ವಿಶ್ವಾದ್ಯಂತ ಆತಂಕಕ್ಕೆ ಕಾರಣವಾಗಿರುವ ಕೊರೊನಾ ವೈರಸ್ ನ ಹೊಸ ರೂಪಾಂತರಿ ಓಮಿಕ್ರಾನ್ ರಾಜ್ಯದಲ್ಲೂ ಲಗ್ಗೆಯಿಟ್ಟ ಬೆನ್ನಲ್ಲೇ ಸರ್ಕಾರ ಎಚ್ಚೆತ್ತುಕೊಂಡಿದೆ.
ವಿವಿಧ ರಾಷ್ಟ್ರಗಳಿಂದ ಇಲ್ಲಿಯವರೆಗೂ ದೇಶಕ್ಕೆ ಆಗಮಿಸಿದ 16 ಸಾವಿರ ಪ್ರಯಾಣಿಕರ ಆರ್ ಟಿ-ಪಿಸಿಆರ್ ಟೆಸ್ಟ್ ಮಾಡಲಾಗಿದೆ. ಈ ಪೈಕಿ 18 ಪ್ರಯಾಣಿಕರಲ್ಲಿ ಸೋಂಕು ದೃಡಪಟ್ಟಿದೆ. ಇವರ ಸ್ಯಾಂಪಲ್ ಅನ್ನು ಜಿನೋಮ್ ಸಿಕ್ವೆನ್ಸಿಂಗ್ ಗೆ ಕಳುಹಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಸಂಸತ್ತಿಗೆ ತಿಳಿಸಿದ್ದಾರೆ.
ದಿಲ್ಲಿಯಿಂದ ಬೆಂಗಳೂರಿಗೆ ಹಿಂದಿರುಗಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಚಿವರಾದ ಗೋವಿಂದ ಕಾರಜೋಳ, ಡಾ.ಸಿ.ಎನ್. ಅಶ್ವಥ್ ನಾರಾಯಣ್, ಡಾ.ಕೆ.ಸುಧಾಕರ್, ಆರ್, ಅಶೋಕ್ ಹಾಗೂ ತಜ್ಞ ವೈದ್ಯರು, ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಈ ವೇಳೆ ವೈರಸ್ ಹರಡುವಿಕೆ ತಡೆಗೆ ಕ್ರಮ ಜೊತೆಗೆ ಆರೋಗ್ಯ ಮೂಲಸೌಕರ್ಯ, ಚಿಕಿತ್ಸೆಗೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ವಿಸ್ತೃತ ಚರ್ಚೆ ನಡೆಸಲಾಯಿತು.
18 ಸಾವಿರ ದಾದಿಯರಿಗೆ ಒಂದು ತಿಂಗಳ ತರಬೇತಿ, ಮಕ್ಕಳ ಐಸಿಯು ಸಿದ್ಧತೆ ಸೇರಿದಂತೆ ಸಂಭವನೀಯ ಕೋವಿಡ್ 3ನೇ ಅಲೆಗೆ ವೈದ್ಯಕೀಯ ಕಾಲೇಜುಗಳಲ್ಲಿ ಅಗತ್ಯ ಸಿದ್ಧತೆಗೆ ಸೂಚಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಅವರು ತಿಳಿಸಿದ್ದಾರೆ.
ಓಮಿಕ್ರಾನ್: ತಡೆಗೆ ಮುಖ್ಯಮಂತ್ರಿ ಸಮಾಲೋಚನೆ
Date: