Computer Education ಚಿಕ್ಕಮಗಳೂರು ತಾಲ್ಲೂಕಿನ ಯಲಗುಡಿಗೆ ಗ್ರಾಮದಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ 2 ಕಂಪ್ಯೂಟರ್‌ಗಳನ್ನು ವಾಣಿಜ್ಯ ತೆರಿಗೆ ಇಲಾಖೆಯ ಉಪ ಆಯುಕ್ತ ಸುನಿಲ್ ಕುಮಾರ್ ಕೊಡುಗೆಯಾಗಿ ನೀಡಿದರು.
ಬಳಿಕ ಮಾತನಾಡಿದ ಅವರು ಸರ್ಕಾರಿ ಶಾಲೆಯ ಮಕ್ಕಳು ತಳಹಂತದಿ0ದಲೇ ಕಂಪ್ಯೂಟರ್ ಜ್ಞಾನ ಪಡೆಯಬೇಕು. ಆಧುನಿಕ ಯುಗದಲ್ಲಿ ಶೈಕ್ಷಣಿಕ ಅಭಿವೃದ್ಧಿಗೆ ಕಂಪ್ಯೂಟರ್ ಕಲಿಕೆ ತುಂಬಾ ಅವಶ್ಯಕತೆ ಇದೆ. ಚಿಕ್ಕ ವಯಸ್ಸಿನಿಂದಲೇ ಮಕ್ಕಳು ಕಂಪ್ಯೂಟರ್ ಕಲಿಕೆಯಾಗಲಿ ಎನ್ನುವ ಉದ್ದೇಶದಿಂದ ಈ ಶಾಲೆಗೆ ಕಂಪ್ಯೂಟರ್ ಗಳನ್ನು ಕೊಡುಗೆಯಾಗಿ ನೀಡಲಾಗಿದ್ದು ಸದುಪಯೋಗಪಡಿಸಿಕೊಳ್ಳಬೇಕೆಂದು ತಿಳಿಸಿದರು.
ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ದೇವೇಂದ್ರ ಅವರು ಮಾತನಾಡಿ ಕುಗ್ರಾಮದಲ್ಲಿರುವ ಯಲಗುಡಿಗೆ ಶಾಲೆಯು ರಾಜ್ಯ ಮಟ್ಟದಲ್ಲಿ ಹೆಸರು ಪಡೆದಿದೆ. ರಾಷ್ಟç ಮಟ್ಟದಲ್ಲಿಯೂ ಹೆಸರುವಾಸಿಯಾಗಲಿ, ಶಾಲೆಯ ಪ್ರಗತಿ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಶುಭ ಹಾರೈಸಿದರು.
Computer Education ಈ ಸಂದರ್ಭದಲ್ಲಿ ಸರ್ಕಾರಿ ಪಾಲಿಟಕ್ನಿಕ್ ಕಾಲೇಜಿನ ನಿವೃತ್ತ ಪ್ರಾಚಾರ್ಯ ಓಂಕಾರಸ್ವಾಮಿ, ಶಿಕ್ಷಕಿ ಕೆ.ಹೆಚ್.ಗೀತಾ, ಮಂಜಪ್ಪ, ಎಸ್.ಡಿ.ಎಂ.ಸಿ ಅಧ್ಯಕ್ಷ ಚಂದ್ರಶೇಖರ್, ಗ್ರಾಮ ಪಂಚಾಯಿತಿಯ ಮಾಜಿ ಉಪಾಧ್ಯಕ್ಷರಾದ ಹೊನ್ನಪ್ಪ, ಬಸವರಾಜು, ಪೋಷಕರು ಹಾಜರಿದ್ದರು.