Tuesday, October 13, 2026
Tuesday, October 13, 2026

Karnataka Labor Department ಕಾರ್ಮಿಕರ ಕುಟುಂಬದ ಅರ್ಹ ಪಿಯು ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ಪಡೆಯಲು ಅರ್ಜಿ ಆಹ್ವಾನ

Date:

Karnataka Labor Department ಕರ್ನಾಟಕ ಕಾರ್ಮಿಕ ಇಲಾಖೆಯು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಾರ್ಮಿಕರ ಮಕ್ಕಳಲ್ಲಿ 2023-24 ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರಥಮ ಮತ್ತು ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಉಚಿತ ಲ್ಯಾಪ್‌ಟಾಪ್‌ಗಳನ್ನು ನೀಡಲಾಗುತ್ತಿದ್ದು, ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

Karnataka Labor Department ಆಸಕ್ತ ವಿದ್ಯಾರ್ಥಿಗಳು ನಿಗದಿತ ನಮೂನೆ ಅರ್ಜಿಯನ್ನು ಕಾರ್ಮಿಕ ಅಧಿಕಾರಿ, ಶಿವಮೊಗ್ಗ ಉಪವಿಭಾಗ, ಶಿವಮೊಗ್ಗ ಇವರ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಕಟ್ಟಡ ಕಾರ್ಮಿಕರ ನೋಂದಣಿ ಗುರುತಿನ ಚೀಟಿ, ಮಕ್ಕಳ ಆಧಾರ್ ಕಾರ್ಡ್, ವ್ಯಾಸಂಗ ದೃಢೀಕರಣ ಪತ್ರ, ಎಸ್.ಎಸ್.ಎಲ್.ಸಿ. ದೃಢೀಕೃತ ಅಂಕಪಟ್ಟಿ, ಇದುವರೆಗೆ ಯಾವುದೇ ಯೋಜನೆಯಡಿ ಲ್ಯಾಪ್‌ಟಾಪ್ ಪಡೆಯದಿರುವ ಬಗ್ಗೆ ಸ್ವಯಂದೃಢೀಕೃತ ಪತ್ರ ಇವುಗಳನ್ನು ಲಗತ್ತಿಸಿ ಸೆ.15 ರೊಳಗಾಗಿ ಇಲಾಖಾ ಕಚೇರಿಗೆ ಸಲ್ಲಿಸುವಂತೆ ಕಾರ್ಮಿಕ ಅಧಿಕಾರಿಗಳು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಇಲಾಖೆ ಕಚೇರಿ ದೂ.ಸಂ08182-248940 ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Mysuru Dasara ಮೈಸೂರು ದಸರಾ ವಿದ್ಯುತ್ ದೀಪಾಲಂಕಾರಕ್ಕೆ ಸಚಿವ ಜಾರ್ಜ್ ಚಾಲನೆ

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ವಿದ್ಯುತ್‌ ದೀಪಾಲಂಕಾರಕ್ಕೆ...

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...