Government Of Karnataka ಕಾಮಗಾರಿ ಪೂರ್ಣಗೊಳಿಸಿರುವ ಗುತ್ತಿಗೆದಾರರಿಗೆ ಬಾಕಿ ಬಿಲ್ ಪಾವತಿಸಲು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ವಿಳಂಬ ನೀತಿ ಅನುಸರಿಸುತ್ತಿದ್ದಾರೆ ಎಂದು ಆರೂಪಿಸಿ ರಾಜ್ಯಪಾಲರಿಗೆ ದೂರು ನೀಡಿರುವ ಬೆನ್ನಲ್ಲೇ ಬಿಬಿಎಂಸಿಯ 57 ಗುತ್ತಿಗೆದಾರರ ವಿರುದ್ಧ ಹೈ ಗ್ರೌಂಡ್ ಠಾಣೆಯಲ್ಲಿ ಎನ್ ಸಿ ಆರ್ ದಾಖಲಾಗಿದೆ .
ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಕಾಮಗಾರಿಗಳ ಟೆಂಡರ್, ಪ್ಯಾಕೇಜ್ ಪದ್ಧತಿ, ಪುನರ್ ಅಂದಾಜು, ಬಾಕಿ 7 ಮೊತ್ತ ಬಿಡುಗಡೆ ಮತ್ತಿತರ ವಿಷಯ ಗಳಲ್ಲಿ ಭಾರಿ ಭ್ರಷ್ಟಾ ಚಾರ ನಡೆದಿದೆ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ಮಾಡಿದ್ದ ಆರೋಪದ ತನಿಖೆಗೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್‌ದಾಸ್ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
Government Of Karnataka ಈ ಸಮಿತಿಯು ಸ್ಥಳ ಹಾಗೂ
ದಾಖಲಾತಿಗಳನ್ನು ಪರಿಶೀಲಿಸಿ, ವಿವರ ವಾದ ತನಿಖೆ ನಡೆಸಿ, ಲೋಪದೋಷ ಗಳ ಮಾಹಿತಿ ಹಾಗೂ ಅದಕೆ ಕಾರಣರಾದ ಆರೋಪಿಗಳನ್ನು ಪತ್ತೆ ಮಾಡಿ ಸಂಪೂರ್ಣ ವರದಿಯನ್ನು
ಸೂಕ್ತ ಶಿಫಾರಸ್ಸಿನೊಂದಿಗೆ 30 ದಿನಗಳ ಒಳಗೆ ಸಲ್ಲಿಸಬೇಕು ಎಂದೂ ಆದೇಶದಲ್ಲಿ ವಿವರಿಸಲಾಗಿದೆ.
ಈಗ ಗುತ್ತಿಗೆದಾರರಿಗೆ ಬಿಲ್ ಪಾವತಿಯಲ್ಲಿ ಜೇಷ್ಠತೆ ಉಲ್ಲಂಘನೆಗೆ ಕಡಿವಾಣ ಹಾಕಲು ಹೊಸ ಕ್ರಮ ಪರಿಚಯಿಸಿರುವ ಲೋಕೋಪಯೋಗಿ ಇಲಾಖೆ ಐದು ವರ್ಷಗಳಿಗೂ ಹೆಚ್ಚು ಕಾಲದಿಂದ ಬಾಕಿ ಉಳಿದಿದ್ದ ಬಿಲ್ ಗಳಿಗೆ ಮುಕ್ತಿ ನೀಡಿದೆ.