Monday, February 2, 2026
Monday, February 2, 2026

Rotary Club Shivamogga ಶಿವಮೊಗ್ಗದಲ್ಲಿ ವಾಹನ ಚಾಲನೆ &ರಸ್ತೆ ಸುರಕ್ಷಿತೆ ಅರಿವು ಕಾರ್ಯಕ್ರಮ

Date:

Rotary Club Shivamogga ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಹಾಗೂ ಶಿವಮೊಗ್ಗ ಜಿಲ್ಲಾ ಪೊಲೀಸ್ ಸಹಯೋಗದಲ್ಲಿ ನಗರದ ಅಂಬೇಡ್ಕರ್ ಭವನದಲ್ಲಿ ಆಗಸ್ಟ್ 29ರ ಬೆಳಗ್ಗೆ 10ಕ್ಕೆ ಸುರಕ್ಷಿತ ವಾಹನ ಚಾಲನೆ ಹಾಗೂ ರಸ್ತೆ ಸುರಕ್ಷತೆ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ವತಿಯಿಂದ ಅಂಬೇಡ್ಕರ್ ಭವನದಲ್ಲಿ ಆಗಸ್ಟ್ 29ರ ಬೆಳಗ್ಗೆ 10ಕ್ಕೆ ಆಯೋಜಿಸಿರುವ ರಸ್ತೆ ಸುರಕ್ಷತೆ ಅರಿವು ಕಾರ್ಯಕ್ರಮವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಉದ್ಘಾಟಿಸುವರು. ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಅಧ್ಯಕ್ಷ ಶಿವರಾಜ್.ಎಚ್.ಪಿ. ಅಧ್ಯಕ್ಷತೆ ವಹಿಸುವರು.

ವಿಶೇಷ ಕಾರ್ಯಕ್ರಮವು ಬೆಳಗ್ಗೆ 10 ರಿಂದ ಮಧ್ಯಾಹ್ನ 1ರವರೆಗೂ ನಡೆಯಲಿದ್ದು, ರೋಟರಿ ಜಿಲ್ಲಾ ಗವರ್ನರ್ ಬಿ.ಸಿ.ಗೀತಾ, ಎಎಸ್‌ಪಿ ಅನಿಲ್‌ಕುಮಾರ್ ಎಸ್.ಭೂಮರೆಡ್ಡಿ, ಟ್ರಾಫಿಕ್ ಪೊಲೀಸ್ ವೃತ್ತ ನೀರಿಕ್ಷಕ ಸಂತೋಷ್‌ಕುಮಾರ್ ಡಿ.ಕೆ., ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಪೀಟರ್ ಸೈಮನ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸುವರು.

Rotary Club Shivamogga ರೋಟರಿ ಜಿಲ್ಲಾ ಯೋಜನಾ ಚೇರ‍್ಮನ್ ವಸಂತ್ ಹೋಬಳಿದಾರ್, ವಲಯ 11ರ ಸಹಾಯಕ ಗವರ್ನರ್ ರವಿ ಕೋಟೋಜಿ, ವಲಯ ಪ್ರತಿನಿಧಿ ಧರ್ಮೇಂದರ್ ಸಿಂಗ್, ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಕಾರ್ಯದರ್ಶಿ ಕಿರಣ್‌ಕುಮಾರ್.ಜಿ. ಪಾಲ್ಗೊಳ್ಳಲಿದ್ದಾರೆ.

ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ವಲಯ ಸಂಯೋಜಕ ರಮೇಶ್ ಎನ್. ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...