Tuesday, February 3, 2026
Tuesday, February 3, 2026

JCI Shivamogga ಹೆಚ್ಚು ಜನಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಿ-ಅಂಕುರ್ ಜುಂಜುನ್ವಾಲಾ

Date:

JCI Shivamogga ಪ್ಲಾಸ್ಟಿಕ್ ಮುಕ್ತ ಪರಿಸರ ನಿರ್ಮಾಣ ಮಾಡುವಲ್ಲಿ ಪ್ರತಿಯೊಬ್ಬರ ಸಹಕಾರ ಅಗತ್ಯ. ಸಾರ್ವಜನಿಕರು ಪ್ಲಾಸ್ಟಿಕ್ ಬಳಕೆ ಮಾಡುವುದನ್ನು ನಿಲ್ಲಿಸಬೇಕು. ಮಾರುಕಟ್ಟೆಗೆ ಉತ್ಪನ್ನಗಳನ್ನು ತರುವುದಕ್ಕೆ ಬಟ್ಟೆ ಬ್ಯಾಗ್ ಬಳಸಬೇಕು ಎಂದು ಜೆಸಿಐ ಶಿವಮೊಗ್ಗ ಭಾವನಾ ಅಧ್ಯಕ್ಷೆ ಪೂರ್ಣಿಮಾ ಸುನೀಲ್ ಹೇಳಿದರು.

ಸಂಚಾರ ನಿಯಮಗಳನ್ನು ಪ್ರತಿಯೊಬ್ಬರೂ ಪಾಲಿಸುವುದರಿಂದ ಅಪಘಾತ ಪ್ರಕರಣಗಳು ಕಡಿಮೆ ಆಗುತ್ತವೆ. ಸಾರ್ವಜನಿಕರು ಸುರಕ್ಷತೆ ದೃಷ್ಠಿಯಿಂದ ಹೆಲ್ಮೇಟ್ ಕಡ್ಡಾಯ ಬಳಕೆ ಸೇರಿದಂತೆ ಎಲ್ಲ ನಿಯಮಗಳನ್ನು ಪಾಲಿಸಬೇಕು. ನೋ ಪಾರ್ಕಿಂಗ್ ಸ್ಥಳದಲ್ಲಿ ವಾಹನಗಳನ್ನು ನಿಲ್ಲಿಸಬಾರದು ಎಂದರು.

JCI Shivamogga ಜೆ ಸಿ ಐ ಶಿವಮೊಗ್ಗ ಭಾವನದ ಸಂಸ್ಥೆ ವತಿಯಿಂದ ಸಾರ್ವಜನಿಕರಲ್ಲಿ ಪರಿಸರದ ಬಗ್ಗೆ ಅರಿವು ಮೂಡಿಸಲು ಗಾಂಧಿ ಬಜಾರ್ ಆರಂಭದ ರಸ್ತೆಯಲ್ಲಿ “ ನೋ ಪಾರ್ಕಿಂಗ್ ಹಾಗೂ ಪ್ಲಾಸ್ಟಿಕ್ ತ್ಯಜಿಸಿ ಪರಿಸರ ಉಳಿಸಿ” ಎಂಬ ಸ್ಲೋಗನ್ ಇರುವ ನಾಮಫಲಕವನ್ನು ಅಧ್ಯಕ್ಷೆ ಪೂರ್ಣಿಮಾ ಸುನಿಲ್ ಅವರ ಅಧ್ಯಕ್ಷತೆಯಲ್ಲಿ ಅನಾವರಣಗೊಳಿಸಲಾಯಿತು.
ರಾಷ್ಟ್ರೀಯ ಉಪಾಧ್ಯಕ್ಷ ಅಂಕುರ್ ಜುಂಜುನ್‌ವಾಲಾ ಅವರು ಜೆಸಿಐ ಶಿವಮೊಗ್ಗ ಭಾವನಾ ಸಂಸ್ಥೆಯ ಕಾರ್ಯಕ್ರಮಗಳನ್ನು ಶ್ಲಾಘಿಸಿದರು.

ಮುಂದಿನ ದಿನಗಳಲ್ಲಿ ಹೆಚ್ಚು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಸಲಹೆ ನೀಡಿದರು. ಜೆಸಿಐ ವಲಯ ಅಧ್ಯಕ್ಷ ಅನುಷ್ ಗೌಡ, ಸತೀಶ್ ಚಂದ್ರ, ದಿವ್ಯಾ ಪ್ರವೀಣ್, ಶಾರದಾ ಶೇಷಗಿರಿಗೌಡ, ಕಾರ್ಯದರ್ಶಿ ಲಲಿತಾ, ಸುನೀಲ್, ಪೊಲೀಸ್ ಸಿಬ್ಬಂದಿ, ಜೆಸಿಐ ಭಾವನಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...