Monday, February 2, 2026
Monday, February 2, 2026

Kagodu Thimmappa ರಾಜಕಾರಣದ ಸವ್ಯಸಾಚಿ ‘ಕಾಗೋಡು ತಿಮ್ಮಪ್ಪ’ ಅವರಿಗೆ ಅರಸು ಪ್ರಶಸ್ತಿ ಗೌರವ

Date:

Kagodu Thimmappa 2023ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಕಾಂಗ್ರೆಸ್ ನಾಯಕ ಕಾಗೋಡು ತಿಮ್ಮಪ್ಪನವರು ಭಾಜನರಾಗಿದ್ದಾರೆ.

ಸಿಎಂ ಸಿದ್ದರಾಮಯ್ಯನವರು ಕಾಗೋಡು ತಿಮ್ಮಪ್ಪನವರನ್ನು ಅಭಿನಂದಿಸಿದ್ದಾರೆ.

“ಪ್ರಸಕ್ತ ಸಾಲಿನ ಡಿ. ದೇವರಾಜ ಅರಸು ಪ್ರಶಸ್ತಿಗೆ ಭಾಜನರಾಗಿರುವ ಹಿರಿಯರಾದ ಕಾಗೋಡು ತಿಮ್ಮಪ್ಪನವರಿಗೆ ಹಾರ್ದಿಕ ಅಭಿನಂದನೆಗಳು ಎಂದಿದ್ದಾರೆ.

Kagodu Thimmappa ದೇವರಾಜ ಅರಸು ಅವರ ಗರಡಿಯಲ್ಲಿಯೇ ಬೆಳೆದಿರುವ ತಿಮ್ಮಪ್ಪನವರು ಭೂ ಸುಧಾರಣಾ ಕಾಯ್ದೆಯಷ್ಟೇ ಕ್ರಾಂತಿಕಾರಿಯಾದ “ವಾಸಿಸುವವನನ್ನೇ ಮನೆ ಒಡೆಯ” ನನ್ನಾಗಿ ಮಾಡುವ ಕ್ರಾಂತಿಕಾರಿ ಕಾಯ್ದೆಯ ರೂವಾರಿಗಳು ಎಂದು ಮುಖ್ಯಮಂತ್ರಿಗಳು ಕೊಂಡಾಡಿದ್ದಾರೆ.

ಸಮಾಜವಾದಿ ಸಿದ್ಧಾಂತಕ್ಕೆ ತನ್ನನ್ನು ಅರ್ಪಿಸಿಕೊಂಡಿರುವ ಮಾಜಿ ಸಚಿವ ಕಾಗೋಡು ತಿಮ್ಮಪ್ಪನವರು, ಉಳುವವನನ್ನೇ ಭೂಮಿಯ ಒಡೆಯನಾಗಿ‌ ಮಾಡುವ ಭೂ ಹೋರಾಟದ ಮೂಲಕವೇ ರಾಜಕೀಯ ಜೀವನ‌ ಪ್ರವೇಶಿಸಿದವರು ಎಂದು ಹೇಳಿದ್ದಾರೆ.

ಸಾಗರ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಕಾಗೋಡು ತಿಮ್ಮಪ್ಪ ಅವರು ಆರೋಗ್ಯ, ಕಂದಾಯ ,ಸಮಾಜ ಕಲ್ಯಾಣ ಮತ್ತು ಇತರ ಖಾತೆಗಳ ಸಚಿವರಾಗಿ ಹಾಗೂ ವಿಧಾನಸಭಾ ಸಭಾಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...