Friday, June 19, 2026
Friday, June 19, 2026

Post Department Shivamogga ಇನ್ನುಮುಂದೆ ಜನನ/ಮರಣ ಪ್ರಮಾಣ ಪತ್ರಗಳನ್ನ ಅಂಚೆಮೂಲಕ ಪಡೆಯಬಹುದು

Date:

Post Department Shivamogga ಇನ್ನು ಮುಂದೆ ಜನನ/ಮರಣ ಪ್ರಮಾಣ ಪತ್ರಗಳನ್ನು ಮನೆ ಬಾಗಿಲಿಗೆ ಅಂಚೆಯಣ್ಣನ ಮೂಲಕ ತಲುಪಿಸುವ ವಿಶಿಷ್ಟ ಸೇವೆಯನ್ನು ಶಿವಮೊಗ್ಗ ಅಂಚೆ ವಿಭಾಗದಲ್ಲಿ ಪರಿಚಯಿಸಲಾಗಿದೆ.

ಭಾರತೀಯ ಅಂಚೆ ಇಲಾಖೆ ಮತ್ತು ಶಿವಮೊಗ್ಗ ಮಹಾನಗರ ಪಾಲಿಕೆ ಸಹಯೋಗದಲ್ಲಿ ಈ ವಿಶಿಷ್ಟ ಸೇವೆಗೆ ಚಾಲನೆ ನೀಡಲಾಗಿದೆ.
ಪ್ರಮಾಣ ಪತ್ರಗಳನ್ನು ಮನೆ ಬಾಗಿಲಿನಲ್ಲಿ ಪಡೆಯಲು ಮಹಾನಗರ ಪಾಲಿಕೆ ಜನನ/ಮರಣ ಕೌಂಟರ್‌ನಲ್ಲಿ ನಿಗದಿತ ನಮೂನೆ ಅರ್ಜಿ ಪಡೆದು, ನಿಮ್ಮ ವಿಳಾಸವನ್ನು ನಮೂದಿಸಿ ಕೋರಿಕೆಯನ್ನು ಸಲ್ಲಿಸಬಹುದಾಗಿದೆ.

Post Department Shivamogga ಪ್ರಮಾಣ ಪತ್ರವನ್ನು ಅಂಚೆ ಇಲಾಖೆಯ ಸ್ಪೀಡ್ ಪೋಸ್ಟ್ ಮೂಲಕ ಕಳುಹಿಸಲಾಗುವುದು. ವಿಳಾಸದಾರರು ಬಟವಡೆಯ ಸಮಯದಲ್ಲಿ ರೂ. 80/-ಗಳನ್ನು ಪಾವತಿಸಿ ಜನನ/ಮರಣ ಪ್ರಮಾಣ ಪತ್ರವನ್ನು ಪಡೆಯಬಹುದಾಗಿದೆ ಎಂದು ಶಿವಮೊಗ್ಗ ಅಂಚೆ ಅಧೀಕ್ಷಕರಾದ ಜಯರಾಮ ಶೆಟ್ಟಿ. ಜಿ. ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...