Siddaramaiah ರಾಜ್ಯದಲ್ಲಿ ಇತ್ತೀಚೆಗೆ ಮಾನವ- ವನ್ಯಪ್ರಾಣಿ ಸಂಘರ್ಷ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ
ಅವರು ಹಿರಿಯ ಅಧಿಕಾರಿಗಳ ಸಭೆ ನಡೆಸಿ ಚರ್ಚಿಸಿದರು.
ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರಾದ ಈಶ್ವರ ಖಂಡ್ರೆ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
Siddaramaiah ಸಭೆಯಲ್ಲಿ ಆನೆಗಳು ನಾಡಿಗೆ ಬರುವುದನ್ನು ತಡೆಯಲು ರೈಲ್ವೆ ಕಂಬಿಗಳ ತಡೆಗೋಡೆ ಹಾಗೂ ಸೌರ ವಿದ್ಯುತ್ ತಂತಿ ಬೇಲಿ ಅಳವಡಿಕೆ ಮತ್ತು ಆನೆ ಕಂದಕಗಳನ್ನ ತೊಡಲು ಬಜೆಟ್ ನಲ್ಲಿ ಅನುದಾನ ನೀಡಲಾಗಿದೆ. ಹೆಚ್ಚುವರಿ ಯಾಗಿ ನೀಡಲಾಗುವ ನೂರು ಕೋಟಿ ರೂಪಾಯಿ ವೆಚ್ಚದಲ್ಲಿ ಕಾಮಗಾರಿ ಆರಂಭಿಸಬೇಕು ಎಂದು ಸೂಚನೆ ನೀಡಿದ್ದಾರೆ. ಕಾಡು ಪ್ರಾಣಿಗಳು ನಾಡಿಗೆ ಬರುವುದನ್ನು ತಡೆಯಲು ಅರಣ್ಯದೊಳಗೆ ಅವುಗಳಿಗೆ ಸಾಕಷ್ಟು ಪ್ರಮಾಣದ ಆಹಾರ ಮತ್ತು ನೀರು ಲಭ್ಯವಾಗುವಂತೆ ಕ್ರಮ ಕೈಗೊಳ್ಳಬೇಕು .ವನ್ಯಪ್ರಾಣಿ ಗಳನ್ನು ನಿಯಂತ್ರಿಸಲು ಸ್ಪಷ್ಟ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸೂಚನೆ ನೀಡಿದ್ದಾರೆ.