Postal Life Insurance ಅಂಚೆ ಅಧೀಕ್ಷಕರು, ಶಿವಮೊಗ್ಗ ವಿಭಾಗ, ಶಿವಮೊಗ್ಗ-2 ಇವರ ವತಿಯಿಂದ ಶಿವಮೊಗ್ಗ ವಿಭಾಗದಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರ ಪ್ರತಿನಿಧಿಗಳನ್ನು ನಿಯುಕ್ತಿಗೊಳಿಸಲು ನೇರ ಸಂದರ್ಶನವನ್ನು ಏರ್ಪಡಿಸಲಾಗಿದೆ.
ಸೆ.15 ರ ಬೆಳಿಗ್ಗೆ 11 ಗಂಟೆಗೆ ಅಂಚೆ ಅಧೀಕ್ಷಕರ ಕಚೇರಿ, ಕೋಟೆ ರಸ್ತೆ, ಶಿವಮೊಗ್ಗ ವಿಭಾಗ, ಶಿವಮೊಗ್ಗ-2 ಇಲ್ಲಿ ನೇರ ಸಂದರ್ಶನ ನಡೆಯಲಿದೆ.
ಆಸಕ್ತ ಅಭ್ಯರ್ಥಿಗಳು ತಮ್ಮ ಇತ್ತೀಚಿನ ಭಾವಚಿತ್ರದೊಂದಿಗೆ ಸ್ವವಿವರ, ಶೈಕ್ಷಣಿಕ ಪ್ರಮಾಣ ಪತ್ರದ ನಕಲುಗಳೊಂದಿಗೆ ಹಾಜರಾಗಬೇಕು.
Postal Life Insurance ಅಭ್ಯರ್ಥಿಗಳು 10ನೇ ತರಗತಿ ಉತ್ತೀರ್ಣರಾಗಿರುವುದು ಕಡ್ಡಾಯವಾಗಿರುತ್ತದೆ. ಕನಿಷ್ಟ 18 ವರ್ಷ ಹಾಗೂ ಗರಿಷ್ಟ ಮಿತಿ ಇರುವುದಿಲ್ಲ. ನಿರುದ್ಯೋಗಿ ಹಾಗೂ ಸ್ವಯ ಉದ್ಯೋಗ ನಿರತ ಯುವಕರು, ವಿಮಾ ಕಂಪೆನಿಗಳ ಮಾಜಿ ಏಜೆಂಟರು ಹಾಗೂ ಸಲಹೆಗಾರರು, ಮಾಜಿ ಸೈನಿಕರು, ಅಂಗನವಾಡಿ ಕಾರ್ಯಕರ್ತೆಯರು, ಮಹಿಳಾ ಮಂಡಳಿಯ ಕಾರ್ಯಕರ್ತೆಯರು, ನಿವೃತ್ತ ಪ್ರಧಾನ ಮತ್ತು ಗ್ರಾಮ ಪಂಚಾಯ್ತಿಯ ಸದಸ್ಯರು ಹಾಗೂ ಅಂಚೆ ವಿಭಾಗದ ಮುಖ್ಯಸ್ಥರಿಗೆ ಸಮಂಜಸವೆಂದು ಕಂಡುಬಂದ ಯಾವುದೇ ಅಭ್ಯರ್ಥಿಗಳು ಆಯ್ಕೆಯಾದ ಪಕ್ಷದಲ್ಲಿ ಅವಕಾಶ ನೀಡಲಾಗುತ್ತದೆ.
