Friday, December 5, 2025
Friday, December 5, 2025

Morarji Residential School ಕೊಪ್ಪ ತಾಲ್ಲೂಕಿನಲ್ಲಿ ವಿದ್ಯಾರ್ಥಿಗಳ ಸಾವು: ತನಿಖೆಗೆ ಆಗ್ರಹ

Date:

Morarji Residential School ಕೊಪ್ಪ ತಾಲ್ಲೂಕಿನಲ್ಲಿ ವಿದ್ಯಾರ್ಥಿಗಳ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದ್ದು ಇದನ್ನು ಸೂಕ್ತ ತನಿಖೆ ನಡೆಸಬೇಕು ಎಂದು ದಸಂಸ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ) ಜಿಲ್ಲಾ ಸಂಚಾಲಕ ಕಬ್ಬಿಗೆರೆ ಮೋಹನ್‌ಕುಮಾರ್ ಒತ್ತಾಯಿಸಿದ್ದಾರೆ.

ಈ ಸಂಬಂಧ ಗುರುವಾರ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿರುವ ಅವರು ಕೊಪ್ಪ ತಾಲ್ಲೂಕಿನ ವಿದ್ಯಾಮಂದಿರ ವಸತಿ ಶಾಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಅನುಮಾನಕ್ಕೆ ಕಾರಣವಾಗಿದೆ ಎಂದು ತಿಳಿಸಿದ್ದಾರೆ.

Morarji Residential School ಈ ಹಿಂದೆ ಮೊರಾರ್ಜಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದು ಈ ಎರಡು ಸಾವು ಹಲವು ಅನುಮಾನಗಳಿವೆ. ಈ ಪ್ರಕರಣದ ಬಗ್ಗೆ ಇದುವರೆಗೂ ಸುಳಿವು ಸಿಕ್ಕಿರುವುದಿಲ್ಲ. ಸ್ಥಳೀಯ ಶಾಸಕರು ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ ಎಂದು ದೂರಿದ್ದಾರೆ.

ಕೂಡಲೇ ಈ ಎರಡು ವಿದ್ಯಾರ್ಥಿಗಳ ಸಾವಿನ ತನಿಖೆಗೆ ಸೂಕ್ತ ರೀತಿಯಲ್ಲಿ ನಡೆಸಬೇಕು. ಆತ್ಮಹತ್ಯೆ ಯಾವ ಕಾರಣಕ್ಕಾಗಿ ನಡೆದಿದೆ ಎಂಬುದು ಪರಿಶೀಲಿಸಿ ವಿದ್ಯಾರ್ಥಿಗಳ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಬೇಕು ಎಂದು ಒತ್ತಾಯಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...