Wednesday, September 16, 2026
Wednesday, September 16, 2026

Rotary Shivamogga ಕೊಮ್ಮನಾಳು ಪ್ರೌಢಶಾಲೆ ಜಿಲ್ಲೆಯಲ್ಲೇ ಮಾದರಿ ಶಾಲೆಯಾಗಿದೆ- ಸತೀಶ್ಚಂದ್ರ

Date:

Rotary Shivamogga ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಲ್ಲಿ ಪ್ರತಿಭಾವಂತರಿದ್ದು, ಸೂಕ್ತ ವೇದಿಕೆಗಳನ್ನು ಒದಗಿಸುವ ಜತೆಯಲ್ಲಿ ಪ್ರತಿಭೆ ಅನಾವರಣಕ್ಕೆ ಪ್ರೋತ್ಸಾಹ ನೀಡಬೇಕು ಎಂದು ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಸತೀಶ್ ಚಂದ್ರ ಹೇಳಿದರು.

ಕೊಮ್ಮನಾಳುವಿನ ಸರ್ಕಾರಿ ಪ್ರೌಢಶಾಲೆಯಲ್ಲಿ ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಹಾಗೂ ನೋಟ್ ಪುಸ್ತಕ ಲೇಖನ ಸಾಮಾಗ್ರಿ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಕೊಮ್ಮನಾಳು ಸರ್ಕಾರಿ ಪ್ರೌಢಶಾಲೆ ಶಿವಮೊಗ್ಗ ಜಿಲ್ಲೆಯಲ್ಲಿ ಮಾದರಿ ಶಾಲೆಯಾಗಿದ್ದು, ಪ್ರತಿ ವರ್ಷ ಉತ್ತಮ ಫಲಿತಾಂಶ ನೀಡುವುದರ ಜತೆಯಲ್ಲಿ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯ್‌ಕುಮಾರ್ ಮಾತನಾಡಿ, ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಯುವಲ್ಲಿ ಇಂಟರಾಕ್ಟ್ ಕ್ಲಬ್ ಸಹಕಾರಿಯಾಗುತ್ತದೆ. ಉತ್ತಮ ವ್ಯಕ್ತಿಗಳಾಗಿ ರೂಪುಗೊಳ್ಳಲು ಕಾರಣವಾಗುತ್ತದೆ ಎಂದು ಹೇಳಿದರು.

Rotary Shivamogga ಪ್ರೌಢಶಾಲೆ ವಿಭಾಗದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಶಬ್ಧಕೋಶ ಹಾಗೂ ಆರ್ಥಿಕವಾಗಿ ಹಿಂದುಳಿದ ಮಕ್ಕಳಿಗೆ ನೋಟ್ ಪುಸ್ತಕ, ಲೇಖನ ಸಾಮಾಗ್ರಿಗಳನ್ನು ರೋಟರಿ ಮುಖಾಂತರ ನೀಡಿದರು.

ಇದೇ ಸಂದರ್ಭದಲ್ಲಿ ಇಂಟರಾಕ್ಟ್ ಕ್ಲಬ್ ನೂತನ ಅಧ್ಯಕ್ಷರಾಗಿ ಪ್ರೀತಿ, ಕಾರ್ಯದರ್ಶಿಯಾಗಿ ಶ್ರೇಯಾ ಪದಾಧಿಕಾರಿಗಳೊಂದಿಗೆ ಅಧಿಕಾರ ಸ್ವೀಕರಿಸಿದರು. ಮುಂದಿನ ಕಾರ್ಯ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಮುಖ್ಯಶಿಕ್ಷಕಿ ಜ್ಯೋತಿ ಮಾತನಾಡಿ, ಸರ್ಕಾರದ ಜತೆಯಲ್ಲಿ ಸಂಘ ಸಂಸ್ಥೆಗಳು ನೀಡುವ ನೆರವು ಅತ್ಯಂತ ಉಪಯುಕ್ತ ಆಗುತ್ತದೆ. ಈಗಾಗಲೇ ರೋಟರಿ ಸಂಸ್ಥೆಯು ನಮ್ಮ ಶಾಲೆಯನ್ನು ದತ್ತು ಪಡೆದು ಅಭಿವೃದ್ಧಿ ಕಾರ್ಯಗಳನ್ನು ನಡೆಸಿಕೊಂಡು ಬಂದಿದೆ ಎಂದು ಹೇಳಿದರು.

ಸಂಯೋಜಕ ರಾಘವೇಂದ್ರ, ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಕಿಶೋರ್ ಕುಮಾರ್, ಶಿಕ್ಷಕರು, ಗ್ರಾಮಸ್ಥರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...

B.Y.Raghavendra ಸ್ಥಳೀಯರ ಆಹವಾಲು ಕೇಳದೇ , ವಾಸ್ತವ ಸ್ಥಿತಿ ಅರಿಯದೇ ಕಸ್ತೂರಿ ರಂಗನ್ ವರದಿ ನೀಡಲಾಗಿದೆ- ಬಿ.ವೈ.ರಾಘವೇಂದ್ರ

B.Y.Raghavendra ಕಸ್ತೂರಿ ರಂಗನ್‌ ಸಮಿತಿಯ ಶಿಫಾರಸ್ಸುಗಳಲ್ಲಿ ಕೆಲವು ಮಾರ್ಪಾಡುಗೊಳಿಸಿ, ಅರಣ್ಯ ಭೂಮಿಯೆಂದು...