Tuesday, October 1, 2024
Tuesday, October 1, 2024

CM Siddharamaiah ಶಿಕ್ಷಣ ನೀತಿಯನ್ನ ರಾಜ್ಯಗಳ ಮೇಲೆ ಹೇರಲಾಗದು-ಸಿದ್ಧರಾಮಯ್ಯ

Date:

CM Siddharamaiah ಬಹು ಸಂಸ್ಕೃತಿ, ಬಹುತ್ವ ಇರುವ ದೇಶದಲ್ಲಿ ಏಕರೂಪದ ಶಿಕ್ಷಣ ವ್ಯವಸ್ಥೆ ಜಾರಿ ಮಾಡಲಾಗದು. ಆದ್ದರಿಂದ ಹಳೆ ಶಿಕ್ಷಣ ಪದ್ಧತಿ ಮುಂದುವರೆಸಿ, ಹೊಸ ಶಿಕ್ಷಣ ನೀತಿ ರೂಪಿಸಲು ಪ್ರತ್ಯೇಕ ಸಮಿತಿ ರಚಿಸಲಾಗುವುದು.
ಶಿಕ್ಷಣವು ರಾಜ್ಯ ವಿಷಯವಾಗಿರುವುದರಿಂದ ಕೇಂದ್ರ ಸರ್ಕಾರ ನೀತಿ ರೂಪಿಸಲು ಸಾಧ್ಯವಿಲ್ಲ. ರಾಜ್ಯ ಸರ್ಕಾರಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ರಾಷ್ಟ್ರೀಯ ಶಿಕ್ಷಣ ನೀತಿ ರೂಪಿಸಲಾಗಿದೆ. ಶಿಕ್ಷಣ ನೀತಿಯನ್ನು ಕೇಂದ್ರ ರಾಜ್ಯಗಳ ಮೇಲೆ ಒತ್ತಾಯಪೂರ್ವಕವಾಗಿ ಹೇರಲಾಗದು.
ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು.

ಶಿಕ್ಷಣ ನೀತಿಗೆ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಮಾತನಾಡಿದರು.

ರಾಷ್ಟ್ರೀಯ ಶಿಕ್ಷಣ ನೀತಿಯ ಸಾಧಕ – ಬಾಧಕಗಳ ಕುರಿತು ಚರ್ಚಿಸಲಾಯಿತು. ರಾಜ್ಯದ ಶಿಕ್ಷಣ ನೀತಿಯ ಗುಣಮಟ್ಟವನ್ನು ಹೆಚ್ಚಿಸಲು ಸರ್ಕಾರ ಬದ್ಧವಾಗಿದೆ. ನಮ್ಮ ರಾಜ್ಯದ ಮಕ್ಕಳನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧಾತ್ಮಕವಾಗಿ ಸಿದ್ದಗೊಳಿಸಬೇಕು. ಪ್ರಾಥಮಿಕ ಶಿಕ್ಷಣದಿಂದ ಉನ್ನತ ಶಿಕ್ಷಣದ ವರೆಗೆ ಗುಣಮಟ್ಟದ ಶಿಕ್ಷಣವನ್ನು ಒದಗಿಸಲು ಸರ್ಕಾರ ಚಿಂತನೆಯನ್ನು ನಡೆಸಿದೆ ಎಂದು ತಿಳಿಸಿದರು.

“ಕರ್ನಾಟಕದ ಶಿಕ್ಷಣ ವ್ಯವಸ್ಥೆಯು ದೇಶಕ್ಕೆ ಮಾದರಿಯಾಗಿದೆ. ಅದಕ್ಕಾಗಿಯೇ ಬೆಂಗಳೂರು ಇಂದು ಐಟಿ ರಾಜಧಾನಿಯಾಗಿದೆ. ನಮ್ಮ ಶಿಕ್ಷಣ ವ್ಯವಸ್ಥೆಯಿಂದಾಗಿ ರಾಜ್ಯದ ಹಲವಾರು ಜನರು ದೇಶ – ವಿದೇಶದಲ್ಲಿ ಉತ್ತಮ ಸ್ಥಾನಗಳಲ್ಲಿದ್ದಾರೆ. ನಾವು ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರದ್ದುಗೊಳಿಸಿ, ರಾಜ್ಯ ಶಿಕ್ಷಣ ನೀತಿಯನ್ನು ಮರಳಿ ಜಾರಿಗೊಳಿಸುವ ಭರವಸೆ ನೀಡಿದ್ದೇವೆ ಮತ್ತು ಆ ಭರವಸೆಗೆ ನಾವು ಬದ್ಧರಾಗಿದ್ದೇವೆ ಎಂದರು.

CM Siddharamaiah ಉತ್ತರ ಪ್ರದೇಶ, ಮಧ್ಯಪ್ರದೇಶ, ಮಹಾರಾಷ್ಟ್ರ ಸೇರಿದಂತೆ ಬಿಜೆಪಿ ಆಡಳಿತದಲ್ಲಿರುವ ರಾಜ್ಯದಲ್ಲಿ ಇದುವರೆಗೆ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಆಗಿಲ್ಲ. ಆದರೆ, ಕರ್ನಾಟಕದಲ್ಲಿ ಎನ್‌ಇಪಿಯನ್ನು ಮೊದಲು ತರಾತುರಿಯಲ್ಲಿ ಜಾರಿಗೆ ತರಲಾಗಿದೆ. ಶಿಕ್ಷಣದಲ್ಲಿ ಯಾವುದೇ ನೀತಿಯನ್ನು ಅನುಷ್ಟಾನಕ್ಕೆ ತರುವುದೇ ಆದರೇ ಪ್ರಾಥಮಿಕ ಶಿಕ್ಷಣದಿಂದ ಆರಂಭವಾಗಬೇಕು. ಆದರೆ ಆ ಕೆಲಸ ನಮ್ಮ ರಾಜ್ಯದಲ್ಲಿ ಆಗಿಲ್ಲ. ನಮ್ಮ ರಾಜ್ಯದಲ್ಲಿ ಎನ್‌ಇಪಿಯನ್ನು ನಾವು ಮುಂದಕ್ಕೆ ಅನ್ವಯಿಸುವುದಿಲ್ಲ. ಇದಕ್ಕೆ ಸಂಬಂಧಿಸಿದಂತೆ ನಾವು ಪ್ರತ್ಯೇಕವಾಗಿ ಒಂದು ಸಮಿತಿಯನ್ನು ರಚಿಸುತ್ತೇವೆ ಎಂದು ಮಾಹಿತಿ ನೀಡಿದರು.

ಇಂದಿನ ಹೊಸ ಪೀಳಿಗೆಗೆ ಅನುಕೂಲವಾಗುವ ಶಿಕ್ಷಣ ವ್ಯವಸ್ಥೆಯನ್ನು ರೂಪಿಸುವ ಕುರಿತಾಗಿ ಇಂದಿನ ಸಭೆಯಲ್ಲಿ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಯಿತು ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shakahari Film ಶಾಖಾಹಾರಿ ಚಿತ್ರಕ್ಕೆ ಕಾನೂನು ಜಯ

Shakahari Film ಶಿವಮೊಗ್ಗದ ಕೀಳಂಬಿ ಮೀಡಿಯಾ ಲ್ಯಾಬ್ ನಿರ್ಮಿಸಿದ್ದ ಶಾಖಾಹಾರಿ...

Mahatma Gandhi ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ, ಫಲಿತಾಂಶ ಪ್ರಕಟ

Mahatma Gandhi ರಾಷ್ಟ್ರಪಿತ ,ಮಹಾತ್ಮ ಗಾಂಧೀಜಿಯವರ 155 ನೇ ಜಯಂತಿ ಅಂಗವಾಗಿ...

Yaduveer Wadiyar ಶಿವಮೊಗ್ಗ ಹಬ್ಬ ಯಶಸ್ವಿಗೊಳಿಸಿ- ಸಂಸದ ಯದುವೀರ್

Yaduveer Wadiyar ಪ್ರವಾಸೋದ್ಯಮ ಹಾಗೂ ಜಿಲ್ಲೆಯ ಉದ್ಯಮಿಗಳ ಪ್ರೋತ್ಸಾಹಿಸುವ ದೃಷ್ಟಿಯಿಂದ...

Shivamogga Cycle Club ಸೈಕಲ್ ಅಭ್ಯಾಸವು ಜನಸಾಮಾನ್ಯರ ವ್ಯಾಯಾಮಶಾಲೆ- ಎನ್.ಗೋಪಿನಾಥ್

Shivamogga Cycle Club ಸೈಕಲ್ ಅಭ್ಯಾಸ ಮಾಡುವುದರಿಂದ ಹೃದಯ ಸಂಬಂಧಿ...