ಓಮಿಕ್ರಾನ್ ವೈರಸ್ ಹಿನ್ನೆಲೆಯಲ್ಲಿ ಶಾಲೆ, ಹಾಸ್ಟೆಲ್ ಕ್ಲಸ್ಟರ್ ಹಾಗೂ ಬೆಂಗಳೂರಿನ ಅಪಾರ್ಟ್ ಮೆಂಟ್ ಕ್ಲಸ್ಟರ್ ಗಳ ನಿರ್ವಹಣೆಗೆ ಸೂಚಿಸಲಾಗಿದೆ. ಬೆಂಗಳೂರಿನಲ್ಲಿ ಮೂರು ಪ್ರಕರಣ ಪತ್ತೆಯಾದರೆ ಕ್ಲಸ್ಟರ್ ಎಂದು ಪರಿಗಣಿಸಿ ನಿರ್ವಹಣೆ ಕ್ರಮವಹಿಸಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಮೊದಲು ಸತ್ತು ಪ್ರಕರಣ ಕಂಡುಬಂದರೆ ಕ್ಲಸ್ಟರ್ ಎಂದು ಪರಿಗಣಿಸಲಾಗುತ್ತಿತ್ತು. ಈಗ ಮೂರು ಪ್ರಕರಣ ಪತ್ತೆಯಾದರೂ ಕ್ಲಸ್ಟರ್ ಎಂದು ಪರಿಗಣಿಸಿ ಅಲ್ಲಿರುವ ಎಲ್ಲರನ್ನು ಪರೀಕ್ಷಿಸುವ ಜೊತೆಗೆ ಚಿಕಿತ್ಸೆ ಕೊಡಿಸಲು ಸೂಚಿಸಲಾಗಿದೆ ಎಂದರು.
ರಾಜ್ಯದಲ್ಲಿ ಓಮಿಕ್ರಾನ್ ವೈರಸ್ ಪತ್ತೆಯಾಗಿದ್ದು, ಇಲ್ಲಿಗೆ ಹೊರ ದೇಶದಿಂದ ಬಂದವರು ನಾಪತ್ತೆಯಾಗಿದ್ದಾರೆ. ಏರ್ ಪೋರ್ಟ್ ನಲ್ಲಿ ಬ್ರಷ್ಟಾಚಾರ ಇರಬೇಕು. ಹೀಗಾಗಿಯೇ ಬಂದವರನ್ನು ಹುಡುಕಲು ಸಾಧ್ಯವಾಗುತ್ತಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯನವರು ಹೇಳಿದ್ದಾರೆ.
ಮುನ್ನೆಚರಿಕೆಯೊಂದಿಗೆ ಕೋವಿಡ್ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಬೆಳಗಾವಿಯಲ್ಲಿಯೇ ವಿಧಾನಮಂಡಲ ಅಧಿವೇಶನ ನಡೆಸಲಾಗುವುದು. ಸ್ಯಾನಿಟೈಸೇಷನ್ ಜೊತೆಗೆ ಡಬಲ್ ಡೋಸ್. ಪಡೆದವರಿಗಷ್ಟೇ ಪ್ರವೇಶ ಕಲ್ಪಿಸಲಾಗುವುದು ಎಂದು ಬೊಮ್ಮಾಯಿಯವರು ತಿಳಿಸಿದ್ದಾರೆ.
ಮೂರು ಕೋವಿಡ್ ಪ್ರಕರಣ ಪತ್ತೆ: ಒಂದು ಕ್ಲಸ್ಟರ್ ಪರಿಗಣನೆ
Date: