ಗುಜರಾತ್ ನ ಅಹಮದಾಬಾದ್ ವಿಶ್ವವಿದ್ಯಾಲಯದ 11ನೇ ಭಾಷಿಕ ಪದವಿ ಪ್ರಧಾನ ಸಮಾರಂಭ ನಡೆಯಿತು. ಈ ಸಮಾರಂಭಕ್ಕೆ ಆನ್ಲೈನ್ ಸಂವಾದದ ಮೂಲಕ ಅಭಿಜಿತ್ ಬ್ಯಾನರ್ಜಿಯವರು ಅಮೆರಿಕ ದಿಂದಲೇ ಭಾಗವಹಿಸಿದರು.
ಭಾರತೀಯರು ತೀವ್ರ ಸಂಕಷ್ಟದಲ್ಲಿದ್ದಾರೆ. ಹಾಗೂ ಆರ್ಥಿಕತೆ ಈಗಲೂ 2019ರ ಮಟ್ಟಕ್ಕಿಂತ ಕೆಳಗಿದೆ. ಸಣ್ಣ ವ್ಯಾಪಾರಿಗಳು ಮತ್ತಷ್ಟು ಕುಸಿದಿದ್ದಾರೆ ಎಂದು ಅರ್ಥಶಾಸ್ತ್ರಜ್ಞ ಅಭಿಜಿತ್ ಬ್ಯಾನರ್ಜಿ ತಿಳಿಸಿದ್ದಾರೆ.
ಇತ್ತೀಚಿಗಷ್ಟೇ ಪಶ್ಚಿಮ ಬಂಗಾಳಕ್ಕೆ ಅಭಿಜಿತ್ ಅವರು ಭೇಟಿ ನೀಡಿದ್ದರು. ಆ ಸಂದರ್ಭದಲ್ಲಿ ಅಲ್ಲಿ ಗಮನಿಸಿದ ಅಂಶಗಳನ್ನು ಅವರು ವಿದ್ಯಾರ್ಥಿಗಳ ಜೊತೆ ಹಂಚಿಕೊಂಡಿದ್ದಾರೆ.
ಸಮಾಜಕ್ಕೆ ವಿದ್ಯಾರ್ಥಿಗಳ ಕೊಡುಗೆ ಬೇಕಿದೆ. ಭಾರತದಲ್ಲೀಗ ತೀವ್ರ ಸಂಕಷ್ಟದ ಸ್ಥಿತಿಯಿದೆ. ನಾನು ಪಶ್ಚಿಮಬಂಗಾಳದ ಗ್ರಾಮೀಣ ಪ್ರದೇಶದಲ್ಲಿ ಕೆಲವು ಸಮಯ ಕಳೆದಿದ್ದೇನೆ. ಅಭಿವೃದ್ಧಿಯ ಕನಸು ಕಟ್ಟಿಕೊಂಡವರು ಸಂಕಷ್ಟದಲ್ಲಿದ್ದಾರೆ. ಸಣ್ಣ ವ್ಯಾಪಾರಿಗಳು ಮತ್ತಷ್ಟು ನೊಂದಿದ್ದಾರೆ. ನಾವೀಗ ತೀವ್ರ ಸಂಕಷ್ಟದಲ್ಲಿದ್ದೇವೆ ಎಂದೆನಿಸುತ್ತಿದೆ. 2019ರಲ್ಲಿ ಇದ್ದ ಆರ್ಥಿಕ ಪರಿಸ್ಥಿತಿಗೆ ಹೋಲಿಸಿದರೆ ಅದಕ್ಕಿಂತ ಮಟ್ಟದಲ್ಲಿದ್ದೇವೆ. ಎಷ್ಟು ಕೆಳಮಟ್ಟಕ್ಕೆ ಇಳಿದಿದ್ದೇವೆ ಎಂಬುದು ನಮಗೆ ತಿಳಿದಿಲ್ಲ. ಆದರೆ ತೀವ್ರ ಕುಸಿತ ಕಂಡಿದ್ದೇವೆ. ಇದಕ್ಕೆ ನಾನು ಯಾರನ್ನೂ ದೂಷಿಸುವುದಿಲ್ಲ. ನಾನು ವಿಚಾರವನ್ನು ಹೇಳುತ್ತಿದ್ದೇನೆ ಅಷ್ಟೇ ಇಂದು ನೊಬೆಲ್ ಪ್ರಶಸ್ತಿ ಪುರಸ್ಕೃತ ಅರ್ಥಶಾಸ್ತ್ರಜ್ಞ ಅಭಿಜಿತ್ ಬ್ಯಾನರ್ಜಿ ಅವರು ವಿದ್ಯಾರ್ಥಿಗಳಿಗೆ ಹೇಳಿದ್ದಾರೆ.