Govt First Grade College ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಹೊಸಮನೆ, ಭದ್ರಾವತಿಯಲ್ಲಿ ದೈಹಿಕ ಶಿಕ್ಷಣ ವಿಭಾಗ ಮತ್ತು ಐಕ್ಯುಎಸಿ ಸಹಯೋಗದಲ್ಲಿ Unique Features of Human Beings ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.
ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಡಾ. ರೋಹನ್ ಡಿಕಾಸ್ಟ ದೈಹಿಕ ಶಿಕ್ಷಣ ನಿರ್ದೇಶಕರು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಆಯನೂರು ಇವರು “ಪ್ರತಿಯೊಂದು ಜೀವಿಯು ತನ್ನದೇ ಆದ ವಿಶಿಷ್ಟತೆಯನ್ನು ಹೊಂದಿದ್ದು ಅನನ್ಯ ಗುಣಗಳನ್ನು ಹೊಂದಿರುತ್ತದೆ. ಪ್ರತಿಯೊಂದು ಜೀವಿಯು ತನ್ನ ಇತಿಮಿತಿಗಳನ್ನು ಅರಿತು ಅದರಂತೆ ಜೀವನದಲ್ಲಿ ಯಶಸ್ಸನ್ನು ಕಾಣಬೇಕು. ತನ್ನಂತೆ ಇತರರನ್ನು ಬದುಕಲು ಬಿಡಬೇಕು” ಎಂಬ ಸಂದೇಶವನ್ನು ನೀಡಿದರು.
ಕಾರ್ಯಕ್ರಮಕ್ಕೆ ಆಗಮಿಸಿದ್ದ ಸರ್ವರನ್ನು ಸ್ವಾಗತಿಸಿದ ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀ ವಿಶ್ವನಾಥ್ ಎಂ ಡಿ ರವರು ಪ್ರಾಸ್ತಾವಿಕ ನುಡಿಗಳನ್ನಾಡುತ್ತಾ ಮಾನವ ತನ್ನ ಸುತ್ತಲಿನ ಜೀವಿಗಳಿಂದ ಕಲಿಯಬೇಕಾದ ವಿಶಿಷ್ಟ ಗುಣಗಳ ಕುರಿತು ವಿವರಿಸಿದರು. ಆಶಯ ನುಡಿಗಳನ್ನಾಡಿದ ಐಕ್ಯೂಎಸಿ ಸಂಚಾಲಕರಾದ ಡಾ. ಪ್ರಸನ್ನ ಟಿ ರವರು “ನಮ್ಮ ಸಾಮರ್ಥ್ಯದಲ್ಲಿ ನಮಗೆ ನಂಬಿಕೆ ಇರಬೇಕು. ಆತ್ಮವಿಶ್ವಾಸವನ್ನು ಬೆಳೆಸಿಕೊಂಡು ನಮಗೆ ದೊರೆಯುವ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಸರ್ವತೋಮುಖ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಬೇಕು” ಎಂದು ಕರೆ ನೀಡಿದರು.
Govt First Grade College ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ಮಂಜುನಾಥ್ ಸಕಲೇಶ್ ರವರು “ನಮ್ಮ ಸುತ್ತಲಿನವರ ಸಾಧನೆಗಳನ್ನು ಅರಿತು ಸದೃಢವಾಗಿ ನಮ್ಮ ಕಾರ್ಯ ಗಳನ್ನು ಪ್ರಾಮಾಣಿಕತೆ ಮತ್ತು ಶ್ರದ್ಧೆಯಿಂದ ಮಾಡಿದರೆ ಯಶಸ್ಸು ಖಂಡಿತ ದೊರೆಯುತ್ತದೆ” ಎಂಬ ಕಿವಿಮಾತು ಹೇಳಿದರು.
ಸಾಂಸ್ಕೃತಿಕ ವೇದಿಕೆ ಸಂಚಾಲಕರಾದ ಶ್ರೀ ಕುಮಾರ ಎನ್ ರವರು ಕಾರ್ಯಕ್ರಮಕ್ಕೆ ಆಗಮಿಸಿದ್ದ ಸರ್ವರಿಗೂ ವಂದಿಸಿದರು. ಕುಮಾರಿ ಅಪೂರ್ವ ರವರು ಪ್ರಾರ್ಥಿಸಿ ಕುಮಾರಿ ರೇವತಿಯವರು ಕಾರ್ಯಕ್ರಮವನ್ನು ನಿರೂಪಿಸಿದರು ಈ ಸಂದರ್ಭದಲ್ಲಿ ಸಿಬ್ಬಂದಿ ವರ್ಗ ಹಾಗೂ ಎಂಬತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರಿದ್ದು ಕಾರ್ಯಕ್ರಮದ ಪ್ರಯೋಜನ ಪಡೆದುಕೊಂಡರು