ ಕೇಂದ್ರದ ಸಚಿವರನ್ನು ಭೇಟಿ ಮಾಡಿ ಕಾರ್ಖಾನೆ ಆರಂಭಕ್ಕೆ ಬೇಕಾದ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದ್ದರು. ಶಿವಮೊಗ್ಗ ಜಿಲ್ಲೆಯ ಕೈಗಾರಿಕೆಗೆ ಪ್ರಾಮುಖ್ಯತೆ ನೀಡಿದ ಪರಿಣಾಮ ಕಾರ್ಖಾನೆ ಪುನರ್ ಆರಂಭವಾಗುತ್ತಿದೆ.

Chamber Of Commerce Shivamogga ಲೋಕಸಭೆ ಸದಸ್ಯರ ಪ್ರಯತ್ನದಿಂದ ಶಿವಮೊಗ್ಗ ವಿಮಾನ ನಿಲ್ದಾಣವು ಆರಂಭಗೊಂಡಿದೆ. ಇದೇ ತಿಂಗಳಿನಿಂದಲೇ ವಿಮಾನ ಕಾರ್ಯಾಚರಣೆಯು ಸೇವೆ ಪ್ರಾರಂಭವಾಗಲಿದೆ. ಶಿವಮೊಗ್ಗ ಜಿಲ್ಲೆಯ ಕೈಗಾರಿಕೆ ಹಾಗೂ ಉದ್ಯಮದ ದೃಷ್ಠಿಯಿಂದ ಮಹತ್ತರ ಪ್ರಯೋಜನ ಸಿಗಲಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಹೊಸ ಕೈಗಾರಿಕೆಗಳು ಸ್ಥಾಪಿಸಲು ಪೂರಕ ವಾತಾವರಣವಿದ್ದು, ಹೊಸ ಕೈಗಾರಿಕೆಗಳನ್ನು ಶಿವಮೊಗ್ಗ ಜಿಲ್ಲೆಗೆ ತರುವುದರ ಮುಖಾಂತರ ಆರ್ಥಿಕ ಸದೃಢತೆಗೆ ಸಹಕರಿಸಬೇಕು. ದೇವಕಾತಿಕೊಪ್ಪದ ಕೈಗಾರಿಕಾ ವಸಾಹತು ಸಿದ್ಧಗೊಂಡಿದ್ದು, ಕೈಗಾರಿಕೆ ಪ್ರಾರಂಭಿಸಲು ಬೇಕಾಗಿರುವ ಅವಶ್ಯಕತೆಗಳನ್ನು ಪೂರೈಸಬೇಕು. ಕೈಗಾರಿಕೆ ಸ್ಥಾಪಿಸಲು ಅನುಕೂಲ ಮಾಡಿಕೊಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್ ಹಾಗೂ ಪದಾಧಿಕಾರಿಗಳು ವಿನಂತಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Mysuru Dasara ಮೈಸೂರು ದಸರಾ ವಿದ್ಯುತ್ ದೀಪಾಲಂಕಾರಕ್ಕೆ ಸಚಿವ ಜಾರ್ಜ್ ಚಾಲನೆ

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ವಿದ್ಯುತ್‌ ದೀಪಾಲಂಕಾರಕ್ಕೆ...

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...